ಬಿಹಾರ ಚುನಾವಣೆ | ಎನ್‌ಡಿಎ ಭರ್ಜರಿ ಗೆಲುವು; ಅತ್ಯುತ್ಸಾಹದಲ್ಲಿ ಎಡವಿದ ಮಹಾಘಟಬಂಧನ್

Date:

ಭಾರತದ ಚಿತ್ತ ಸೆಳೆದಿದ್ದ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.‌ ಆಡಳಿತಾರೂಢ ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಭರ್ಜರಿ‌ ಗೆಲುವು ಸಾಧಿಸಿದೆ. ಕಾಂಗ್ರೆಸ್-ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಭಾರೀ ಹಿನ್ನಡೆ ಅನುಭವಿಸಿ ಸೋಲುಂಡಿದೆ.

- Advertisement -

ಬಿಹಾರದ ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ 202 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮಹಾಘಟಬಂಧನ್ 35 ಸ್ಥಾನಗಳನ್ನು ಗೆದ್ದು, ಹೀನಾಯವಾಗಿ ಸೋಲುಂಡಿದೆ. ಸ್ವತಂತ್ರವಾಗಿ‌ ಸ್ಪರ್ಧಿಸಿದ್ದ ಎಐಎಂಐಎಂ 5 ಸ್ಥಾನಗಳನ್ನು ಗೆದ್ದಿದ್ದರೆ, ಬಿಎಸ್‌ಪಿ 1 ಸ್ಥಾನ ಗೆದ್ದಿದೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜೆ‌ಎಸ್‌ಪಿ ತನ್ನ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಎನ್‌ಡಿಎ ಭಾಗವಾಗಿರುವ ಬಿಜೆಪಿ 89, ಜೆಡಿಯು 84, ಎಲ್‌ಜೆಪಿ 19 ಹಾಗೂ ಇತರ ಪಕ್ಷಗಳು 9 ಸ್ಥಾನಗಳನ್ನು ಗೆದ್ದಿವೆ.

ಮಹಾಘಟಬಂಧನ್ ಭಾಗವಾಗಿರುವ ಆರ್‌ಜೆಡಿ‌ 25, ಕಾಂಗ್ರೆಸ್ 6 ಹಾಗೂ ಎಡಪಕ್ಷಗಳು 4 ಕ್ಷೇತ್ರಗಳಲ್ಲಿ ಗೆದ್ದುಕೊಂಡಿವೆ.

ಚುನಾವಣೆಯಲ್ಲಿ ಭರ್ಜರಿ‌ ಗೆಲುವು ಸಾಧಿಸಿರುವ ಬಿಜೆಪಿ ಮತ್ತು ಜೆಡಿಯು ಸಂಭ್ರಮಾಚರಣೆ ನಡೆಸುತ್ತಿವೆ. ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ನವೆಂಬರ್ 18ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಬಿಜೆಪಿ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟುಹಿಡಿಯಬಹುದು ಎಂದು ಹೇಳಲಾಗುತ್ತಿದೆ.

ಎನ್‌ಡಿಎಯ ಈ ಅನಿರೀಕ್ಷಿತ ಗೆಲುವಿಗೆ ‘ವೋಟ್ ಚೋರಿ’ಯೇ ಕಾರಣ. ಬಿಜೆಪಿ ಮತಗಳನ್ನು ಕದ್ದು ಗೆಲುವು ಸಾಧಿಸಿದೆ. ಬಿಜೆಪಿಯ ವೋಟ್ ಚೋರಿಗೆ ಚುನಾವಣಾ ಆಯೋಗ ರಾಜಿ ಮಾಡಿಕೊಂಡು ಸಹಕರಿಸಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

ಈಶಾನ್ಯ ರಾಜ್ಯ ಮಣಿಪುರದ ಮಲೆನಾಡು ಭಾಗಗಳಲ್ಲಿ ಕಳೆದ ಕೆಲ ಗಂಟೆಗಳಲ್ಲಿ ಮರುಕಳಿಸಿದ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಲಾಗಿತ್ತು: ಧೃವ್ ರಾಠಿ ಆರೋಪ

ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್‌ ಧೃವ್ ರಾಠಿ...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4...