ಬೀದರ್ | ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Date:

  • ಭಾಲ್ಕಿ ಕ್ಷೇತ್ರದ ಹಾಲಿ ಕಾಂಗ್ರೆಸ್‌ ಶಾಸಕ ಈಶ್ವರ್‌ ಖಂಡ್ರೆ ಕಿಡಿ
  • ಬಿಜೆಪಿ ಬೆಂಬಲಿತ ಮೂವರು ಆರೋಪಿಗಳಿಂದ ಹಲ್ಲೆ ಆರೋಪ

ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ ಪರವಾಗಿ ಪ್ರಚಾರ ಮಾಡುತ್ತಿದ್ದ ಕಾರ್ಯಕರ್ತನಿಗೆ ಚಾಕು ಇರಿದು ಗಾಯಗೊಳಿಸಿರುವ ಘಟನೆ ಭಾಲ್ಕಿ ಪಟ್ಟಣದಲ್ಲಿ ಶನಿವಾರ ತಡರಾತ್ರಿ ನಡೆದಿದ್ದು, ಗಾಯಗೊಂಡ ಯುವಕನನ್ನು ಹೈದರಾಬಾದ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಗಣೇಶ ಶಾಲಿವಾನ ಯರಬಾಗೆ (23) ಎಂಬ ಯುವಕ ಭಾಲ್ಕಿ ಪಟ್ಟಣದ ಇಶಾನ್ ಕಾಲೋನಿಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾಗ ಸಂಜೆ 6 ಗಂಟೆ ಸುಮಾರಿಗೆ ಮೂವರು ಯುವಕರು ಗಣೇಶ ಶಾಲಿವಾನ್ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಸಾರ್ವಜನಿಕ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಔರಾದ್ ಮೂಲದ ರಾಬೀನ್ ಸೂರ್ಯಕಾಂತ್, ಭಾಲ್ಕಿ ಪಟ್ಟಣದ ನಿವಾಸಿ ಸಂಗಮೇಶ ಸ್ವಾಮಿ ಮತ್ತು ಖಟಕ್ ಚಿಂಚೋಳಿ ಗ್ರಾಮದ ಸಂಗಮೇಶ ಚನಶೆಟ್ಟಿ ಎಂಬ ಆರೋಪಿಗಳು ಗಣೇಶ್‌ ಮೇಲೆ ಹಲ್ಲೆ ನಡೆಸಿ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? : ಅಗೌರವದಿಂದ ಮಾತನಾಡುವುದನ್ನು ನಿಲ್ಲಿಸಿ; ರೇವಣ್ಣಗೆ ಶಿವಲಿಂಗೇಗೌಡ ಎಚ್ಚರಿಕೆ

ಆಸ್ಪತ್ರೆಗೆ ಶಾಸಕ ಈಶ್ವರ ಖಂಡ್ರೆ ಭೇಟಿ

ವಿಷಯ ತಿಳಿದ ತಕ್ಷಣ ಶಾಸಕ ಈಶ್ವರ ಖಂಡ್ರೆ ಭಾಲ್ಕಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ತಮ್ಮ ಪಕ್ಷದ ಕಾರ್ಯಕರ್ತನ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸೋಲಿನ ಭಯದಿಂದ ಬಿಜೆಪಿಯವರು ಈ ರೀತಿ ಗುಂಡಾವರ್ತನೆ ಮಾಡುತ್ತಿದ್ದಾರೆ. ಜನರಿಗೆ ಹೆದರಿಸಿ, ಬೆದರಿಸಿ ಭಯದ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಇಲ್ಲಿಯ ಬಿಜೆಪಿಗರು ಮಾಡುತ್ತಿದ್ದಾರೆ” ಎಂದು ಕಿಡಿ ಕಾರಿದರು.

“ಚಾಕು ಇರಿದು ಕಾಂಗ್ರೆಸ್ ಕಾರ್ಯಕರ್ತನನ್ನು ಗಾಯಗೊಳಿಸಿರುವುದು ಅಕ್ಷಮ್ಯ ಅಪರಾಧ. ಕೂಡಲೇ ಪೊಲೀಸ್ ಇಲಾಖೆಯು ತನಿಖೆ ನಡೆಸಿ, ತಪ್ಪಿಸ್ಥರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೇ ಮುಂದೆ ಜರುಗುವ ಎಲ್ಲ ಅನಾಹುತಗಳಿಗೆ ಸರ್ಕಾರ ಮತ್ತು ಅಧಿಕಾರಿಗಳೇ ಜವಾಬ್ದಾರರು” ಎಂದು ಎಚ್ಚರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ಸಾಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿರಿಯರ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ನಾವು ಹಿರಿಯರಿಗೆ ನೀಡುವ ಗೌರವ: ಸಿಎಂ 'ಎಷ್ಟು...

ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ; ರಾಜಕೀಯ ಸಮರ ಸೃಷ್ಟಿಸಿದ ಎಚ್‌ಡಿಕೆ ಹೇಳಿಕೆ

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ...

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...

ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್‌ ನಗರದ...