ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಹೋರಾಟವೂ ಕಾರಣ: ಸಿದ್ದರಾಮಯ್ಯ

Date:

Advertisements
  • ಭೀಮಣ್ಣ ಖಂಡ್ರೆ ಅವರ ಹೋರಾಟ-ನಾಯಕತ್ವ ಶಾಶ್ವತವಾಗಿ ಉಳಿಯಲಿದೆ
  • ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ

ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರರು. ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಉದ್ಘಾಟಿಸಿ “ಲೋಕನಾಯಕ” ಅಭಿನಂದನಾ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದರು.

“ಮಹಾತ್ಮಗಾಂಧಿಯವರ ಕರೆಗೆ ಓಗೊಟ್ಟು ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿದರು. ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಸಕ್ರಿಯರಾಗಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ರಾಜಿರಹಿತವಾಗಿ ಹೋರಾಟ ನಡೆಸಿದರು. ಇವರ ಹೋರಾಟದ ಹೆಜ್ಜೆಗಳು ಈ ಮಣ್ಣಿನಲ್ಲಿ ದಾಖಲಾಗಿ ಭೀಮಣ್ಣ ಖಂಡ್ರೆಯವರು ಸಮಾಜದ ಋಣ ತೀರಿಸಿ ಸಾರ್ಥಕ ಬದುಕನ್ನು ಸಾಗಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisements

“ಬಸವಣ್ಣನವರ ಅಪ್ಪಟ ಅನುಯಾಯಿಯಾಗಿರುವ ಭೀಮಣ್ಣ ಖಂಡ್ರೆಯವರು ವಚನ ಸಾಹಿತ್ಯವನ್ನು ಇಡೀ ರಾಜ್ಯಕ್ಕೆ ಪಸರಿಸಲು ಶ್ರಮಿಸಿದ್ದಾರೆ. ಜಾತಿ ತಾರತಮ್ಯ ಇಲ್ಲದ ಸಮ ಸಮಾಜದ ಆಶಯ ವಚನ ಸಾಹಿತ್ಯದ್ದಾಗಿದೆ. 850 ವರ್ಷಗಳ ಹಿಂದೆ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ ಮೇಲು ಕೀಳಿನ ಸಮಾಜವನ್ನು ಅಳಿಸಿ ಸಮಾನಾಂತರ ಸಮಾಜಕ್ಕೆ ಅಡಿಪಾಯ ಹಾಕಿದರು. ಈ ಪಂಪರೆಯಲ್ಲಿ ಭೀಮಣ್ಣ ಖಂಡ್ರೆ ಅವರು ಸಾಗಿ ಬಂದಿದ್ದಾರೆ” ಎಂದರು.

ಸಿದ್ದರಾಮಯ್ಯ (3)

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೇ 50ರಷ್ಟು ಮಹಿಳಾ ಮುಖ್ಯಮಂತ್ರಿಗಳು!- ಹೇಳಿಕೆಯಾಗೇ ಉಳಿಯದಿರಲಿ, ಅನುಷ್ಠಾನಕ್ಕೂ ಬರಲಿ

“ಬಸವಾದಿ ಶರಣರ ಕೆಲಸ ಮತ್ತು ಸಾಹಿತ್ಯ ಈ ಸಮಾಜದಲ್ಲಿ ಜಾತಿ ತಾರತಮ್ಯ ಇರುವವರೆಗೂ ಶಾಶ್ವತವಾಗಿ ಉಳಿಯಲಿದೆ. ಶರಣರಿಂದ ಅಂಬೇಡ್ಕರ್ ವರೆಗೂ ಮಹನೀಯರು ನಡೆಸಿದ ಹೋರಾಟದಿಂದ ರೂಪುಗೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾವು ಕಾಪಾಡಿಕೊಳ್ಳಬೇಕಾದರೆ ಸಾಮಾಜಿಕ, ಆರ್ಥಿಕ ತಾರತಮ್ಯ ಹೋಗಬೇಕು” ಎಂದು ಹೇಳಿದರು.

ಶತಮಾನೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು. ತರಳಬಾಳು ಜಗದ್ಗುರು ಸಿರಿಗೆರೆ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಆಂಧ್ರ ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಕಾನೂನು ಸಚಿವ ಎಚ್ ಕೆ ಪಾಟೀಲ್, ಇಂಧನ ಸಚಿವ ಕೆ ಜೆ ಜಾರ್ಜ್, ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X