ಬಿಹಾರ ವಿಧಾನಸಭೆ ಚುನಾವಣೆ | ಮತ ಎಣಿಕೆ ಆರಂಭ; ಯಾರ ತೆಕ್ಕೆಗೆ ಅಧಿಕಾರ?

Date:

ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಬೆಳಿಗ್ಗೆ ಪ್ರಾರಂಭವಾಗಿದೆ. ಬಿಹಾರದ ಅಧಿಕಾರ ಮತ್ತೆ ಬಿಜೆಪಿ-ಜೆಡಿಯು ಒಕ್ಕೂಟಕ್ಕೆ ಸೇರಲಿದೆಯೇ ಅಥವಾ ವಿರೋಧ ಪಕ್ಷಗಳ ಮಹಾಘಟಬಂಧನ್‌ಗೆ ಪಾಲಾಗಲಿದೆಯೇ ಎಂಬುದು ಇಂದು ಸಂಜೆಯೊಳಗೆ ಸ್ಪಷ್ಟವಾಗಲಿದೆ.

- Advertisement -

ಹಲವು ಎಕ್ಸಿಟ್‌ ಪೋಲ್‌ಗಳು ಎನ್‌ಡಿಎ ಸುಲಭವಾಗಿ ಗೆಲ್ಲಲಿದೆ ಎಂದು ಹೇಳಿಕೊಂಡಿದೆ. 243 ಸ್ಥಾನಗಳಲ್ಲಿ 146 ಸ್ಥಾನಗಳನ್ನು ಪಡೆಯಬಹುದು, ಅಂದರೆ ಬಹುಮತಕ್ಕಿಂತ 24 ಸ್ಥಾನಗಳು ಅಧಿಕ ಪಡೆಯಬಹುದು ಎಂದು ಹೇಳಿದೆ. ವಿಪಕ್ಷಗಳ ಮಹಾಘಟನಬಂಧನ್ ಕೇವಲ 92 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಎನ್‌ಡಿಟಿವಿ ಸೇರಿದಂತೆ ಹಲವು ಎಕ್ಸಿಟ್‌ ಪೋಲ್‌ಗಳು ಹೇಳಿದೆ. ಆದರೆ ಆಕ್ಸಿಸ್ ಮೈ ಇಂಡಿಯಾ, ವೋಟ್ ವೈಬ್ ಮತ್ತು ಚಾಣಕ್ಯ ತಂತ್ರ ಸೇರಿದಂತೆ ಇನ್ನು ಕೆಲವು ಎಕ್ಸಿಟ್ ಪೋಲ್‌ಗಳು ಎನ್‌ಡಿಎ ಮತ್ತು ಮಹಾಘಟಬಂಧನ್ ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ಇರಲಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? 2 ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ, ನ.14 ಕ್ಕೆ ಮತ ಎಣಿಕೆ

ಬಿಹಾರದಲ್ಲಿ ಎರಡು ಹಂತದಲ್ಲಿ ನವೆಂಬರ್ 6 ಮತ್ತು 11ರಂದು ಚುನಾವಣೆ ನಡೆದಿದ್ದು ಇಂದು ಮತ ಎಣಿಕೆ ನಡೆಯುತ್ತಿದೆ. ಈ ಬಾರಿ ಬಿಹಾರದಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾನ ನಡೆದಿದೆ. ಅರ್ಹ ಮತದಾರರಲ್ಲಿ ಸುಮಾರು ಶೇಕಡ 67ರಷ್ಟು ಮತ ಚಲಾಯಿಸಿದ್ದಾರೆ. ಈ ಹಿಂದೆ ಬಿಹಾರದಲ್ಲಿ ಮತದಾನ ಪ್ರಮಾಣ ಅಧಿಕವಾದಾಗ ಆಡಳಿತ ಪಕ್ಷ ಅಧಿಕಾರ ಕಳೆದುಕೊಂಡಿದೆ. ಈ ಬಾರಿಯೂ ಅದೇ ರೀತಿ ನಡೆಯಲಿದೆಯೇ ಕಾದುನೋಡಬೇಕಿದೆ.

ಈ ನಡುವೆ ಬಿಜೆಪಿಯ ರಾಜ್ಯ ಘಟಕವು ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ಚಿತ್ರವನ್ನು ಹೊಂದಿರುವ 500 ಕೆಜಿ ಲಡ್ಡುಗಳು ಮತ್ತು ಐದು ಲಕ್ಷ ರಸಗುಲ್ಲಾಗಳು ಮತ್ತು ಗುಲಾಬ್ ಜಾಮೂನ್‌ಗಳ ಡಬ್ಬ ತಯಾರಿಗೆ ಈಗಾಗಲೇ ಸಿದ್ಧತೆ ನಡೆಸಿದೆ. ಆದರೆ ವಿಪಕ್ಷ ಮಾತ್ರ ನಮಗೆ ಗೆಲುವಿನ ಭರವಸೆಯಿದೆ ಎಂದಷ್ಟೆ ಹೇಳಿದೆ.

ಎಂಟು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ

ಬಿಹಾರ ಚುನಾವಣೆ ಫಲಿತಾಂಶ ಮಾತ್ರವಲ್ಲದೆ ಇಂದು ಒಟ್ಟು ಎಂಟು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವೂ ಹೊರಬೀಳಲಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್, ನಾಗ್ರೊತಾ, ರಾಜಸ್ಥಾನದ ಅಂತಾ, ಜಾರ್ಖಂಡ್‌ನ ಘಟ್ಸಿಲಾ, ತೆಲಂಗಾಣದ ಜುಬಿಲಿ ಹಿಲ್ಸ್, ಪಂಜಾಬ್‌ನ ತರನ್ ತರಣ್, ಮಿಜೋರಾಂನ ದಂಪಾ, ಒಡಿಶಾದ ನುವಾಪಾದದಲ್ಲಿ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...