ಬಿಟ್‌ಕಾಯಿನ್ ಹಗರಣ; ಬಿಜೆಪಿ ನಾಯಕ ಸೇರಿ 14 ಮಂದಿಗೆ ಜೀವಾವಧಿ ಶಿಕ್ಷೆ

Date:

ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಗುಜರಾತ್‌ನ ಬಿಜೆಪಿ ನಾಯಕ, ಮಾಜಿ ಶಾಸಕ ನಳಿನ್ ಕೊಟಾಡಿಯಾ ಸೇರಿದಂತೆ 14 ಮಂದಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಗುಜರಾತ್‌ನ ಅಹಮದಾಬಾದ್‌ ನಗರ ಸೆಷನ್ಸ್‌ ನ್ಯಾಯಲಯ ಈ ತೀರ್ಪು ನೀಡಿದೆ.

- Advertisement -

2018ರಲ್ಲಿ ದಾಖಲಾಗಿದ್ದ ಬಿಟ್‌ಕಾಯಿನ್ ಸುಲಿಗೆ ಪ್ರಕರಣದಲ್ಲಿ ನಳಿನ್ ಕೊಟಾಡಿಯಾ, ಅಂದಿನ ಅಮ್ರೇಲಿ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ಜಗದೀಶ್ ಪಟೇಲ್ ಹಾಗೂ ಆಗಿನ ಎಲ್‌ಸಿಬಿ ಪಿಐ ಅನಂತ್ ಪಟೇಲ್ ಸೇರಿದಂತೆ 14 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯವು ಇದೀಗ ತೀರ್ಪು ಪ್ರಕಟಿಸಿದೆ. ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸೂರತ್ ಮೂಲದ ಬಿಲ್ಡರ್, ಕ್ರಿಪ್ಟೋಕರೆನ್ಸಿ ವ್ಯಾಪಾರಿ ಶೈಲೇಶ್ ಭಟ್ ಅವರನ್ನು ಆರೋಪಿಗಳ ಗುಂಪು ಅಪಹರಿಸಿತ್ತು. ಅವರಿಂದ ಬಿಟ್‌ ಕಾಯಿನ್‌ಗಳನ್ನು ಸುಲಿಗೆ ಮಾಡಿತ್ತು. ಈ ಬಗ್ಗೆ ಶೈಲೇಶ್ ಅವರು 2018ರಲ್ಲಿ ದೂರು ದಾಖಲಿಸಿದ್ದರು. ತಮ್ಮ ದೂರಿನಲ್ಲಿ ‘ರಾಜಕಾರಣಿಗಳು, ಪೊಲೀಸ್‌ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಮೈತ್ರಿ ಮಾಡಿಕೊಂಡು, ಹಗರಣ ನಡೆಸಿದ್ದಾರೆ’ ಎಂದು ಆರೋಪಿಸಿದ್ದರು.

ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಐಡಿ ಪೊಲೀಸರು, ಎಲ್ಲ ಆರೋಪಿಗಳನ್ನು ಬಂಧಿಸಿದ್ದರು. ತನಿಖೆ ವೇಳೆ, 172 ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ ಮಹತ್ವದ ತೀರ್ಪು ನೀಡಿದೆ. ಆರೋಪಿಗಳನ್ನು ಜೈಲಿಗಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...