ಅಮೆರಿಕ ಅಧ್ಯಕ್ಷರ ಭೇಟಿಯ ಬಳಿಕ ಇಸ್ರೇಲ್‌ಗೆ ಕಾಲಿಟ್ಟ ಬ್ರಿಟನ್ ಪ್ರಧಾನಿ ರಿಷಿ ಸುನಕ್

Date:

ಇಸ್ರೇಲ್​-ಹಮಾಸ್ ಸಂಘರ್ಷದ ನಡುವೆ ನಿನ್ನೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬಳಿಕ, ಇಸ್ರೇಲ್‌ಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಗುರುವಾರ ಭೇಟಿ ನೀಡಿದ್ದಾರೆ. ಇದೇ ವೇಳೆ ಇಸ್ರೇಲ್ ಮೇಲೆ ಹಮಾಸ್ ನಡೆಸಿರುವ ದಾಳಿಯನ್ನು ಖಂಡಿಸಿದ್ದಾರೆ.

- Advertisement -

ಇಸ್ರೇಲ್‌ಗೆ ಮಿಲಿಟರಿ ವಿಮಾನದಲ್ಲಿ ಆಗಮಿಸಿದ ಬಳಿಕ ಟ್ವೀಟ್ ಮಾಡಿರುವ ಬ್ರಿಟನ್ ಪ್ರಧಾನಿ, ‘ನಾನು ಇಸ್ರೇಲ್‌ನಲ್ಲಿದ್ದೇನೆ, ಇಸ್ರೇಲ್ ದುಃಖದಲ್ಲಿರುವ ರಾಷ್ಟ್ರ. ನಾನು ನಿಮ್ಮೊಂದಿಗಿದ್ದೇನೆ. ಇಂದು ಮತ್ತು ಸದಾಕಾಲ ಭಯೋತ್ಪಾದನೆ ಎಂಬ ದುಷ್ಟತನದ ವಿರುದ್ಧ ನಿಮ್ಮೊಂದಿಗೆ ನಿಲ್ಲುತ್ತೇನೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಮಾಸ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಮಧ್ಯಸ್ಥಿಕೆಯ ನಂತರ ಗಾಝಾ ಪಟ್ಟಿಗೆ ಸೀಮಿತ ಮಾನವೀಯ ಸರಬರಾಜುಗಳನ್ನು ತಲುಪಿಸಲು ಈಜಿಪ್ಟ್ ಒಪ್ಪಿಕೊಂಡಿದ್ದು, ಇದರ ಬೆನ್ನಲ್ಲೇ ರಿಷಿ ಸುನಕ್ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದಾರೆ.

ಜೆರುಸಲೇಮ್‌ನಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಖಾಸಗಿಯಾಗಿ ಭೇಟಿ ಮಾಡಿ, ಕೆಲ ಹೊತ್ತು ಮಾತುಕತೆ ನಡೆಸಿದರು. ಪ್ರಧಾನಿ ಭೇಟಿಗೂ ಮುನ್ನ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಭೇಟಿಯಾದರು.

ಇಸ್ರೇಲ್ ಭೇಟಿಗೂ ಮುನ್ನ ಹೇಳಿಕೆ ನೀಡಿದ್ದ ರಿಷಿ ಸುನಕ್, ‘ಇದು ಭಯಾನಕ ದಾಳಿ. ಪ್ರತಿಯೊಬ್ಬ ನಾಗರಿಕನ ಸಾವು ದುರಂತವೇ ಆಗಿದೆ. ಹಮಾಸ್‌ನ ಭೀಕರ ಕೃತ್ಯದಿಂದ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಹೇಳಿಕೆ ನೀಡಿದ್ದರು.

ಹಮಾಸ್ ನಡುವಿನ ಸಂಘರ್ಷದಲ್ಲಿ ಇಸ್ರೇಲ್​ಗೆ ಸಂಪೂರ್ಣ ಬೆಂಬಲ ಘೋಷಿಸಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಟೆಲ್ ಅವೀವ್​ಗೆ ಭೇಟಿ ನೀಡಿದ್ದರು. ಇದರ ಭಾಗವಾಗಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...