ಭದ್ರಾ | ಘೋಷಿತ ಅನುದಾನ ಕೇಂದ್ರ ಬಿಡುಗಡೆ ಮಾಡದಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ: ಎಚ್‌ ಕೆ ಪಾಟೀಲ

Date:

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸುತ್ತೇವೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ ತಿಳಿಸಿದರು.

- Advertisement -

ವಿಧಾನಸೌಧದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರವು 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರ ನೀಡಿ, ‘ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟ ಎಲ್ಲ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟ್ರೀಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲ ಅರ್ಹತೆ ಪಡೆದಿದೆ’ ಎಂದು ತಿಳಿಸಿರುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

“ಅನುಮೋದನೆಗೊಂಡಿರುವ ರಾಷ್ಟ್ರೀಯ ಯೋಜನೆಗೆ ರಾಜಕೀಯ ಉದ್ದೇಶದಿಂದ 2023ರ ಸಾರ್ವತ್ರಿಕ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಮುಂಗಡ ಪತ್ರದ ಭಾಷಣದಲ್ಲಿ ತಾವೇ ಘೋಷಿಸಿದ ಘೋಷಣೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹಿಂದೆಟು ಹಾಕುತ್ತಿದೆ” ಎಂದರು.

ರಾಜ್ಯ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು 03.08.2024, 9.06.2024 ಹಾಗೂ 16.08.2023 ರಂದು ಬರೆದ ಪತ್ರಕ್ಕೆ ಉತ್ತರ ಬರೆದ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯ ಅನುದಾನ ನೀಡಲು ನಿರಾಕರಿಸಿದೆ.
ಷರತ್ತುಗಳಂತೆ ಎಲ್ಲ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿರುವ ಯೋಜನೆಗೆ ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ” ಎಂದು ಹೇಳಿದರು.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾವ ಪಕ್ಷದ್ದೇ ಆಗಿರಲಿ ಪಕ್ಷಪಾತ ರಹಿತವಾಗಿ ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿಜೆಪಿ ಸರ್ಕಾರ ತಿಲಾಂಜಲಿ ಇಡುತ್ತಿದೆ” ಎಂದು ಟೀಕಿಸಿದರು.

ಮಹಾದಾಯಿ ಯೋಜನೆ ಕುರಿತು ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, “ಬಿಜೆಪಿ ಅವಧಿಯಲ್ಲಿಯೇ ಮಹಾದಾಯಿ ಜಲ ವಿವಾದ ಕುರಿತು ಟ್ರಿಬ್ಯೂನಲ್ ರಚಿಸಲು ಕೋರಿಕೆ ಸಲ್ಲಿಸಲಾಗಿತ್ತು. ಆದರೆ ಟ್ರಿಬ್ಯೂನಲ್ ಅವಶ್ಯತೆ ಇಲ್ಲದಿದ್ದರೂ ಕಾಂಗ್ರೆಸ್‌ನವರು ಟ್ರಿಬ್ಯೂನಲ್‌ ರಚಿಸಿದರು ಎಂದು ಟೀಕಿಸಿರುವುದು ಅವರ ನಿರ್ಲಕ್ಷ್ಯವನ್ನು ತೋರುತ್ತದೆ” ಎಂದರು.

“ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿ ರಾಜ್ಯದ ಪ್ರತಿಷ್ಠಿತ ಈ ಮಹತ್ವದ ಯೋಜನೆಗೆ ಅಡ್ಡಗಾಲು ಹಾಕುವುದನ್ನು ಬಿಟ್ಟು ಮಂಜೂರಾತಿ ನೀಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...