ಬಿಹಾರ | ‘ಇಂಡಿಯಾ’ ಬಣದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್

Date:

ಬಿಹಾರ ವಿಧಾನಸಭಾ ಚುನಾವಣೆಗೆ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸಲು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಬಣ ಸಮ್ಮತಿಸಿದೆ. ತೇಜಸ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವಲ್ಲಿ ‘ಇಂಡಿಯಾ’ ಕೂಟದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಆರ್‌ಜೆಡಿ ವಕ್ತಾರ ಶಕ್ತಿ ಸಿಂಗ್ ಯಾದವ್ ತಿಳಿಸಿದ್ದಾರೆ.

- Advertisement -

ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಅಧಿಕಾರವನ್ನು ಕಸಿದುಕೊಳ್ಳುವ ಗುರಿ ‘ಇಂಡಿಯಾ’ ಬಣಕ್ಕಿದೆ. ಹೀಗಾಗಿ, ಚುನಾವಣೆಗೆ ಸೀಟು ಹಂಚಿಕೆ ಕುರಿತು ಚರ್ಚಿಸಲು ‘ಇಂಡಿಯಾ’ ಬಣ ಸಭೆ ನಡೆಸಿದ್ದು, ತೇಜಸ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಸಭೆಯ ನಂತರ ಮಾತನಾಡಿದ ತೇಜಸ್ವಿ ಯಾದವ್, “ಬಿಹಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಕೊರತೆ ಇದೆ. ರಾಜ್ಯ ಸರ್ಕಾರವು ಈಗಾಗಲೇ ಜಾರಿಗೆ ತಂದಿರುವ ಕ್ರಮಗಳಲ್ಲಿ ಸ್ಪಷ್ಟ ದೃಷ್ಟಿಕೋನವಿಲ್ಲ” ಎಂದು ಆರೋಪಿಸಿದ್ದಾರೆ.

“ರಾಜ್ಯದ ಸುವ್ಯವಸ್ಥೆ ಮತ್ತು ಅಭಿವೃದ್ಧಿಗಾಗಿ ಮುಂಬರುವ ದಿನಗಳಲ್ಲಿ ನಾವು ದೊಡ್ಡ ಘೋಷಣೆಗಳನ್ನು ಮಾಡುತ್ತೇವೆ. ಮೈತ್ರಿಕೂಟವು ರಾಜ್ಯಕ್ಕಾಗಿ ದೊಡ್ಡ ದೃಷ್ಟಿಕೋನವನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಬಿಹಾರಲ್ಲಿ ಆರ್‌ಜೆಡಿ, ಕಾಂಗ್ರೆಸ್, ಸಿಪಿಐ(ಎಂಎಲ್), ಸಿಪಿಐ, ಸಿಪಿಎಂ ಮತ್ತು ವಿಐಪಿಗಳು ಇಂಡಿಯಾ ಬಣದ ಭಾಗವಾಗಿವೆ. ಅಲ್ಲದೆ, ಮಾಜಿ ಕೇಂದ್ರ ಸಚಿವ ಪಶುಪತಿ ಕುಮಾರ್ ಪರಾಸ್ ನೇತೃತ್ವದ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷವು ಮೈತ್ರಿಕೂಟಕ್ಕೆ ಪ್ರವೇಶಿಸಲು ಹಸಿರು ನಿಶಾನೆಗಾಗಿ ಕಾಯುತ್ತಿದೆ.

ಇಂಡಿಯಾ ಬಣವು ಚುನಾವಣೆಯಲ್ಲಿ ಮಹಿಳೆಯರು, ಯುವಕರು, ರೈತರು, ಉದ್ಯೋಗಗಳು ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಹೆಚ್ಚು ಚರ್ಚಿಸಲು ನಿರ್ಧರಿಸಿವೆ. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ರಾಜ್ಯ ಸರ್ಕಾರವನ್ನು ಹೆಚ್ಚು ಆಕ್ರಮಣಕಾರಿಯಾಗಿ ತರಾಟೆಗೆ ತೆಗೆದುಕೊಳ್ಳಲು ಮತ್ತು ರಾಜ್ಯಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ವಿರುದ್ಧ ಅಭಿಯಾನ ಆರಂಭಿಸಲು ಮುಂದಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...