ಭೋವಿ ಸಮುದಾಯದ ಒಬ್ಬರನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡುವೆ: ಸಿದ್ದರಾಮಯ್ಯ‌ ಭರವಸೆ

Date:

Advertisements
  • ಭೋವಿ ಮಠದಲ್ಲಿ ಮುಖ್ಯಮಂತ್ರಿಗಳಿಗೆ ಊಟ ಬಡಿಸಿದ ಸ್ವಾಮೀಜಿ
  • ಭೋವಿ ಸಮಾಜದ ಹಿತ ಕಾಯುವ ಪಕ್ಷ ನಮ್ಮದು: ಸಿದ್ದರಾಮಯ್ಯ

ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು ಕೆಪಿಎಸ್‌ಸಿ  ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬಾಗಲಕೋಟೆಯಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಭೋವಿ ಜನಾಂಗದ ಕಸುಬಾದ ಕಲ್ಲು ಹೊಡೆಯುವ ಮೂಲಕ ಭೋವಿ ಸಮುದಾಯದ ಕುಲಗುರು ಶರಣಬಸವ ಅಪ್ಪಂಗಳ್ ಅವರ ಕುಟೀರವನ್ನು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

“ಭೋವಿ ಅಭಿವೃದ್ಧಿ ನಿಗಮ ಮಾಡುವ ಭರವಸೆ ನಾನು ನೀಡಿದ್ದೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಅಭಿವೃದ್ಧಿ ನಿಗಮ ಮಾಡಿದೆ. ಈಗಲೂ ನಿಮ್ಮ ಬೇಡಿಕೆ ಈಡೇರಿಸಲು ನಾನು ಸಿದ್ದ. ಭೋವಿ ಸಮಾಜದ ಹಿತ ಕಾಯುವ ಪಕ್ಷ ನಮ್ಮದು. ನಾನು ಸಮುದಾಯಕ್ಜೆ ಆರ್ಥಿಕ ಶಕ್ತಿ ನೀಡುತ್ತೇನೆ. ನಿಮ್ಮ ಆಶೀರ್ವಾದ ನಮಗಿರಲಿ. ನಾನು ಸಿದ್ದರಾಮೇಶ್ವರರ ವಚನಗಳಲ್ಲಿ, ಆಶಯಗಳಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಆತುರವಾಗಿ ಕಾಂತರಾಜ ವರದಿ ಸ್ವೀಕಾರ ಏಕೆ: ಸಿದ್ದರಾಮಯ್ಯರನ್ನು ಪ್ರಶ್ನಿಸಿದ ಆರ್‌ ಅಶೋಕ

“ಬಸವಣ್ಣನವರಿಗಿಂತ ಮೊದಲು ಧರ್ಮ ಬೋಧನೆ ಜನರ ಭಾಷೆಯಲ್ಲಿ ಆಗುತ್ತಿರಲಿಲ್ಲ. ಶರಣರು ಬಂದ ಬಳಿಕ ಜನರ ಭಾಷೆಯಲ್ಲಿ ಧಾರ್ಮಿಕ ಬೋಧನೆ ಶುರುವಾಯಿತು. ಜನರಿಗಾಗಿ ಧರ್ಮ ಇರುವುದು. ಧರ್ಮಕ್ಕಾಗಿ ನಾವು ಇರುವುದಲ್ಲ ಎಂದು ಸ್ಪಷ್ಟಪಡಿಸಿ ಮೌಢ್ಯ ಕಂದಾಚಾರಗಳ ಜಾತಿಯನ್ನು ಬಿಡಬೇಕು ಎನ್ನುವುದು ಶರಣರ, ವಚನಕಾರರ ಆಶಯವಾಗಿತ್ತು. ಇದನ್ನು ಆಚರಿಸುವವರೇ ನಿಜ ಶರಣರು” ಎಂದು ಹೇಳೀದರು.

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ, ಸಚಿವ ಶಿವರಾಜ ತಂಗಡಗಿ, ಶಾಸಕ  ಮಾನಪ್ಪ ವಜ್ಜಲ್ ಸೇರಿದಂತೆ ಹಲವಾರು ಶಾಸಕರು, ಮಾಜಿ ಶಾಸಕರುಗಳು ಮತ್ತು ಭೋವಿ, ಕೊರಮ, ಕೊರಚ ಸಮುದಾಯಗಳ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X