ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ಕಾಗದದ ಅರ್ಜಿಗಳು ಬಿಡುಗಡೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಅರ್ಜಿಗಳು ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ವಿಚಾರದಲ್ಲಿ ಯಾವುದೇ ಗೊಂದಲವಿದ್ದರೆ 1902 ನಂಬರ್ ಕರೆ ಮಾಡಿ. ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದ್ದು, ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಸಂಖ್ಯೆಗೆ ಮೊಬೈಲ್ ಮೂಲಕ ಎಸ್‍ಎಂಎಸ್ ಮಾಡಬಹುದು ಎಂದು ಹೇಳಿದ್ದಾರೆ.
ಸಂದೇಶ ಕಳುಹಿಸಿದ ಬಳಿಕ ಕೂಡಲೇ ಮನೆಯ ಮುಖ್ಯಸ್ಥೆಗೆ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಎಸ್‍ಎಂಎಸ್ ಸಂದೇಶ ಹೋಗುತ್ತದೆ. ಈ ಬಗ್ಗೆ ಗೊಂದಲ ಉಂಟಾದರೆ, 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ‘ಗೃಹ ಲಕ್ಷ್ಮಿ’ ಯೋಜನೆ | ನಾಳೆಯಿಂದಲೇ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸ್ಪಷ್ಟನೆ ನೀಡಿದ್ದಾರೆ.