ಬಿಹಾರ ಚುನಾವಣೆಯಲ್ಲಿ ರಕ್ತಪಾತ: JSP ನಾಯಕ ದುಲಾರ್‌ಚಂದ್ ಹತ್ಯೆ; NDA ಅಭ್ಯರ್ಥಿ ಅನಂತ್ ಸಿಂಗ್ ಕೈವಾಡ?

Date:

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಬಾಕಿ ಇರುವಾಗ, ಚುನಾವಣಾ ಕಣ ರಕ್ತಪಾತಕ್ಕೆ ತಿರುಗಿದೆ. ಜನ ಸುರಾಜ್ ಪಕ್ಷದ (ಜೆಎಸ್‌ಪಿ) ನಾಯಕ ದುಲಾರ್‌ಚಂದ್ ಯಾದವ್ ಅವರ ಹತ್ಯೆಯಾಗಿದೆ. ಈ ಹತ್ಯೆಯ ಹಿಂದೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಅನಂತ್ ಸಿಂಗ್ ಕೈವಾಡವಿದೆ ಎಂದು ಆರೋಪಿಸಲಾಗಿದೆ. ಅನಂತ್ ಸಿಂಗ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -

ಬಿಹಾರದ ಮೋಕಾಮಾ ವಿಧಾನಸಭಾ ಕ್ಷೇತ್ರದಲ್ಲಿ ಜೆಎಸ್‌ಪಿ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರವಾಗಿ ಗುರುವಾರ ಸಂಜೆ ದುಲಾರ್‌ಚಂದ್ ಪ್ರಚಾರ ಮಾಡುತ್ತಿದ್ದರು. ಈ ವೇಳೆ, ತಾಲ್ ಪ್ರದೇಶದಲ್ಲಿ ತೆರಳುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆಗೈಯಲಾಗಿದೆ. ವಿಧಾನಸಭಾ ಚುನಾವಣೆಯನ್ನು ರಕ್ತಸಿಕ್ತಗೊಳಿಸಲಾಗಿದೆ. ಮೋಕಾಮಾ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು ಹಳ್ಳಿಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದುಲಾರ್‌ಚಂದ್ ಯಾದವ್ ಅವರ ಮೊಮ್ಮಗನ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಅನಂತ್ ಸಿಂಗ್ ಮತ್ತು ಅವರ ಇಬ್ಬರು ಸೋದರಳಿಯರಾದ ರಣವೀರ್ ಮತ್ತು ಕರ್ಮವೀರ್ ಹಾಗೂ ಇತರ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆದಾಗ್ಯೂ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ

”ಪ್ರಚಾರದ ವೇಳೆ ಅನಂತ್ ಸಿಂಗ್ ಅವರ ಬೆಂಬಲಿಗರು ಮೊದಲು ಗುಂಡು ಹಾರಿಸಿದರು. ನಂತರ, ತಮ್ಮ ವಾಹನದಿಂದ ದುಲಾರ್‌ಚಂದ್ ಅವರಿಗೆ ಡಿಕ್ಕಿ ಹೊಡೆದು ಕೊಂದರು” ಎಂದು ಮೃತ ದುಲಾರ್‌ಚಂದ್ ಅವರು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ರೀಲ್ಸ್‌ ಮಾಡುವುದೂ ಉದ್ಯೋಗ – ರೈಲು ಬಿಟ್ಟ ಮೋದಿ

ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ತಮ್ಮ ವಿರುದ್ಧದ ಕೊಲೆ ಆರೋಪಗಳನ್ನು ನಿರಾಕರಿಸಿದ್ದಾರೆ. ಚುನಾವಣಾ ಪ್ರಚಾರದಿಂದ ಹಿಂತಿರುಗುವಾಗ ದುಲಾರ್‌ಚಂದ್‌ ಅವರ ವಾಹನವನ್ನು ಹಿಂದಿಕ್ಕಿರುವುದಾಗಿ (ಓವರ್‌ಟೇಕ್) ಅವರು ಹೇಳಿದ್ದಾರೆ. ತಮ್ಮ ಬೆಂಗಾವಲು ಪಡೆಯ ವಾಹನಗಳನ್ನು ಜೆಎಸ್‌ಪಿ ಬೆಂಬಲಿಗರು ಸುತ್ತುವರೆದು ಇಟ್ಟಿಗೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಈ ಕೃತ್ಯವು ಆರ್‌ಜೆಡಿ ನಾಯಕ ಸೂರಜ್ ಭನ್ ಸಿಂಗ್ ಅವರ ಪಿತೂರಿ ಎಂದು ಅನಂತ್ ಸಿಂಗ್ ಆರೋಪಿಸಿದ್ದಾರೆ. ಅನಂತ್ ಸಿಂಗ್ ಅವರ ಆರೋಪಗಳಿಗೆ ಪ್ರತಿಕ್ರಿಯಿಸಲು ಸೂರಜ್ ಭನ್ ನಿರಾಕರಿಸಿದ್ದಾರೆ.

ಪ್ರಕರಣ ಸಂಬಂಧ ಆಡಳಿತಾರೂಢ ಎನ್‌ಡಿಎ ಮತ್ತು ಪ್ರಧಾನಿ ಮೋದಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ. “ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಪ್ರಧಾನಿ ಮೋದಿ ಅವರು ಹಿಂದಿನ ಕಾಲದ (ಜಂಗಲ್‌ ರಾಜ್) ಬಗ್ಗೆ ಮಾತನಾಡುತ್ತಲೇ ಇರುವಾಗ, ಜನರು ಇನ್ನೂ ‘ಬಂದೂಕು ಮತ್ತು ಗುಂಡು’ಗಳೊಂದಿಗೆ ಹೇಗೆ ತಿರುಗಾಡುತ್ತಿದ್ದಾರೆ. ಆಡಳಿತವು ಅಪರಾಧಿಗಳನ್ನು ರಕ್ಷಿಸುತ್ತಿದೆ. ಸಾರ್ವಜನಿಕ ಭದ್ರತೆಗಿಂತ ತಮ್ಮ ಸ್ವಂತ ಸುರಕ್ಷತೆಗೆ ಆದ್ಯತೆ ನೀಡುತ್ತಿದೆ. ಇವರು ಸೋಲಿನ ಭಯದಲ್ಲಿದ್ದಾರೆ. ಇಂತಹ ಕೃತ್ಯಗಳಿಗೆ ಬಿಹಾರದ ಜನರು ಸೂಕ್ತ ಉತ್ತರ ನೀಡುತ್ತಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...