ಬಿಲ್ಕಿಸ್‌ ಬಾನೊ ಪ್ರಕರಣ: ಆರೋಪಿಗಳ ಕ್ಷಮಾಪಣೆ ಅರ್ಜಿಗಳ ಅಂತಿಮ ವಿಚಾರಣೆ ಆಗಸ್ಟ್‌ 7ಕ್ಕೆ ಸುಪ್ರೀಂ ನಿಗದಿ

Date:

2002ರಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ ಅವರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅವಧಿಗೂ ಮುಂಚೆ ಕಳೆದ ವರ್ಷ ಬಿಡುಗಡೆ ಮಾಡಲಾದ ಎಲ್ಲ 11 ಆರೋಪಿಗಳ ಕ್ಷಮಾದಾನವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಅಂತಿಮ ವಿಚಾರಣೆಯನ್ನು ಆಗಸ್ಟ್‌ 7ರಂದು ಪ್ರಾರಂಭಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್‌ ಬುಯಾನ್‌ ನೇತೃತ್ವದ ಪೀಠವು ಮನವಿಗಳನ್ನು ಪೂರ್ಣಗೊಂಡಿರುವುದನ್ನು ಹಾಗೂ ಎಲ್ಲ ಅಪರಾಧಿಗಳಿಗೆ ಪತ್ರಿಕೆ ಪ್ರಕಟಣೆಗಳ ಮೂಲಕ ಅಥವಾ ನೇರವಾಗಿ ನೋಟಿಸ್ ನೀಡಲಾಗಿದೆಯೇ ಎಂಬುದನ್ನು ಗಮನಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬಿಲ್ಕಿಸ್‌ ಬಾನೊ ಪ್ರಕರಣದ ವಿಷಯದಲ್ಲಿ ಮನವಿಗಳು ಪೂರ್ಣಗೊಂಡಿವೆ ಮತ್ತು ಎಲ್ಲ ಪ್ರಕರಣಗಳಲ್ಲಿನ ಎಲ್ಲ ಪ್ರತಿವಾದಿಗಳಿಗೆ ಪತ್ರಿಕೆ ಪ್ರಕಟಣೆಗಳು ಅಥವಾ ನೇರವಾಗಿ ನೋಟಿಸ್ ನೀಡಲಾಗಿದೆ ಎಂದು ನಾವು ಭಾವಿಸುತ್ತೇವೆ. ನಾವು ಆಗಸ್ಟ್ 7ರಂದು ಅಂತಿಮ ವಿಚಾರಣೆಗೆ ವಿಷಯವನ್ನು ಪಟ್ಟಿ ಮಾಡುತ್ತೇವೆ. ಎಲ್ಲ ಕಕ್ಷಿದಾರರು ಸಂಕ್ಷಿಪ್ತವಾಗಿ ಲಿಖಿತ ಸಲ್ಲಿಕೆಗಳು, ಸಾರಾಂಶಗಳು ಹಾಗೂ ದಿನಾಂಕದ ಪಟ್ಟಿಯನ್ನು ಸಲ್ಲಿಸಬೇಕು” ಎಂದು ಪೀಠ ಹೇಳಿದೆ.

ಮೇ 9 ರಂದು, ಸ್ಥಳೀಯ ಪೋಲೀಸರು ಬೀಗ ಹಾಕಿರುವ ಮನೆ ಮತ್ತು ಫೋನ್ ಸ್ವಿಚ್ಡ್ ಆಫ್ ಸೇರಿದಂತೆ ನೋಟಿಸ್ ನೀಡಲು ಸಾಧ್ಯವಾಗದ ಅಪರಾಧಿಗಳ ವಿರುದ್ಧ ಗುಜರಾತಿ ಮತ್ತು ಇಂಗ್ಲಿಷ್ ಸೇರಿದಂತೆ ಸ್ಥಳೀಯ ಪತ್ರಿಕೆಗಳಲ್ಲಿ ನೋಟಿಸ್ ಪ್ರಕಟಿಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಎಲ್ಲ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ವಿನಾಯಿತಿ ನೀಡಿ ಕಳೆದ ವರ್ಷ ಆಗಸ್ಟ್ 15 ರಂದು ಅವಧಿಗೆ ಮುನ್ನವೇ ಬಿಡುಗಡೆಗೊಳಿಸಿತು. ದೋಷಮುಕ್ತಿಗೊಳಿಸಿರುವುದನ್ನು ಪ್ರಶ್ನಿಸಿ ಬಿಲ್ಕಿಸ್‌ ಬಾನೊ ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ, ಜೆಡಿಎಸ್ ಮತ್ತು ಪ್ರಾದೇಶಿಕ ಅಸ್ಮಿತೆ

ಅಪರಾಧಿಗಳಿಗೆ ದೋಷಮುಕ್ತಿಗೊಳಿಸಿರುವುದನ್ನು ಪ್ರಶ್ನಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಸಿಪಿಎಂ ನಾಯಕಿ ಸುಭಾಷಿಣಿ ಅಲಿ, ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್, ಲಖನೌ ವಿಶ್ವ ವಿದ್ಯಾನಿಲಯದ ಮಾಜಿ ಉಪಕುಲಪತಿ ರೂಪ್ ರೇಖಾ ವರ್ಮಾ ಸೇರಿದಂತೆ ಹಲವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಗೋಧ್ರಾ ರೈಲು ಬೆಂಕಿ ಘಟನೆಯ ನಂತರ ಭುಗಿಲೆದ್ದ ಗಲಭೆಯ ಸಂದರ್ಭದಲ್ಲಿ ಬಾನುವಿನ ಮೇಲೆ ಬಿಡುಗಡೆಗೊಂಡಿರುವ ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಆ ಸಂದರ್ಭದಲ್ಲಿ ಆಕೆಗೆ 21 ವರ್ಷ ವಯಸ್ಸಾಗಿತ್ತು. ಅಲ್ಲದೆ 5 ತಿಂಗಳ ಗರ್ಭಿಣಿಯಾಗಿದ್ದಳು. ಗಲಭೆಯಲ್ಲಿ ಸಾವನ್ನಪ್ಪಿದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳು ಸೇರಿದ್ದಳು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...