ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಮಧ್ಯಂತರ ಜಾಮೀನು

Date:

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

- Advertisement -

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​​ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು (ಡಿಸೆಂಬರ್ 26) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಹೈಕೋರ್ಟ್​​ ಪೀಠ, ಬೈರತಿ ಬಸವರಾಜ್​​ಗೆ ಮಧ್ಯಂತ ಜಾಮೀನು ನೀಡಿ ಆದೇಶ ಹೊರಡಿಸಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜನವರಿ 6ಕ್ಕೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನೋಟಿಸ್ ನೀಡಿದಾಗ ಬೈರತಿ ಬಸವರಾಜು ತನಿಖೆಗೆ ಹಾಜರಾಗಿದ್ದಾರೆ. ಆದರೆ ಬೈರತಿ ಬಸವರಾಜು ವಿರುದ್ಧ ಇನ್ನೂ ಆರೋಪಪಟ್ಟಿ ಸಲ್ಲಿಸಿಲ್ಲ. ಆರೋಪಪಟ್ಟಿ ಸಲ್ಲಿಸದಿರುವುದಕ್ಕೆ ತನಿಖಾಧಿಕಾರಿ ಸಮಂಜಸ ಕಾರಣ ನೀಡಿಲ್ಲ. ಜುಲೈ 18 ರಿಂದ ಡಿಸೆಂಬರ್ 19 ರವರೆಗೆ ಬಂಧನದಿಂದ ರಕ್ಷಣೆಯಿತ್ತು. ಇದೇ ರಕ್ಷಣೆ ಮುಂದುವರಿಸಲು ಬೈರತಿ ಬಸವರಾಜ್ ಪರ ವಕೀಲರ ಸಂದೇಶ್ ಚೌಟ್ ಮನವಿ ಮಾಡಿದರು. ಇದನ್ನು ಆಲಿಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಹೈಕೋರ್ಟ್​​ ಪೀಠ, ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ. ಅಲ್ಲದೇ ತನಿಖೆ ಸಹಕರಿಸಲು ಸೂಚಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಸ್ಮಸ್‌ ಆಚರಣೆಗೆ ಅಡ್ಡಿ; ಭಾರತದ ಬಹುತ್ವದ ಮೇಲಿನ ಈ ದಾಳಿ ಅಕ್ಷಮ್ಯ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಜಾಗೊಂಡಿತ್ತು. ಇದರ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಮಾಡಿದ್ದರು. ಹೀಗಾಗಿ ಯಾವುದೇ ಕ್ಷಣದಲ್ಲಿ ಬೈರತಿ ಬಸವರಾಜ್ ಬಂಧನವಾಗುವ ಸಾಧ್ಯತೆಗಳಿದ್ದವು.

2025 ಜುಲೈ 15ರಂದು ರಾತ್ರಿ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸೂರು ಲೇಕ್ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಕೊಲೆ ನಡೆದಿತ್ತು. ಕೊಲೆಯಾದ ಬಿಕ್ಲು ಶಿವ ತಾಯಿ, ಮಾಜಿ ಸಚಿವ ಬೈರತಿ ಬಸವರಾಜ್ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...