ಬಿಹಾರ ಚುನಾವಣೆ | ಶುರುವಿನಲ್ಲೇ ಬಿಜೆಪಿಗೆ ಸಂಕಷ್ಟ; ಸೀಟು ಹಂಚಿಕೆಯಲ್ಲಿ ಮಿತ್ರ ಪಕ್ಷಗಳ ಬಂಡಾಯ

Date:

ಬಿಹಾರದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಬಾಕಿ ಉಳಿದಿವೆ. ಚುನಾವಣೆಗಾಗಿ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ. ಎನ್‌ಡಿಎ ಮತ್ತು ಮಹಾಘಟಬಂಧನ್ ಮೈತ್ರಿಕೂಟದ ಪಕ್ಷಗಳು ಸೀಟು ಹಂಚಿಕೆಗೆ ಕಸರತ್ತು ನಡೆಸುತ್ತಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ಹೆಚ್ಚಿನ ಸ್ಥಾನಗಳಿಗಾಗಿ ಎಲ್‌ಜೆಪಿ ಮತ್ತು ಹಿಂದುಸ್ತಾನಿ ಅವಾಮಿ ಮೋರ್ಚಾ (ಜಾತ್ಯತೀತ) ಪಕ್ಷಗಳು ಪಟ್ಟು ಹಿಡಿದಿವೆ. ಬಿಜೆಪಿಗೆ ಚುನಾವಣಾ ಆರಂಭದಲ್ಲೇ ಸಂಕಷ್ಟ ಎದುರಾಗಿದೆ.

- Advertisement -

ಬಿಹಾರದ ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಪೈಕಿ, ಎನ್‌ಡಿಎಯ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಯು ತಲಾ 100 ಸೀಟುಗಳನ್ನು ಹಂಚಿಕೊಂಡು, ಉಳಿದ 43 ಕ್ಷೇತ್ರಗಳನ್ನು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ), ಹಿಂದುಸ್ತಾನಿ ಅವಾಮಿ ಮೋರ್ಚಾ (ಜಾತ್ಯತೀತ) ಹಾಗೂ ರಾಷ್ಟ್ರೀಯ ಲೋಕ್ ಮೋರ್ಚಾ (ಆರ್‌ಎಲ್‌ಎಂ)ಗಳಿಗೆ ಹಂಚಲು ಮುಂದಾಗಿದ್ದವು. ಆದರೆ, ಈ ಮೂರು ಪಕ್ಷಗಳು ಬಿಜೆಪಿ-ಜೆಡಿಯು ನಿರ್ಧಾರದ ವಿರುದ್ಧ ಬಂಡಾಯ ಎದ್ದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

40 ಸ್ಥಾನಗಳಿಗಾಗಿ ಎಲ್‌ಜೆಪಿ ಪಟ್ಟು ಹಿಡಿದಿದೆ. ಇದೀಗ, ಕೇಂದ್ರ ಸಚಿವ ಜೀತನ್ ರಾಂ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ಪಕ್ಷ ಕೂಡ 15 ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ.

ಈಗಾಗಲೇ, ತಮ್ಮ ಬೇಡಿಕೆಯಷ್ಟು ಸೀಟುಗಳನ್ನು ಕೊಡದಿದ್ದರೆ, ಎನ್‌ಡಿಎ ತೊರೆಯುವುದಾಗಿ ಎಲ್‌ಜೆಪಿ ಎಚ್ಚರಿಕೆ ನೀಡಿದೆ. ಈಗ, ಹಿಂದುಸ್ತಾನಿ ಅವಾಮಿ ಮೋರ್ಚಾ ಕೂಡ ತಮಗೆ 15 ಸ್ಥಾನಗಳನ್ನು ಬಿಟ್ಟುಕೊಡದಿದ್ದರೆ, ಎನ್‌ಡಿಎಯಲ್ಲಿ ಇದ್ದುಕೊಂಡೇ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | 35 ವರ್ಷಗಳಲ್ಲಿ ಲಾಲೂ-ನಿತೀಶ್‌ ದೋಸ್ತಿ-ಕುಸ್ತಿಯದ್ದೇ ಆಡಳಿತ

ಸೀಟು ಹಂಚಿಕೆಯ ಬಗ್ಗೆ ಟ್ವೀಟ್‌ ಮಾಡಿರುವ ಮಾಂಝಿ, ಕವಿ ರಾಮಧಾರಿ ಸಿಂಗ್ ದಿನಕರ್‌ ಅವರ ಕಾವ್ಯದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. “ನಾವು ಎನ್‌ಡಿಎ ನಾಯಕರನ್ನು ಗೌರವಿಸುತ್ತೇವೆ. ಆದರೆ, ಅವರು ನಮ್ಮನ್ನು ಅವಮಾನಿಸುತ್ತಿದ್ದಾರೆ ಎನ್ನಿಸುತ್ತಿದೆ. ನಮ್ಮ ಪಕ್ಷಕ್ಕೆ ಕೊಡಬೇಕಾದ ಗೌರವಯುತ ಸ್ಥಾನಗಳನ್ನು ಕೊಟ್ಟರೆ ಮಾತ್ರವೇ ನಮಗೂ ಮಾನ್ಯತೆ ಸಿಗುತ್ತದೆ. 15 ಸ್ಥಾನಗಳನ್ನು ನೀಡದಿದ್ದರೆ ನಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಎನ್‌ಡಿಎಯಲ್ಲಿ ಮುಂದುವರೆಯುತ್ತೇವೆ. ನಾನು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ಬಯಸುವುದಿಲ್ಲ. ಆದರೆ, ನಮ್ಮ ಪಕ್ಷವನ್ನು ಗುರುತಿಸಬೇಕು ಎಂಬುದು ನನ್ನ ಬಯಕೆಯಾಗಿದೆ” ಎಂದಿದ್ದಾರೆ.

ಎನ್‌ಡಿಎಯಲ್ಲಿ ಸೀಟು ಹಂಚಿಕೆ ಕುರಿತು ಮಿತ್ರ ಪಕ್ಷಗಳನ್ನು ಸಮಾಧಾನಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಮಾಂಝಿ ಅವರೊಂದಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಮತ್ತು ಜೆಡಿಯು ತಲಾ 100 ಸ್ಥಾನಗಳನ್ನು ಹಂಚಿಕೊಂಡು, ಎಲ್‌ಜೆಪಿಗೆ 24, ಹಿಂದೂಸ್ತಾನಿ ಅವಾಮ್ ಮೋರ್ಚಾ ಪಕ್ಷಕ್ಕೆ 10 ಹಾಗೂ ಆರ್‌ಎಲ್‌ಎಂಗೆ 6 ಸ್ಥಾನಗಳನ್ನು ನೀಡಲು ಚಿಂತಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...