Big Breaking | ಡಿನೋಟಿಫಿಕೇಷನ್‌ ಪ್ರಕರಣ; ಇಂದು ಸಂಜೆ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಎಚ್‌ಡಿಕೆ ಹಾಜರು

Date:

Advertisements

ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಎಸ್‌ ಯಡಿಯೂರಪ್ಪ ಜಂಟಿಯಾಗಿ ನಡೆಸಿದ್ದ ಬೆಂಗಳೂರಿನ ಗಂಗೇನಹಳ್ಳಿ ಜಮೀನು ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಎಚ್‌ ಡಿ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಈ ದಿನ.ಕಾಮ್‌ಗೆ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ʼಈ ದಿನʼದಲ್ಲಿ ಸರಣಿ ತನಿಖಾ ವರದಿ ಪ್ರಕಟವಾದ ನಂತರ, ಅಧಿಕಾರಿಗಳು ಲೋಕಾಯುಕ್ತ ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ್ದರು. ಸೆ.21ರಂದು ಯಡಿಯೂರಪ್ಪ ಅವರು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ನಿನ್ನೆಯಷ್ಟೇ ಮಾಧ್ಯಮಗಳ ಜೊತೆ ಮಾತನಾಡುತ್ತ ಕುಮಾರಸ್ವಾಮಿ ಅವರು, “ನನಗೆ ಲೋಕಾಯುಕ್ತ ಪೊಲೀಸರಿಂದ ಯಾವುದೇ ನೋಟಿಸ್‌ ಬಂದಿಲ್ಲ” ಎಂದು ಹೇಳಿದ್ದರು.

ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಜಂಟಿಯಾಗಿ ನಡೆಸಿದ ಹಗರಣ ಇದು. ಬಿಡಿಎಗೆ ಸೇರಿದ ಬೆಂಗಳೂರು ಮಹಾನಗರದ ನಟ್ಟ ನಡುವೆ ಸುಮಾರು 55,000 ಚದರ ಅಡಿ ಭೂಮಿಯನ್ನು ಡಿನೋಟಿಫೈ ಮಾಡಿ ಗುಳುಂ ಮಾಡಲಾಗಿದೆ. ಆ ಭೂಮಿಯ ಇವತ್ತಿನ ಮಾರುಕಟ್ಟೆ ಮೌಲ್ಯ ನೂರಾರು ಕೋಟಿ! ಇಬ್ಬರು ಬೇರೆ ಬೇರೆ ಅವಧಿಯಲ್ಲಿ ಸಿಎಂಗಳಾಗಿದ್ದವರು. ಆದರೆ, ಪಕ್ಷ ಬೇರೆ, ಹಗರಣ ಒಂದೇ. FIR ಕೂಡ ಒಂದೇ. ಸರ್ಕಾರಿ ಸ್ವತ್ತನ್ನು ಲೂಟಿ ಹೊಡೆಯುವ ಒಳಸಂಚಿನಲ್ಲಿ ಇಬ್ಬರೂ ಭಾಗಿಯಾಗಿ IPC Sec 120 (B) – Criminal Conspiracy ಅಪರಾಧಿಕ ಒಳಸಂಚು ಕೇಸನ್ನು ಎದುರಿಸುತ್ತಿದ್ದಾರೆ.

Advertisements

ಈ ದಿನ.ಕಾಂ ತನಿಖಾ ತಂಡ ಈ ಬ್ರಹ್ಮಾಂಡ ಭ್ರಷ್ಟಾಚಾರದ ಬೆನ್ನುಹತ್ತಿ ವರ್ಷಗಟ್ಟಲೆ ಪರಿಶ್ರಮ ಹಾಕಿದೆ. ನಿರಂತರ ಪ್ರಯತ್ನಗಳ ಮೂಲಕ ಸಾಕಷ್ಟು ದಾಖಲೆಗಳನ್ನು ಸಂಗ್ರಹಿಸಿ ಈ ರೆಡ್‌ಹ್ಯಾಂಡ್‌ ಕ್ರೈಮ್‌ ನ ಕಟುವಾಸ್ತವಗಳನ್ನು Exclusive ದಾಖಲೆಗಳ ಸಮೇತ ಜನರ ಮುಂದಿಟ್ಟಿತ್ತು. ಆ ನಂತರ ಈ ಬೆಳವಣೆಗೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X