ಬಿಲ್ಕಿಸ್ ಬಾನೊ ಪ್ರಕರಣ | ಅನಾರೋಗ್ಯ, ಬೆಳೆ ಕೊಯ್ಲು ನೆಪ: ಶರಣಾಗತಿಗೆ ಕಾಲಾವಕಾಶ ಕೋರಿದ ಅಪರಾಧಿಗಳು

Date:

Advertisements

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜೈಲು ಅಧಿಕಾರಿಗಳೆದುರು ಶರಣಾಗಲು ಸಮಯಾವಕಾಶ ನೀಡುವಂತೆ ಕೋರಿ ಬಿಲ್ಕಿಸ್‌ ಬಾನೊ ಪ್ರಕರಣದ ಅಪರಾಧಿಗಳು, ನಾನಾ ಕಾರಣಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಪ್ರಕರಣದ ಹನ್ನೊಂದು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜನವರಿ 8ರಂದು ಆದೇಶಿಸಿತ್ತು. ಇವರಲ್ಲಿ ಮೂವರು ಅಪರಾಧಿಗಳು ಅನಾರೋಗ್ಯ, ಚಳಿಗಾಲದ ಬೆಳೆ ಕೊಯ್ಲು ಹಾಗೂ ಮಗನ ಮದುವೆಯಂತಹ ಕಾರಣಗಳನ್ನು ನೀಡಿ ಶರಣಾಗತಿಗೆ ಕಾಲಾವಕಾಶ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisements

ತನ್ನ ಅನಾರೋಗ್ಯ ಹಾಗೂ ತಂದೆ ಹಾಸಿಗೆ ಹಿಡಿದಿದ್ದಾರೆ ಎಂಬ ಕಾರಣ ನೀಡಿ ಅಪರಾಧಿ ಗೋವಿಂದಭಾಯ್‌ ನಾಯೀ ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದರೆ, ಚಳಿಗಾಲದ ಬೆಳೆ ಕೊಯ್ಲು ಇರುವುದರಿಂದ ಶರಣಾಗತಿಗೆ ಆರು ವಾರಗಳ ಸಮಯಾವಕಾಶ ನೀಡಬೇಕೆಂದು ಮಿತೇಶ್‌ ಚಮನ್‌ಲಾಲ್‌ ಭಟ್‌ ಕೇಳಿಕೊಂಡಿದ್ದಾನೆ. ಇನ್ನು ಮಗನ ಮದುವೆಯ ಕಾರಣಕ್ಕೆ ಆರು ವಾರಗಳ ಕಾಲಾವಕಾಶ ನೀಡಬೇಕೆಂದು ರಮೇಶ್‌ ರೂಪಭಾಯ್‌ ಚಂದನ್ ಅರ್ಜಿಯ ಸಲ್ಲಿಸುವ ಮೂಲಕ ವಿನಂತಿಸಿದ್ದಾನೆ.

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ಆರೋಪದಲ್ಲಿ ಹನ್ನೊಂದು ಅಪರಾಧಿಗಳು ಸುಪ್ರೀಂ ಕೋರ್ಟ್ ಶಿಕ್ಷೆಗೆ ಗುರಿಯಾಗಿದ್ದರು.

ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ, ಆಗಸ್ಟ್ 14, 2023ರಂದು, ಈ ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಅವಧಿಪೂರ್ವವಾಗಿ ಬಿಡುಗಡೆ ಮಾಡಿತ್ತು.

ಅಪರಾಧ ನಡೆದ ರಾಜ್ಯದ ನೀತಿಗೆ ಅನುಗುಣವಾಗಿ ಕ್ಷಮಾದಾನದ ಅರ್ಜಿಯನ್ನು ಪರಿಗಣಿಸಬೇಕು ಮತ್ತು ವಿಚಾರಣೆ ನಡೆದ ಸ್ಥಳದಲ್ಲಿ ಅಲ್ಲ ಎಂದು ಮೇ 2022ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಆಧರಿಸಿ ಅವರ ಶಿಕ್ಷೆ ಅವಧಿ ಕಡಿತಗೊಳಿಸಲಾಗಿತ್ತು.

ಪ್ರಕರಣದ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆದಿದ್ದರೂ ಅಪರಾಧಿಗಳನ್ನು ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ತೀರ್ಪಿನನುಸಾರ ತನ್ನ ಕ್ಷಮಾದಾನ ನೀತಿ ಅನ್ವಯಿಸಿತ್ತು. ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಕರಣದ ಸಂತ್ರಸ್ತೆ ಬಿಲ್ಕಿಸ್‌ ಬಾನೊ ಸೇರಿದಂತೆ ವಿವಿಧ ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಜನವರಿ 8ರಂದು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ರದ್ದುಗೊಳಿಸಿತ್ತು. ಪ್ರಕರಣದ ಅಪರಾಧಿಗಳಿಗೆ ಕ್ಷಮಾದಾನ ನೀಡಲು ಗುಜರಾತ್‌ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂದಿದ್ದ ಅದು ಎಲ್ಲಾ ಹನ್ನೊಂದು ಅಪರಾಧಿಗಳಿಗೆ ಎರಡು ವಾರಗಳಲ್ಲಿ ಶರಣಾಗುವಂತೆ ನಿರ್ದೇಶಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಬಾನಿಯ ವಂತಾರ ಮೃಗಾಲಯದ ಕಾರ್ಯಾಚರಣೆ ತನಿಖೆಗೆ ಎಸ್‌ಐಟಿ ರಚನೆ

ಕಳೆದ ಕೆಲವು ತಿಂಗಳುಗಳಿಂದ ಅಂಬಾನಿ ಅವರ ರಿಲಯನ್ಸ್‌ ಸಂಸ್ಥೆಗೆ ಸೇರಿದ, ಮುಕೇಶ್...

ಮದುವೆಯಾಗಲು ನಿರಾಕರಿಸಿದ ಯುವತಿಗೆ ಗುಂಡಿಕ್ಕಿ ಕೊಲೆ: ತಾನೂ ಆತ್ಮಹತ್ಯೆಗೆ ಶರಣಾದ ಯುವಕ

ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಯುವತಿಗೆ ಗುಂಡಿಕ್ಕಿ ಕೊಲೆ ಮಾಡಿ, ಬಳಿಕ...

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

Download Eedina App Android / iOS

X