ರಾಜಸ್ಥಾನದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಭಜನ್ ಲಾಲ್ ಶರ್ಮಾ: ಪ್ರಧಾನಿ ಮೋದಿ ಭಾಗಿ

Date:

ರಾಜಸ್ಥಾನದ ನಿಯೋಜಿತ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಶುಕ್ರವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ಶರ್ಮಾ ಅವರೊಂದಿಗೆ ಇತ್ತೀಚೆಗೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿದ್ದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರವ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಮೂವರಿಗೆ ಪ್ರಮಾಣ ವಚನ ಬೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಆಲ್ಬರ್ಟ್ ಹಾಲ್ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ, ಹಲವಾರು ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕಿ ವಸುಂಧರಾ ರಾಜೆ, ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಕೂಡ ಉಪಸ್ಥಿತರಿದ್ದರು.

ಸಮಾರಂಭದ ಮೊದಲು, ಶರ್ಮಾ ಅವರು ರಾಜ್ಯ ರಾಜಧಾನಿಯ ಗೋವಿಂದ್ ದೇವ್ಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಟೋಂಕ್ ರಸ್ತೆಯಲ್ಲಿರುವ ಪಿಂಜ್ರಾಪೋಲ್ ಗೋಶಾಲೆಗೆ ಭೇಟಿ ನೀಡಿ, ಜಾನುವಾರುಗಳಿಗೆ ಆಹಾರ ನೀಡಿದರು. ಈ ವೇಳೆ ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರೂ ಜೊತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಬಿಆರ್‌ಎಸ್ ಶಾಸಕ ಅನರ್ಹ; ಸ್ಪೀಕರ್ ಆದೇಶ ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್

ಬಿಆರ್‌ಎಸ್ (BRS) ಟಿಕೆಟ್‌ನಡಿ 2023ರ ವಿಧಾನಸಭಾ ಚುನಾವಣೆಯಲ್ಲಿ ಖೈರತಾಬಾದ್ ಕ್ಷೇತ್ರದಿಂದ ಗೆದ್ದು,...

ತಿಂಗಳೊಳಗೆ ಜಾರಿಯಾಗಲಿದೆ ಭಾರತ–ನ್ಯೂಜಿಲೆಂಡ್ FTA: ಏನಿದು ‘ಫ್ರೀ ಟ್ರೇಡ್ ಅಗ್ರಿಮೆಂಟ್‌’?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ‘ಮುಕ್ತ ವ್ಯಾಪಾರ ಒಪ್ಪಂದ’ (Free Trade...

ನಿಠಾರಿ ಸರಣಿ ಹತ್ಯೆ ಪ್ರಕರಣ: ಖುಲಾಸೆಯಾಗಿದ್ದ ಸುರೇಂದ್ರ ಕೋಲಿ ಅನುಮಾನಾಸ್ಪದ ಸಾವು

ದೇಶವನ್ನೇ ಬೆಚ್ಚಿಬೀಳಿಸಿದ್ದ ಭೀಕರ ನೋಯ್ಡಾದ ನಿಠಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ...