ಬಿಹಾರ ಬಂದ್‌ | ಶಾಲೆಗೆ ತಡವಾಗುತ್ತಿದೆ ಎಂದ ಶಿಕ್ಷಕಿಯ ಮೇಲೆ ಬಿಜೆಪಿ ಕಾರ್ಯಕರ್ತರ ದಾಂಧಲೆ

Date:

ಪ್ರಧಾನಿ ಮೋದಿ ಅವರ ತಾಯಿಯ ಬಗ್ಗೆ ಕಾಂಗ್ರೆಸ್‌ ಮುಖಂಡರು ನಿಂದನಾತ್ಮಕ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ಇಂದು (ಸೆ.4) ಬಿಹಾರ ಬಂದ್‌ಗೆ ಕರೆಕೊಟ್ಟಿದೆ. ಬಿಹಾರದ ಜೆಹಾನಾಬಾದ್‌ನಲ್ಲಿ ಬಿಜೆಪಿಗರು ರಸ್ತೆಯನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಸಂಚಾರ ದಟ್ಟಣೆ ಉಂಟಾಗಿದ್ದರಿಂದ ಶಾಲೆಗೆ ತಡವಾಗುತ್ತಿದೆ, ದಾರಿ ಬಿಡಿ ಎಂದು ಕೇಳಿದ ಶಿಕ್ಷಕಿಯ ಮೇಲೆ ಬಿಜೆಪಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ.

- Advertisement -

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯು ಜೆಹಾನಾಬಾದ್‌ನ ಅರ್ವಾಲ್ ತಿರುವಿನ ಬಳಿ ನಡೆದಿದೆ. ಶಾಲೆಗೆ ತಡವಾಗುತ್ತಿದೆ ಎಂದ ಶಿಕ್ಷಕಿಗೆ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಮರಳಿ ಹೋಗುವಂತೆ ಸೂಚಿಸಿದ್ದಾರೆ. ಶಿಕ್ಷಕಿ ವಾಪಸ್‌ ಹೋಗಲು ನಿರಾಕರಿಸಿದ್ದು, ಶಾಲೆಗೆ ಹೋಗಬೇಕೆಂದು ಹೇಳಿದ್ದಾರೆ. ಈ ಕಾರಣಕ್ಕೆ, ಶಿಕ್ಷಕಿಯನ್ನು ಬಿಜೆಪಿಗರು ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ, ಶಿಕ್ಷಕಿಯನ್ನು ಸ್ಥಳದಿಂದ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನನ್ನನ್ನು ಆರ್‌ಜೆಡಿ ಪಕ್ಷದ ಏಜೆಂಟ್‌ ಮತ್ತು ಆರ್‌ಜೆಡಿಗಾಗಿ ಕೆಲಸ ಮಾಡುತ್ತಿದ್ದೇನೆಂದು ಭಾವಿಸಿ, ದಾಂಧಲೆ ನಡೆಸಿದರು. ನಾನು ಶಿಕ್ಷಕಿ, ನನಗೂ ಆರ್‌ಜೆಡಿ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರೂ ಕೇಳಲಿಲ್ಲ ಎಂದು ಶಿಕ್ಷಕಿ ಆರೋಪಿಸಿದ್ದಾರೆ.

ಮಹಿಳೆಯರ ಗೌರವದ ರಕ್ಷಣೆಗಾಗಿ ಬಿಹಾರ ಬಂದ್‌ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಬಿಜೆಪಿಗರು ಹೇಳಿಕೊಂಡಿದ್ದಾರೆ. ಶಿಕ್ಷಕಿ ಮೇಲೆ ಹಲ್ಲೆ, ದಾಂಧಲೆ ನಡೆಸುವುದು ಬಿಜೆಪಿಗರು ತೋರಿಸುವ ಮಹಿಳೆಯರ ಗೌರವದ ರಕ್ಷಣೆಯೇ. ಈ ಪ್ರತಿಭಟನೆಯನ್ನು ಮಹಿಳೆಯರ ಗೌರವಕ್ಕಾಗಿ ಮಾಡಲಾಗುತ್ತಿದೆಯೇ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಮಾಡಲಾಗುತ್ತಿದೆ, ಆದರೆ ಇದು ಬಿಜೆಪಿಯಿಂದ ಯಾವ ರೀತಿಯ ಗೌರವ ಎಂಬ ಪ್ರಶ್ನೆ ಈಗ ಉದ್ಭವಿಸುತ್ತಿದೆ.

ಒಂದೆಡೆ, ಮಹಿಳೆಯರ ಗೌರವಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಅದೇ ಪ್ರತಿಭಟನೆಯಲ್ಲಿ ಶಿಕ್ಷಕಿಯನ್ನು ಹೊಡೆದಿದ್ದಾರೆ. ಇದೇ ಬಿಜೆಪಿಯ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...