ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಪೌರತ್ವ ಸಾಬೀತಿಗೆ ಜನರ ಪರದಾಟ; ಮತದಾನದ ಹಕ್ಕನ್ನೇ ಕಳೆದುಕೊಳ್ಳುವರೇ 50% ಜನರು?

Date:

ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision – SIR) ಆರಂಭಿಸಿದೆ. ಈ ಪ್ರಕ್ರಿಯೆಯು ಆ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರಲ್ಲಿ ಭಯ, ಗೊಂದಲ, ಆತಂಕ ಹಾಗೂ ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಹಿಂದುಳಿದ, ತಳ ಸಮುದಾಯಗಳ ಜನರು ತಮ್ಮ ಪೌರತ್ವವನ್ನು ಸಾಬೀತು ಮಾಡಲು, ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಭವಿಷ್ಯದಲ್ಲಿ ತಮ್ಮನ್ನು ಸರ್ಕಾರ ಹೇಗೆ ನಡೆಸಿಕೊಳ್ಳಬಹುದು ಎಂಬ ಭಯವೂ ಆವರಿಸಿದೆ.

- Advertisement -

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ; ಬಿಹಾರದಲ್ಲಿನ ನಿವಾಸಿಗಳಲ್ಲಿ, 1987ಕ್ಕಿಂತ ಮೊದಲು ಜನಿಸಿದವರು ತಮ್ಮ ಜನ್ಮದಿನಾಂಕ ಅಥವಾ ಜನ್ಮಸ್ಥಳವನ್ನು ಸಾಬೀತುಪಡಿಸಬೇಕು. 1987ರ ಜುಲೈ 1 ಮತ್ತು 2004ರ ಡಿಸೆಂಬರ್ 2ರ ನಡುವೆ ಜನಿಸಿದವರು ತಮ್ಮ ಜನ್ಮದಿನಾಂಕ ಮತ್ತು ತಮ್ಮ ಒಬ್ಬ ಪೋಷಕರ ಜನ್ಮದಿನಾಂಕ/ಸ್ಥಳವನ್ನು ಸಾಬೀತುಪಡಿಸಬೇಕು. 2004ರ ಡಿಸೆಂಬರ್ 2ರ ನಂತರ ಜನಿಸಿದವರು ತಮ್ಮ ಜನ್ಮದಿನಾಂಕ/ಸ್ಥಳ ಮತ್ತು ತಮ್ಮ ಇಬ್ಬರು ಪೋಷಕರ ಜನ್ಮದಿನಾಂಕ/ಸ್ಥಳವನ್ನು ಸಾಬೀತುಪಡಿಸಬೇಕು. ಅದಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕ್ರಮವು ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆಗೆ ದಾರಿಮಾಡಿಕೊಡುತ್ತದೆ ಎಂದು ಆಯೋಗ ಹೇಳಿಕೊಂಡಿದೆ. ಆದರೆ, ಈ ಪ್ರಕ್ರಿಯೆಯಲ್ಲಿ ಮತದಾರರು ತಮ್ಮ ಪೌರತ್ವವನ್ನು ಕಡ್ಡಾಯವಾಗಿ ಸಾಬೀತು ಮಾಡಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ, ಜನರು ತಮ್ಮ ಪೌರತ್ವವನ್ನು ಸೂಚಿಸುವ ಜನನ ಪ್ರಮಾಣಪತ್ರ, ಶಾಲಾ ದಾಖಲೆಗಳನ್ನು ಸಲ್ಲಿಸಬೇಕಾಗಿದೆ. ಆದರೆ, ಈ ಅಗತ್ಯ ದಾಖಲೆಗಳೇ ಗ್ರಾಮೀಣ ಜನರಿಗೆ ಸವಾಲಾಗಿ ಪರಿಣಮಿಸಿವೆ.

ಬಿಹಾರದ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ದಲಿತರು, ಹಿಂದುಳಿದ ವರ್ಗಗಳು ಮತ್ತು ಅತೀ ಹಿಂದುಳಿದ ಸಮುದಾಯಗಳ ಜನರು ಆಯೋಗದ ಕ್ರಮದಿಂದ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಸಾಮಾನ್ಯವಾಗಿ ಬಳಸಲಾಗುವ ದಾಖಲೆಗಳಾದ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಮನರೇಗಾ ಜಾಬ್ ಕಾರ್ಡ್ ಅಥವಾ ಆಯುಷ್ಮಾನ್ ಆರೋಗ್ಯ ಕಾರ್ಡ್‌ಗಳನ್ನು ಪೌರತ್ವದ ಪುರಾವೆಯಾಗಿ ಪರಿಗಣಿಸಲಾಗುತ್ತಿಲ್ಲ ಮತ್ತು ಸ್ವೀಕರಿಸಲಾಗುತ್ತಿಲ್ಲ. ಬದಲಿಗೆ, ಜನನ ಪ್ರಮಾಣಪತ್ರ ಅಥವಾ ಶಾಲಾ ದಾಖಲೆಗಳಂತಹ ದಾಖಲೆಗಳನ್ನು ಕೇಳಲಾಗುತ್ತಿದೆ. ಆದರೆ, ಈ ದಾಖಲೆಗಳು ಗ್ರಾಮೀಣ ಬಡವರ ಬಳಿ ಸಾಮಾನ್ಯವಾಗಿ ಇಲ್ಲವೇ ಇಲ್ಲ.

ಗ್ರಾಮೀಣ ಭಾಗದ ದಲಿತ, ಹಿಂದುಳಿದ ಹಾಗೂ ಬಡ ಸಮುದಾಯಗಳಲ್ಲಿನ ಬಹುತೇಕ ವಯಸ್ಕರು ಅನಕ್ಷರಸ್ಥರು. ಅವರು ಶಿಕ್ಷಣವನ್ನೇ ಪಡೆದಿಲ್ಲ, ಶಾಲೆಗಳಲ್ಲಿ ಅವರ ದಾಖಲಾತಿಯೂ ಇಲ್ಲ. ಹೀಗಿರುವಾಗ ಅವರು ಶಾಲಾ ದಾಖಲೆಗಳನ್ನು ಒದಗಿಸಲು ಸಾಧ್ಯವೇ ಇಲ್ಲ. ಇನ್ನು, ಜನನ ಪ್ರಮಾಣ ಪತ್ರದ ವಿಚಾರವೂ ಇಂಥದ್ದೇ ಸವಾಲು. ಬಹುಸಂಖ್ಯಾತರು ಆಸ್ಪತ್ರೆಗಳಲ್ಲಿ ಜನಿಸಿದವರಲ್ಲ. ಮನೆಗಳಲ್ಲಿ, ಸೂಲಗಿತ್ತಿ ಮಾಡಿಸಿದ ಹೆರಿಗೆಯಿಂದ ಜನಿಸಿದ್ದಾರೆ. ಅವರ ಜನನಕ್ಕೆ ಸರ್ಕಾರ ಯಾವುದೇ ಪ್ರಮಾಣಪತ್ರ ನೀಡಿಲ್ಲ. ಇದು, ಕೇಲವ ವಯಸ್ಕರು ತಮ್ಮ ಪೌರತ್ವವನ್ನು ಸಾಬೀತು ಮಾಡಲು ಮಾತ್ರವೇ ತೊಡಕಾಗಿಲ್ಲ. ಬದಲಾಗಿ, ಅವರ ಮಕ್ಕಳು ಕೂಡ ತಮ್ಮ ಪೋಷಕರ ದಾಖಲೆಗಳನ್ನು ಸಲ್ಲಿಸಿ, ತಮ್ಮ ಪೌರತ್ವವನ್ನು ಸಾಬಿತು ಮಾಡಿಕೊಳ್ಳುವುದಕ್ಕೂ ಸವಾಲಾಗಿದೆ.

ರೋಹ್ತಾಸ್ ಜಿಲ್ಲೆಯ ಅಮರೇಂದ್ರ ಪಾಲ್ ಎಂಬವರು, ತಮ್ಮ ಪೋಷಕರ ಜನನ ಪ್ರಮಾಣಪತ್ರ ಅಥವಾ ಶಾಲಾ ದಾಖಲೆಗಳನ್ನು ಒದಗಿಸಲಾಗದೆ, ತಮ್ಮ ಪೌರತ್ವವನ್ನು ಸಾಬೀತು ಮಾಡಲಾಗದೆ, ಮತದಾನ ಪಟ್ಟಿಯಿಂದ ಹೊರಗುಳಿದುಬಿಡುತ್ತೇನೆಂದು ಆತಂಕ ವ್ಯಕ್ತಪಡಿಸಿದ್ದಾರೆ. ಅಮರೇಂದ್ರ ಪಾಲ್ ರೀತಿಯಲ್ಲಿ ಬಹುಸಂಖ್ಯಾತರು ಇದೇ ಆತಂಕದಲ್ಲಿದ್ದಾರೆ.

ಪರಿಣಾಮವಾಗಿ, ಬಿಹಾರದಲ್ಲಿ ಕನಿಷ್ಠ 20% ಮತದಾರರು ಮತದಾನದ ಹಕ್ಕಿನಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ADR ಸಂಸ್ಥೆಯ ಸಂಸ್ಥಾಪಕ ಜಗದೀಪ್ ಛೋಕರ್, “ಬಿಹಾರದ ಜನಸಂಖ್ಯೆಯ ಸುಮಾರು ಅರ್ಧದಷ್ಟು (50%) ಜನರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು” ಎಂದು ಅಂದಾಜಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಹೈಪರ್‌ಲೂಪ್ | ಏನಿದು, ಚೆನ್ನೈನಿಂದ ಬೆಂಗಳೂರಿಗೆ 30 ನಿಮಿಷದಲ್ಲಿ ಪ್ರಯಾಣ ಸಾಧ್ಯವೇ?

“ಆಧಾರ್ ಕಾರ್ಡ್‌ಗಳು ಬ್ಯಾಂಕ್ ಖಾತೆ ತೆರೆಯಲು ಮಾನ್ಯವಾದರೆ, ಪೌರತ್ವ ಸಾಬೀತಿಗೆ ಯಾಕೆ ಅವುಗಳನ್ನು ಪರಿಗಣಿಸುವುದಿಲ್ಲ” ಎಂದು ಗ್ರಾಮೀಣ ಭಾಗದ ಜನರು ಪ್ರಶ್ನಿಸುತ್ತಿದ್ದಾರೆ. ಎಸ್‌ಐಆರ್ ಕ್ರಮವು ಲಕ್ಷಾಂತರ ಜನರು, ವಿಶೇಷವಾಗಿ ಬಡವರು ಮತ್ತು ವಲಸೆ ಕಾರ್ಮಿಕರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂಬ ಗಂಭೀರ ಆತಂಕ ಮನೆ ಮಾಡಿದೆ.

ಈ ಪರಿಷ್ಕರಣೆಯು ಬಿಹಾರದಲ್ಲಿ ‘ವೋಟ್‌ಬಂದಿ’ (ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಕೃತ್ಯ) ಎಂದು ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಟೀಕಿಸಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಚುನಾವಣಾ ಆಯೋಗದ ಮೂಲಕ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಹಿಂಬಾಗಿಲಿನಿಂದ ಹೇರುತ್ತಿದೆ. ಜನರನ್ನು ಪೌರತ್ವ ಇಲ್ಲದವರೆಂದು ಗುರುತಿಸುವ ಕುತಂತ್ರವಾಗಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ಚುನಾವಣಾ ಆಯೋಗದ ಈ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ ವಿಪಕ್ಷಗಳು ಇಂದು (ಜುಲೈ 9) ಬಿಹಾರ ಬಂದ್‌ಗೆ ಕರೆಕೊಟ್ಟಿದ್ದವು. ಬಂದ್‌ಗೆ ಪಾಟ್ನಾ, ಜೆಹಾನಾಬಾದ್, ದಾನಾಪುರ ಮತ್ತು ಅರಾರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಬಂದ್‌ನಲ್ಲಿ ರಾಹುಲ್ ಗಾಂಧಿ, ತೇಜಸ್ವಿ ಯಾದವ್, ಕನ್ಹಯ್ಯ ಕುಮಾರ್ ಮತ್ತು ಪಪ್ಪು ಯಾದವ್‌ರಂತಹ ಅನೇಕ ನಾಯಕರು ಭಾಗಿಯಾಗಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ ಬದುಕುವ ಭಗತ್ ಸಿಂಗ್

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...