ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಐದೂ ವರ್ಷದ ಸಂಬಳ ಮೀಸಲಿಟ್ಟ ಬಿಹಾರ ಯುವ ಸಂಸದೆ ಶಾಂಭವಿ!

Date:

ಬಿಹಾರ ಲೋಕಸಭೆಯಲ್ಲಿ ಅತ್ಯಂತ ಕಿರಿಯ ವಯಸ್ಸಿನ ಸಂಸದೆ ಎನಿಸಿಕೊಂಡು ಗಮನ ಸೆಳೆದಿರುವ ಸಂಸದೆ ಶಾಂಭವಿ ಚೌಧರಿ ಅವರು ತಮ್ಮ ಐದು ವರ್ಷದ ಸಂಬಳವನ್ನು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮೀಸಲಿಡುತ್ತೇನೆ ಎಂದು ಘೋಷಿಸಿದ್ದಾರೆ.

- Advertisement -

26 ವರ್ಷದ ಶಾಂಭವಿ ಚೌಧರಿ ಅವರು ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಾರ್ಟಿಯಿಂದ ಬಿಹಾರದ ಸಮಸ್ಥಿಪುರದ ಸಂಸದೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸರ್ಕಾರದಲ್ಲಿ ಸಚಿವರಾಗಿರುವ ಅಶೋಕ್ ಚೌಧರಿ ಅವರ ಮಗಳೇ ಈ ಶಾಂಭವಿ. ಕಳೆದ ಲೋಕಸಭಾ ಚುನಾವಣೆಯಲ್ಲಿ 1.87 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ, ಜಯ ಸಾಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

“ಶಿಕ್ಷಣದಿಂದ ಸಮಸ್ಥಿಪುರದ ಅಭಿವೃದ್ಧಿ ಸಾಧ್ಯ. ಈ ಕಾರಣಕ್ಕೆ ಹಣಕಾಸಿನ ಅಡಚಣೆಯಿಂದ ಶಿಕ್ಷಣವನ್ನು ಹೆಣ್ಣು ಮಕ್ಕಳು ಮೊಟಕುಗೊಳಿಸಬಾರದು. ಶಿಕ್ಷಣದಿಂದ ವಂಚಿತರಾಗುವ ಹೆಣ್ಣುಮಕ್ಕಳನ್ನು ಗುರುತಿಸಿ ಅವರ ಸಹಾಯಕ್ಕಾಗಿ ನಾನು ನಿಲ್ಲುತ್ತೇನೆ. ಸಂಸದೆಯಾಗಿ ನಾನು ಪಡೆಯುವ ಐದೂ ವರ್ಷದ ಸಂಬಳವನ್ನುಈ ಕಾರ್ಯಕ್ಕೆ ಮೀಸಲಿಡುತ್ತೇನೆ” ಎಂದು ತಿಳಿಸಿದ್ದಾರೆ.

ಸಮಸ್ಥಿಪುರವನ್ನು ಬಿಹಾರ ಸರ್ಕಾರ ಇತ್ತೀಚೆಗೆ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡಿದೆ. ಈಗ ಶಾಂಭವಿ ಚೌಧರಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಶಾಂಭವಿ ಅವರ ಈ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶನಿವಾರ ದೆಹಲಿಯಲ್ಲಿ ಸಿಜೆಪಿ 2ನೇ ಬೃಹತ್ ಪ್ರತಿಭಟನೆ

ಎಸ್‌ಐಆರ್‌ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ವಿರುದ್ಧ...

ದೆಹಲಿ ಗಲಭೆ, ಜಾಮಿಯಾ ಹಿಂಸಾಚಾರ: ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿಗಳು ವಜಾ

2020ರ ಈಶಾನ್ಯ ದೆಹಲಿ ಗಲಭೆ ಹಾಗೂ 2019ರ ಡಿಸೆಂಬರ್‌ನಲ್ಲಿ ಜಾಮಿಯಾ ಮಿಲಿಯಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...