ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

Date:

Advertisements

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಮತ್ತು ಆಜಾದ್ ಸಮಾಜ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲು ಪಡೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಆಜಾದ್ ಅವರ ಬೆಂಗಾವಲು ವಾಹನದ ಮೇಲೆ ಕಾರಿನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಒಂದು ಗುಂಡು ಅವರ ಬೆನ್ನಿಗೆ ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಜಾದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ದಾಳಿ ನಡೆದಾಗ ಕಾರಿನೊಳಗೆ ತನ್ನ ಸಹೋದರ ಸೇರಿದಂತೆ ಐವರು ಇದ್ದೆವು. ದಾಳಿ ನಡೆಸಿದವರ ಬಗ್ಗೆ ನನಗೆ ಚೆನ್ನಾಗಿ ನೆನಪಿಲ್ಲ. ಆದರೆ ನನ್ನೊಂದಿಗೆ ಇದ್ದವರು ಅವರನ್ನು ಗುರುತಿಸಿದ್ದಾರೆ. ಅವರ ಕಾರು ಸಹರಾನ್‌ಪುರದ ಕಡೆಗೆ ಹೊರಟಿತು. ನಾವು ಯು-ಟರ್ನ್ ತೆಗೆದುಕೊಂಡೆವು” ಎಂದು ಆಜಾದ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

Advertisements

“ಭೀಮ್ ಆರ್ಮಿ ಮುಖ್ಯಸ್ಥ ಮತ್ತು ರಾಷ್ಟ್ರೀಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರ ಮೇಲೆ ಸಹರಾನ್‌ಪುರದಲ್ಲಿ ನಡೆದ ಮಾರಣಾಂತಿಕ ದಾಳಿಯು ಬಹುಜನ ಮಿಷನ್ ಆಂದೋಲನವನ್ನು ನಿಲ್ಲಿಸುವ ಹೇಡಿತನದ ಕೃತ್ಯವಾಗಿದೆ. ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಿ ಶಿಕ್ಷೆಗೊಳಪಡಿಸಬೇಕು. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಚಂದ್ರಶೇಖರ್ ಆಜಾದ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು” ಎಂದು ಭೀಮ್ ಆರ್ಮಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X