ಬಿಹಾರ | ಹಾವು-ಏಣಿ ಆಟದಲ್ಲಿ ಕೊನೆಗೂ ಬಹುಮತ ಸಾಬೀತುಪಡಿಸಿದ ಸಿಎಂ ನಿತೀಶ್ ಕುಮಾರ್

Date:

Advertisements

ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ಗೆ ಸೇರಿದ ಎರಡು ವಾರಗಳ ನಂತರ ಮತ್ತು ಒಂಬತ್ತನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆ ಸಾಬೀತುಪಡಿಸಬೇಕಿತ್ತು. ಈ ಹಾವು ಏಣಿ ಆಟದಲ್ಲಿ ಕೊನೆಗೂ ಬಹುಮತ ಸಾಬೀತುಪಡಿಸುವಲ್ಲಿ ಸಿಎಂ ನಿತೀಶ್ ಕುಮಾರ್ ಯಶಸ್ವಿಯಾಗಿದ್ದಾರೆ.

243 ಸದಸ್ಯರಿರುವ ಬಿಹಾರ ಅಸೆಂಬ್ಲಿಯಲ್ಲಿ 122ರ ಸರಳ ಬಹುಮತಕ್ಕಿಂತ ಹೆಚ್ಚು ಇರಬೇಕು. ಈ ನಡುವೆ 128 ಶಾಸಕರ ಬೆಂಬಲವನ್ನು ನಾವು ಹೊಂದಿದ್ದೇವೆ ಎಂದು ಎನ್‌ಡಿಎ ಹೇಳಿಕೊಂಡಿತ್ತು.

ಇಂದು ವಿಶ್ವಾಸಮತ ಯಾಚನೆಯ ವೇಳೆ ಸರ್ಕಾರದ ಪರವಾಗಿ ಉಪ ಸ್ಪೀಕರ್ ಅವರ ಮತವೂ ಸೇರಿದಂತೆ ಒಟ್ಟು  130 ಮತ ಬಿತ್ತು. ಈ ವೇಳೆ ವಿಪಕ್ಷ ನಾಯಕ ಆರ್‌ಜೆಡಿಯ ತೇಜಸ್ವಿ ಯಾದವ್‌ ವಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು. ಆ ಮೂಲಕ ನಿತೀಶ್​ ಕುಮಾರ್ ನೇತೃತ್ವದ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ಭದ್ರವಾಗಿದೆ.

Advertisements

ಪಾಟ್ನಾದ ಬಿಹಾರ ವಿಧಾನಸಭೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರ ಪಕ್ಷವಾದ ಆರ್‌ಜೆಡಿ ಶಾಸಕರಾದ ಚೇತನ್ ಆನಂದ್, ನೀಲಂ ದೇವಿ ಮತ್ತು ಪ್ರಹ್ಲಾದ್ ಯಾದವ್ ಅವರು ಸರ್ಕಾರದ ಪರವಾಗಿ ಮತ ಹಾಕಿದರು. ಆ ಮೂಲಕ ವಿಪಕ್ಷ ನಾಯಕ ಆರ್‌ಜೆಡಿಯ ತೇಜಸ್ವಿ ಯಾದವ್‌ಗೆ ಆಘಾತ ನೀಡಿದರು.

#WATCH | RJD MLAs Chetan Anand, Neelam Devi

ನಿತೀಶ್ ಕುಮಾರ್ ತಮ್ಮ ಸರ್ಕಾರಕ್ಕೆ ಬಹುಮತ ಸಾಬೀತು ಪಡಿಸುವುದಕ್ಕಿಂತ ಮೊದಲು ಆಡಳಿತ ಪಕ್ಷದ ಸದಸ್ಯರು ಬಿಹಾರ ವಿಧಾನಸಭೆ ಸ್ಪೀಕರ್ ಹಾಗೂ ಆರ್‌ಜೆಡಿ ನಾಯಕ ಅವಧ್ ಬಿಹಾರಿ ಚೌಧರಿ ವಿರುದ್ಧ ಅವಿಶ್ವಾಸ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿದರು.

ಈ ವೇಳೆ 125 ಸದಸ್ಯರು ನಿರ್ಣಯದ ಪರವಾಗಿ ಮತ ಹಾಕಿದರೆ, ವಿರುದ್ಧವಾಗಿ 112 ಮಂದಿ ಮತ ಹಾಕಿದರು. ಆ ಮೂಲಕ ಆರ್‌ಜೆಡಿಯ ಅವಧ್‌ ಬಿಹಾರಿ ಸ್ಪೀಕರ್ ಹುದ್ದೆ ಕಳೆದುಕೊಂಡರು.

ಸರ್ಕಾರದ ಪರವಾಗಿ 128 ಹಾಗೂ ವಿಪಕ್ಷಗಳ ಮಹಾಘಟಬಂಧನ್‌ನ ಭಾಗವಾಗಿರುವ ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು 114 ಶಾಸಕರನ್ನು ಹೊಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X