ಭವ್ಯಾ ನರಸಿಂಹಮೂರ್ತಿ ಬೆಂಬಲಿಗರಿಂದ ಸಿದ್ದರಾಮಯ್ಯ ಮನೆ ಮುಂದೆ ಧರಣಿ

Date:

  • ಯಾವುದೇ ಷರತ್ತು ಇಲ್ಲದೆ, ಕಾಂಗ್ರೆಸ್‌ಗೆ ಸೇರ್ಪಡೆಯಾದ ಪುಟ್ಟಣ್ಣ
  • ಮಂಗಳವಾರ ಸಿದ್ದರಾಮಯ್ಯ ಅವರ ಮನೆ ಎದುರು ಧರಣಿ

2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ನೀಡಬೇಕೆಂದು ಕಾಂಗ್ರೆಸ್‌ನಲ್ಲಿ ಗೊಂದಲ ಉಂಟಾಗಿದೆ. ಈಗಾಗಲೇ ಭವ್ಯಾ ನರಸಿಂಹಮೂರ್ತಿ ಸೇರಿದಂತೆ ಹಲವರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದೀಗ, ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಪುಟ್ಟಣ್ಣಗೆ ಕಾಂಗ್ರೆಸ್‌ ನಾಯಕರು ಮಣೆಹಾಕುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿದೆ. ಇದು ಕಾಂಗ್ರೆಸ್‌ನ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ.

ರಾಜಾಜಿನಗರ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯವಿತ್ತು. ಆದರೆ, ಈಗ ಕಾಂಗ್ರೆಸ್‌ ನಾಯಕರು ಪುಟ್ಟಣ್ಣನ ಬಗ್ಗೆ ಒಲವು ತೋರುತ್ತಿರುವುದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನೆ ಎದುರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಧರಣಿ ನಡೆಸಿದ್ದಾರೆ.

ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ರಾಜಾಜಿನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಧರಣಿ ನಡೆಸಿದ್ದು, ವಲಸೆ ಬಂದವರಿಗೆ ಟಿಕೆಟ್ ನೀಡಬಾರದೆಂದು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಟಿಕೆಟ್ ಆಕಾಂಕ್ಷಿಗಳನ್ನು ಸಮಾಧಾನಪಡಿಸಿದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, “ಯಾರಿಗೂ ಟಿಕೆಟ್ ನೀಡುವ ಭರವಸೆ ನೀಡಿಲ್ಲ. ಯಾವುದೇ ಷರತ್ತು ಇಲ್ಲದೆ, ಪುಟ್ಟಣ್ಣ ಅವರು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...