ಬಿಹಾರ ಚುನಾವಣೆ | ಮತಗಟ್ಟೆಯಲ್ಲಿ ಮತದಾರರಿಗೆ ಬೆದರಿಕೆ, ಪೊಲೀಸ್ ದೌರ್ಜನ್ಯ; ವಿಡಿಯೋ ಹಂಚಿಕೊಂಡ RJD

Date:

ಬಿಹಾರದಲ್ಲಿ ಗುರುವಾರ 1ನೇ ಹಂತದ ಮತದಾನ ನಡೆಯುತ್ತಿದೆ. ಮಧ್ಯಾಹ್ನದ ವೇಳೆಗೆ 43% ಮತದಾನವಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ, ಮತದಾನದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಮತದಾರರನ್ನು ಬೆದರಿಸುತ್ತಿದ್ದಾರೆ. ಮತಗಟ್ಟೆಗಳಲ್ಲಿ ಮಹಾಘಟಬಂಧನ್‌ ಮೈತ್ರಿಕೂಟದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಆರೋಪಿಸಿದೆ.

- Advertisement -

ಪೊಲೀಸರು ಮತ್ತು ಬಿಜೆಪಿಗರು ಮತದಾರರಿಗೆ ಬೆದರಿಕೆ ಹಾಕುತ್ತಿರುವ ಕೆಲವು ದೃಶ್ಯಗಳನ್ನು ಹಂಚಿಕೊಂಡಿರುವ ಆರ್‌ಜೆಡಿ, “ಪೊಲೀಸ್ ಅಧಿಕಾರಿಗಳು ಮೊಹಿಯುದ್ದೀನಗರ್ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 106, 107, 108ರಲ್ಲಿ ಪೊಲೀಸ್ ಸಿಬ್ಬಂದಿ ಹಲವು ಮನೆಗಳಿಗೆ ನುಗ್ಗಿ ಯಾವುದೇ ಕಾರಣವಿಲ್ಲದೆ ಮತದಾರರನ್ನು ಕ್ರೂರವಾಗಿ ಥಳಿಸಿ ಬೆದರಿಕೆ ಹಾಕುತ್ತಿದ್ದಾರೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬಿಜೆಪಿ ಕಾರ್ಯಕರ್ತರು ತಮ್ಮ ಸದಸ್ಯರ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿರುವ ಪಕ್ಷ, “ಸೋಲಿನ ಹತಾಶೆಯಿಂದ ಬಿಜೆಪಿ ಗೂಂಡಾಗಳು ನಮ್ಮ ಕಾರ್ಯಕರ್ತರ ಮೇಲೆ ದಾಳಿ ಮಾಡುತ್ತಿದ್ದಾರೆ. ಸರೈನ ಮಾರಿಚಾ ಚೌಕ್‌ನಲ್ಲಿ, ಆರ್‌ಜೆಡಿ ಕಾರ್ಯಕರ್ತನ ಮೇಲೆ ಬಿಜೆಪಿ ಗೂಂಡಾಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ! ಈ ಅಪರಾಧಿಗಳನ್ನು ತ್ವರಿತವಾಗಿ ಬಂಧಿಸುವ ಮೂಲಕ ಚುನಾವಣಾ ಆಯೋಗವು ತನ್ನ ನಿಷ್ಪಕ್ಷಪಾತತೆಯನ್ನು ಸಾಬೀತುಪಡಿಸಲಿ!” ಎಂದು ಆಗ್ರಹಿಸಿದೆ.

ಘಟನೆಯೊಂದನ್ನು ಚಿತ್ರೀಕರಿಸಿರುವ ಸ್ಥಳೀಯ ವ್ಯಕ್ತಿಯೊಬ್ಬರು, “ಪೊಲೀಸರು ಮತದಾರರನ್ನು ಮತಗಟ್ಟೆಗಳಿಂದ ದೂರವಿಡುತ್ತಿದ್ದಾರೆ ಮತ್ತು ಬೆದರಿಸುತ್ತಿದ್ದಾರೆ” ಎಂದು ಆರೋಪಿಸಿರುವುದು ವಿಡಿಯೋದಲ್ಲಿ ಕೇಳಿಬಂದಿದೆ. ಅವರು ಹಿಂದಿಯಲ್ಲಿ ‘ಘರ್ ಸೆ ಕಾಫಿ ದುರ್ ಘರ್ ಸೆ ಘು ಘು ಕೆ ಪ್ರಶಾಸನ್ ಕಿ ಗುಂಡಗರ್ದಿ ಚಾಲು ಹೈ. ಮತದಾರರು ಕೋ ದಾರಯಾ ಧಮ್ಕಾಯಾ ಜಾ ರಾ ಹೈ’ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗವು ಈ ಆರೋಪಗಳ ಕುರಿತು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ,

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...