ಬಿಲ್ಕಿಸ್ ಬಾನೋ ಪ್ರಕರಣ | ಸುಪ್ರೀಂ ತೀರ್ಪು ಕಗ್ಗತ್ತಲ‌ ಕಾಲದಲ್ಲಿ ನ್ಯಾಯದ ಬೆಳಕು ಇದ್ದಂತೆ: ಬಿ ಕೆ ಹರಿಪ್ರಸಾದ್‌

Date:

ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕಗ್ಗತ್ತಲ‌ ಕಾಲದಲ್ಲಿ ನ್ಯಾಯದ ಬೆಳಕಿನ ಬಾಗಿಲು ತೆರೆದಂತೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಹೇಳಿದ್ದಾರೆ.

- Advertisement -

ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ವಿಚಾರವಾಗಿ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಅತ್ಯಾಚಾರಿಗಳ ಪರ ವಕಾಲತ್ತು ವಹಿಸಿದ್ದ ಗುಜರಾತಿನ ಪ್ರಭುತ್ವಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಹೆಣ್ತನದ ಆತ್ಮಾಭಿಮಾನ ಹಾಗೂ ನ್ಯಾಯಾಂಗದ ನಂಬಿಕೆ ಉಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಏನಿದು ಸುಪ್ರೀಂ ತೀರ್ಪು?

2002ರ ಗುಜರಾತ್ ಗಲಭೆಯಲ್ಲಿ ಸಂಭವಿಸಿದ ಬಿಲ್ಕಿಸ್ ಬಾನೋ ಅವರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಗಳ ಅವಧಿಗೆ ಮುನ್ನ ಬಿಡುಗಡೆಗೆ ಅವಕಾಶ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 11 ಜನರನ್ನು ಅಕಾಲಿಕವಾಗಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಬಳಿಕ ಈ ತೀರ್ಪು ನೀಡಲಾಗಿದೆ.

ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಹನ್ನೊಂದು ಅಪರಾಧಿಗಳು ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಮತ್ತು ಜೈಲಿನಲ್ಲಿಯೇ ಮುಂದುವರಿಯಬೇಕು ಎಂದು ಹೇಳಿದೆ. ಇದೇ ವೇಳೆ 2022 ಆಗಸ್ಟ್ ನಲ್ಲಿ ದೋಷಿಗಳ ಬಿಡುಗಡೆಗೆ ನಿರ್ಧಾರ ಕೈಗೊಂಡ ಪ್ರಕ್ರಿಯೆಗಳನ್ನು ಒಳಗೊಂಡ ಮೂಲ ಕಡತಗಳನ್ನು ಸಲ್ಲಿಸುವಂತೆ ನ್ಯಾಯಾಲಯ ಕೇಂದ್ರ ಸರಕಾರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...