ಬಿಲ್ಕಿಸ್ ಪ್ರಕರಣ | ಶರಣಾಗತಿಗೆ ಕಾಲಾವಕಾಶ ಕೋರಿದ್ದ ಅಪರಾಧಿಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

Date:

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

- Advertisement -

“ಶರಣಾಗತಿಗೆ ಸಮಯ ವಿಸ್ತರಣೆ ಕೋರಿ ಅಪರಾಧಿಗಳು ಉಲ್ಲೇಖಿಸಿರುವ ಕಾರಣಗಳು ಅರ್ಹತೆಯ ಕೊರತೆಯನ್ನು ಹೊಂದಿವೆ” ಎಂದು ನ್ಯಾಯಾಲಯ ಹೇಳಿದ್ದು, ಜನವರಿ 8ರ ತೀರ್ಪಿನ ಪ್ರಕಾರ, ನ್ಯಾಯಾಲಯವು ನಿಗದಿಪಡಿಸಿದ ಮೂಲ ಗಡುವು ಜನವರಿ 21ರೊಳಗೆ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಬೇಕು” ಎಂದು ಕಟ್ಟಪ್ಪಣೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

Bilkis Bano Case 1

“ಶರಣಾಗತಿಯನ್ನು ಮುಂದೂಡಲು ಮತ್ತು ಜೈಲಿಗೆ ಹಿಂದಿರುಗಲು ಅರ್ಜಿದಾರರು ಉಲ್ಲೇಖಿಸಿದ ಕಾರಣಗಳು ಯಾವುದೇ ಅರ್ಹತೆಯನ್ನು ಹೊಂದಿಲ್ಲ. ಏಕೆಂದರೆ ಆ ಕಾರಣಗಳು ನಮ್ಮ ನಿರ್ದೇಶನಗಳನ್ನು ಅನುಸರಿಸುವುದನ್ನು ಯಾವುದೇ ರೀತಿಯಲ್ಲಿ ತಡೆಯುವುದಿಲ್ಲ” ಎಂದು ಅರ್ಜಿಗಳನ್ನು ವಜಾಗೊಳಿಸುವಾಗ ನ್ಯಾಯಾಲಯವು ಹೇಳಿದೆ.

ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಸಮಯ ವಿಸ್ತರಣೆ ಕೋರಿ ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಬಹು ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವಿಚಾರಣೆ ನಡೆಸಿತು.

ಇದನ್ನು ಓದಿ: ಬಿಲ್ಕಿಸ್ ಪ್ರಕರಣ । ಕೆಟ್ಟ ಕಾಲದಲ್ಲಿ ನ್ಯಾಯ ಗೆಲ್ಲಿಸಿದ ನ್ಯಾಯಮೂರ್ತಿ ನಾಗರತ್ನ

2002ರ ಗುಜರಾತ್ ಕೋಮು ಗಲಭೆಯ ವೇಳೆ, ಕೊಲೆ ಮತ್ತು ಸಾಮೂಹಿಕ ಅತ್ಯಾಚಾರಗೈದು, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಲು ಗುಜರಾತ್ ಸರ್ಕಾರವು ನೀಡಿದ್ದ ಆದೇಶಗಳನ್ನು ಸುಪ್ರೀಂ ಕೋರ್ಟ್ ಜನವರಿ 8ರಂದು ರದ್ದುಗೊಳಿಸಿತ್ತು.

ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಪ್ರಕರಣದ ಹನ್ನೊಂದು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜನವರಿ 8ರಂದು ಆದೇಶಿಸಿತ್ತು. ಇವರಲ್ಲಿ ಮೂವರು ಅಪರಾಧಿಗಳು ಅನಾರೋಗ್ಯ, ಚಳಿಗಾಲದ ಬೆಳೆ ಕೊಯ್ಲು ಹಾಗೂ ಮಗನ ಮದುವೆಯಂತಹ ಕಾರಣಗಳನ್ನು ನೀಡಿ ಶರಣಾಗತಿಗೆ ಕಾಲಾವಕಾಶ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ(ಜ.19) ತಿರಸ್ಕರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...