ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಭೂಮಿ ಪೂಜೆ

Date:

ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮಾತೃಭಾಷೆಯಲ್ಲಿ ಮಾತನಾಡುವುದು ಹೆಮ್ಮೆಯ ಸಂಗತಿಯಾಗಬೇಕು. ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣ ಕರ್ಣಾಟಕದಲ್ಲಿದೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯ ಹೊರತು ಕೀಳರಿಮೆ ಅಗತ್ಯವಿಲ್ಲ” ಎಂದರು.

“ಕರ್ನಾಟಕದಲ್ಲಿ ವಾಸ ಮಾಡುವವರು ಕನ್ನಡ ಕಲಿಯಬೇಕು. ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ. ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲರೂ ಕನ್ನಡವನ್ನು ಕಲಿಯಲೇಬೇಕು. ಹಾಗೆಂದು ನಾವು ಸುಮ್ಮನಿರುವಂತಿಲ್ಲ. ಕನ್ನಡಿಗರು ದುರಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿ ದುರಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

“ನವೆಂಬರ್ ಒಂದರೊಳಗೆ ಈ ಕಾಮಗಾರಿ ಪೂರ್ಣಗೊಳಬೇಕು. ಭುವನೇಶ್ವರಿ ತಾಯಿ ಎಲ್ಲರಿಗೂ ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಪೂರ್ತಿ ಕೊಡಲಿ ಎಂದು ಆಶಿಸುತ್ತೇನೆ ಎಂದರು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ. ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ. ಅನೇಕ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಿದ್ದೇವೆ. ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ನಾನು ಭಾವಿಸಿದ್ದೇನೆ” ಎಂದರು.

“2023, ನವೆಂಬರ್ 01 ರಂದು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳ ತುಂಬಿವೆ. ಈ ಸಂದರ್ಭದಲ್ಲಿ ಇಡಿ ವರ್ಷ ಕರ್ನಾಟಕ ಸಂಭ್ರಮ ಎಂಬ ಹೆಸರಿನಡಿ ಹೆಸರಾಯಿತು ‘ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯ ವನ್ನು ಇಟ್ಟು ಇಡೀ ವರ್ಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನವೆಂಬರ್ 01 2023 ರಂದು ಹಂಪಿಯಿಂದ ಕಾರ್ಯಕ್ರಮ ಪ್ರಾರಂಭವಾಗಿತ್ತು. ಗದಗಿನಲ್ಲಿಯೂ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಾಮಕರಣವಾದ ನಂತರ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಅಲ್ಲಿಗೆ ಭೇಟಿ ನೀಡಿದ್ದರು. ಅವರ ಕಾಲದಲ್ಲಿಯೇ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಅಲ್ಲಿಯವರೆಗೆ ಮೈಸೂರು ರಾಜ್ಯ ಎಂದಿತ್ತು. ತಾಯಿ ಭುವನೇಶ್ವರಿಯ ಪೂಜೆ ಯನ್ನು ಬಹಳ ವರ್ಷಗಳಿಂದ ರಾಜಮಹಾರಾಜರು ಮಾಡಿಕೊಂಡು ಬರುತ್ತಿದ್ದಾರೆ. ಕರ್ನಾಟಕದಲ್ಲಿಯೂ ತಾಯಿ ಭುವನೇಶ್ವರಿಯ ಪೂಜೆ ಮಾಡುತ್ತೇವೆ. ಏಕೀಕರಣದ ನಂತರ ಅದಕ್ಕೂ ಮುನ್ನವೇ ಪೂಜೆ ಮಾಡಿ ಗೌರವಿಸಿ, ಸ್ಮರಿಸುವ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕರು ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...