ಬಿಜೆಪಿಯ 2019ರ ಚುನಾವಣಾ ಪ್ರಣಾಳಿಕೆಗಳಲ್ಲಿ ಒಂದಾದ ಅಯೋಧ್ಯೆಯಲ್ಲಿ ರಾಮಮಂದಿರ ಕೇಸರಿ ಪಕ್ಷಕ್ಕೆ ಯಾವುದೇ ಲಾಭ ನೀಡಿದಂತಿಲ್ಲ. ಅಯೋಧ್ಯೆಯಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ರಾಮಮಂದಿರ ಇರುವ ಕ್ಷೇತ್ರವಾದ ಫೈಜಾಬಾದ್‌ನಲ್ಲಿ ಕೇಸರಿ ಪಕ್ಷಕ್ಕೆ ಹಿನ್ನಡೆ ಕಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪಕ್ಷವು ಜನವರಿ 22ರಂದು ದೇವಾಲಯದ ಉದ್ಘಾಟನೆ ಮಾಡಿದೆ. ಬಿಜೆಪಿಯು ರಾಮಮಂದಿರ ಅಲೆಯಿಂದಲೇ ಗೆಲುವು ಸಾಧಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಫೈಜಾಬಾದ್‌ನಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಅವಧೇಶ್ ಪ್ರಸಾದ್ ಮುನ್ನಡೆಯಲ್ಲಿದ್ದಾರೆ.
ಅಯೋಧ್ಯೆ ಜಿಲ್ಲೆಯ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿಯ ಲಲ್ಲು ಸಿಂಗ್ ಎಸ್‌ಪಿಯ ಅವಧೇಶ್ ಪ್ರಸಾದ್ ವಿರುದ್ಧ 2,244 ಮತಗಳಿಂದ ಹಿನ್ನಡೆಯಲ್ಲಿದ್ದಾರೆ.
ಇದನ್ನು ಓದಿದ್ದೀರಾ? ಮಹಾ ಸರ್ಕಾರ ಬೀಳಿಸಿದ್ದ ಬಿಜೆಪಿಗೆ ಮುಖಭಂಗ;’ಇಂಡಿಯಾ’ ಒಕ್ಕೂಟಕ್ಕೆ ಭಾರೀ ಮುನ್ನಡೆ
ಫೈಜಾಬಾದ್ ಬಿಜೆಪಿಗೆ ಸುರಕ್ಷಿತ ಸ್ಥಾನವೆಂದು ಪರಿಗಣಿಸಲಾಗಿತ್ತು. ಆದರೆ ಇಲ್ಲಿ ಬಿಜೆಪಿಗೆ ಹಿನ್ನೆಡೆ ಆಶ್ಚರ್ಯ ಹುಟ್ಟಿಸಿದೆ. ಎಸ್‌ಪಿ ಈ ಕ್ಷೇತ್ರ ಮಾತ್ರವಲ್ಲದೆ ಉತ್ತರ ಪ್ರದೇಶದ 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
‘But UP ko ram mandir diya how can BJP loose their😭😭😭UP betrayed bjp’ pic.twitter.com/4FeWFvoF6Y
— Harshit Sharma (@Sharmajikaputtr) June 4, 2024
ಹೆಚ್ಚಿನ ಸಮೀಕ್ಷೆ ತಜ್ಞರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ವಿಜಯದ ಭವಿಷ್ಯ ನುಡಿದಿದ್ದರು. ಆದರೆ ಬಿಜೆಪಿ ಬಹುತೇಕ ಹಿನ್ನೆಡೆ ಸಾಧಿಸುತ್ತಿದೆ.
ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಚ್ಚರಿ ಮೂಡಿಸಿದೆ. ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ದೊಡ್ಡ ಗೆಲುವು ಸಾಧಿಸಲಿದೆ ಎಂಬ ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಕಂಡಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡುಗಳಲ್ಲಿ ಇಂಡಿಯಾ ಒಕ್ಕೂಟ ಮುಂಚೂಣಿಯಲ್ಲಿದೆ.