ಬಿಹಾರ ಚುನಾವಣೆ | 38 ಎಸ್‌ಸಿ ಮೀಸಲು ಕ್ಷೇತ್ರಗಳ ಪೈಕಿ 35ರಲ್ಲಿ ಎನ್‌ಡಿಎ ಮುನ್ನಡೆ

Date:

ಬಿಹಾರ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಭಾರೀ ಮುನ್ನಡೆಯಲ್ಲಿದೆ. 2020ರ ಚುನಾವಣೆಯಲ್ಲಿ ಬಿಹಾರದ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರಗಳಲ್ಲಿ ಭಾರೀ ಪೈಪೋಟಿ ನೀಡಿದ್ದ ಮಹಾಘಟಬಂಧನ್‌, ಈ ಬಾರಿ ಹೀನಾಯವಾಗಿ ಹಿಂದುಳಿದಿದೆ.

- Advertisement -

ಬಿಹಾರದ ಒಟ್ಟು 38 ಎಸ್‌ಸಿ ಮೀಸಲು ಕ್ಷೇತ್ರಗಳ ಪೈಕಿ 35ರಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್‌ ಕೇವಲ 3 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

2020ಕ್ಕೆ ಹೋಲಿಸಿದರೆ, ಎನ್‌ಡಿಎ ದೊಡ್ಡ ಜಿಗಿತವಾಗಿದೆ. 2020ರ ಚುನಾವಣೆಯಲ್ಲಿ ಎನ್‌ಡಿಎ 21 ಸ್ಥಾನಗಳಲ್ಲಿಯೂ, ಮಹಾಘಟಬಂಧನ್‌ 17 ಕ್ಷೇತ್ರಗಳಲ್ಲಿಯೂ ಗೆದ್ದಿದ್ದವು. ಎಸ್‌ಸಿ ಮೀಸಲು ಕ್ಷೇತ್ರಗಳನ್ನು ಎನ್‌ಡಿಎ ಕಬಳಿಸಿಕೊಂಡಿದೆ.

ಎನ್‌ಡಿಎ ಪೈಕಿ ಜೆಡಿಯು 14 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 2020ರಲ್ಲಿ 8 ಕ್ಷೇತ್ರಗಳನ್ನು ಮಾತ್ರವೇ ಗೆದ್ದಿತ್ತು. ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. 2020ರಲ್ಲಿ 9 ಕ್ಷೇತ್ರಗಳಲ್ಲಿ ಗೆದ್ದಿತ್ತು. 2020ರಲ್ಲಿ ಶೂನ್ಯ ಸಾಧನೆ ಮಾಡಿದ್ದ ಎಲ್‌ಜೆಪಿ(ಆರ್‌ವಿ) ಈಗ 6 ಕ್ಷೇತ್ರಗಳಲ್ಲಿ ಮುಂದೆ ಇದೆ.

ಮಹಾಘಟಬಂಧನ್‌ನಲ್ಲಿ ಆರ್‌ಜೆಡಿ 2 ಸ್ಥಾನಗಳಲ್ಲಿ ಮುಂದೆ ಇದೆ.2020ರಲ್ಲಿ 9 ಸ್ಥಾನಗಳನ್ನು ಗೆದ್ದಿತ್ತು. ಇನ್ನು, 2020ರಲ್ಲಿ 4 ಎಸ್‌ಸಿ ಮೀಸಲು ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್‌, ಈಗ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಬಿಹಾರದಲ್ಲಿ 2 ಕ್ಷೇತ್ರಗಳು ಮಾತ್ರವೇ ಎಸ್‌ಟಿ ಮೀಸಲು ಕ್ಷೇತ್ರಗಳಿವೆ. ಎರಡರಲ್ಲೂ ಮಹಾಘಟಬಂಧನ್ ಮುನ್ನಡೆಯಲ್ಲಿದೆ. ಮಣಿಹಾರಿಯಲ್ಲಿ ಕಾಂಗ್ರೆಸ್ ಮತ್ತು ಕಟೋರಿಯಾದಲ್ಲಿ ಆರ್‌ಜೆಡಿ ಮುನ್ನಡೆಯಲ್ಲಿದೆ. 2020ರಲ್ಲಿ ಮಣಿಹಾರಿಯಲ್ಲಿ ಕಾಂಗ್ರೆಸ್‌ ಗೆದ್ದಿತ್ತು. ಕಟೋರಿಯಾದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...