ಭವಾನಿ ರೇವಣ್ಣ ಬಂಧನಕ್ಕೆ ಪೊಲೀಸರ ಹುಡುಕಾಟ : ಗೃಹ ಸಚಿವ ಪರಮೇಶ್ವರ್

Date:

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭವಾನಿ ರೇವಣ್ಣ ಅವರನ್ನು ಬಂಧನ ಮಾಡಲು ಎಸ್‌ಐಟಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಅವರು ಸಿಕ್ಕಾಗ ಬಂಧಿಸಲಾಗುವುದು. ಕಾನೂನು ಪ್ರಕಾರ ಕ್ರಮ ಆಗಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ವಿಚಾರವಾಗಿ, ಜೂ.3ರಂದು ಪರಿಷತ್ ಚುನಾವಣೆ ನಾಮಿನೇಷನ್‍ಗೆ ಕೊನೆಯ ದಿನವಾಗಿದ್ದು, ಅದಕ್ಕೆ ಸಭೆಯನ್ನು ಕರೆಯಲಾಗಿದೆ. ನಾಮಿನೇಷನ್ ಪೇಪರ್‌ಗೆ 10 ಜನ ಸಹಿ ಮಾಡಬೇಕು. ಇದೇ ಕಾರಣಕ್ಕೆ ಸಭೆ ಕರೆದಿದ್ದಾರೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಚ್ ಡಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್‌; ಬಂಧನ ಭೀತಿ

ಅಪಹರಣ ಪ್ರಕರಣದ ವಿಚಾರಣೆಗೆ ಹಾಜರಾಗದೇ ಭವಾನಿ ರೇವಣ್ಣ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆಂದು ಹೊಳೆನರಸೀಪುರದಲ್ಲಿರುವ ಅವರ ನಿವಾಸಕ್ಕೆ ತೆರಳಿದ ವೇಳೆ ಭವಾನಿ ರೇವಣ್ಣ ಅವರು ಮನೆಯಲ್ಲಿ ಇರಲಿಲ್ಲ. ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದ್ದು, ಜಾಮೀನಿಗಾಗಿ ನಾಳೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಆ ಬಳಿಕ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...