ಬಿಹಾರ ಚುನಾವಣೆ | ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಗೆಲುವು

Date:

ಬಿಹಾರ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದೆ. ಈವರೆಗೆ, 50 ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದೆ. ಈ ಪೈಕಿ, ಮಹಾಘಟಬಂಧನ್‌ಅನ್ನು ಮುನ್ನಡೆಸಿದ್ದ  ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು ಗೆಲುವು ಸಾಧಿಸಿದ್ದಾರೆ.

- Advertisement -

ತೇಜಸ್ವಿ ಯಾದವ್ ತಮ್ಮ ಕುಟುಂಬದ ಭದ್ರಕೋಟೆಯಾಗಿರುವ ರಘೋಪುರ್‌ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಆರಂಭವಾದಾಗಿ ತೇಜಸ್ವಿ ಯಾದವ್ ಮತ್ತು ಬಿಜೆಪಿ ಅಭ್ಯರ್ಥಿ ಸತೀಶ್‌ ಕುಮಾರ್‌ ನಡುವೆ ತೀವ್ರ ಪೈಪೋಟಿ ಕಂಡುಬಂದಿತ್ತು. ಕೆಲವು ಸುತ್ತುಗಳಲ್ಲಿ ತೇಜಸ್ವಿ ಯಾದವ್ ಅವರು ಹಿನ್ನಡೆಯನ್ನೂ ಅನುಭವಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದೀಗ, ಅಂತಿಮ ಸುತ್ತಿನ ಎಣಿಕೆ ಮುಗಿದಿದ್ದು, ತೇಜಸ್ವಿ ಗೆಲುವಿನ ನಗೆ ಬೀರಿದ್ದಾರೆ. ಸತೀಶ್‌ ಕುಮಾರ್ ವಿರುದ್ಧ 13,880 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಹಾರ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದಾರೆ.

ತೇಜಸ್ವಿ ಯಾದವ್ ಅವರಿಗೆ ಈ ಗೆಲುವು 3ನೇ ವಿಜಯವಾಗಿದೆ. 2025 ಮತ್ತು 2020ರ ಚುನಾವಣೆಯಲ್ಲಿಯೂ ತೇಜಸ್ವಿ ಯಾದವ್ ಇದೇ ಕ್ಷೇತ್ರದಲ್ಲಿ ಗೆದ್ದು ವಿಧಾನಸಭೆಗೆ ಆಯ್ಕೆಯಾಗಿದ್ದರು. ವಿಧಾನಸಭೆಗೆ ಆಯ್ಕೆಯಾದ ಮೊದಲ ಅವಧಿಯಲ್ಲಿಯೇ(2027ರಿಂದ) ವಿಪಕ್ಷ ನಾಯಕನಾಗಿದ್ದರು. 2ನೇ ಅವಧಿಗೆ ಗೆದ್ದಾಗ ಜೆಡಿಯು-ಆರ್‌ಜೆಡಿ-ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಜೆಡಿಯು ಮತ್ತೆ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದಾಗ, ವಿಪಕ್ಷ ನಾಯಕನಾಗಿ ಮಹಾಘಟಬಂಧನ್‌ಅನ್ನು ಮುನ್ನಡೆಸಿದ್ದರು. 2025ರ ಪ್ರಸ್ತುತ ಚುನಾವಣೆಯಲ್ಲಿ ಮಹಾಘಟಬಂಧನ್‌ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ, ಮೈತ್ರಿಯನ್ನು ಮುನ್ನಡೆಸಿದ್ದರು.

ಸದ್ಯದ ಎಣಿಕೆಯ ಮಾಹಿತಿ ಪ್ರಕಾರ, ಎನ್‌ಡಿಎ 202, ಮಹಾಘಟಬಂಧನ್‌ 34 ಹಾಗೂ ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...