ಛತ್ತೀಸ್‌ಗಢ ಮದ್ಯ ಹಗರಣ: ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಂಧನ

Date:

ಛತ್ತೀಸ್‌ಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಹಾಗೆಯೇ ಶುಕ್ರವಾರ ಮಾಜಿ ಸಿಎಂ ಅವರ ಆವರಣದಲ್ಲಿ ಇಡಿ ಶೋಧ ನಡೆಸಿದೆ.

- Advertisement -

ಈ ದಾಳಿ ಬೆನ್ನಲ್ಲೇ ಭೂಪೇಶ್ ಬಘೇಲ್ ಅವರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. “ಇಡಿ ಬಂದಿದೆ. ಇಂದು ವಿಧಾನಸಭಾ ಅಧಿವೇಶನದ ಕೊನೆಯ ದಿನ. ಅದಾನಿಗಾಗಿ ತಮ್ನಾರ್‌ನಲ್ಲಿ ಮರಗಳನ್ನು ಕಡಿಯುತ್ತಿರುವ ವಿಷಯವನ್ನು ಇಂದು ಪ್ರಸ್ತಾಪಿಸಬೇಕಿತ್ತು. ಆದರೆ ಸಾಹೇಬರು(ಪ್ರಧಾನಿ ನರೇಂದ್ರ ಮೋದಿ) ಇಡಿಯನ್ನು ಭಿಲಾಯಿ ನಿವಾಸಕ್ಕೆ ಕಳುಹಿಸಿದ್ದಾರೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಛತ್ತೀಸ್‌ಗಢ ಮದ್ಯ ಹಗರಣ | ಕಾಂಗ್ರೆಸ್ ಶಾಸಕ ಕವಾಸಿ ಲಖ್ಮಾ ಬಂಧನ

ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳು ಸೇರಿ 2019 ಮತ್ತು 2022ರ ನಡುವೆ ಛತ್ತೀಸ್‌ಗಢದಲ್ಲಿ ಮದ್ಯ ಮಾರಾಟದಿಂದ ಸುಮಾರು 2,161 ಕೋಟಿ ರೂ.ಗಳನ್ನು ಅಕ್ರಮವಾಗಿ ಸಂಗ್ರಹಿಸುವ ಯೋಜನೆಯನ್ನು ನಡೆಸಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಪುರಾವೆಗಳು ದೊರೆತಿದ್ದು ಈ ಹಿನ್ನೆಲೆ ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಂಧನ ಮಾಡಲಾಗಿದೆ ಎಂದು ವರದಿಯಾಗಿದೆ.

ಇನ್ನು ಮಾಜಿ ಸಿಎಂ ಬಘೇಲ್ ನಿವಾಸಕ್ಕೆ ಇಡಿ ದಾಳಿ ಮಾಡಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನಿವಾಸದ ಹೊರಗೆ ಜಮಾಯಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...