ಬಿಜೆಪಿ ಸರ್ಕಾರದ ಅವಧಿಯ ಬಿಟ್ ಕಾಯಿನ್ ಹಗರಣ ಮರುತನಿಖೆ: ಗೃಹ ಸಚಿವ ಪರಮೇಶ್ವರ್

Date:

  • ಬಿಟ್ ಕಾಯಿನ್ ಪ್ರಕರಣವನ್ನೂ ಮರು ತನಿಖೆ ಮಾಡುತ್ತೇವೆ
  • ಬಿಟ್ ಕಾಯಿನ್ ಪ್ರಕರಣದ ತನಿಖೆಗೆ ಆಗ್ರಹಿಸಿದ್ದ ಪ್ರತಾಪ್ ಸಿಂಹ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -

ಬೆಂಗಳೂರಿನ ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಪರಮೇಶ್ವರ್, ಬಿಟ್ ಕಾಯಿನ್ ಪ್ರಕರಣವನ್ನೂ ಮರು ತನಿಖೆ ಮಾಡುತ್ತೇವೆ. ಬಿಜೆಪಿಯವರು ಈಗಾಗಲೇ ಈ ವಿಚಾರವಾಗಿ ಕುಣಿದಾಡುತ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನದಿಂದ ಇರುವುದು ಒಳ್ಳೆಯದು. ಈ ಪ್ರಕರಣದ ಮರು ಪರಿಶೀಲನೆ ಮಾಡ್ತೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಂಗಳವಾರ ಮೈಸೂರಿನಲ್ಲಿ ಬಿಟ್ ಕಾಯಿನ್ ತನಿಖೆ ವಿಚಾರವಾಗಿ ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿಬಂದಿದ್ದ ಬಿಟ್ ಕಾಯಿನ್ ಹಗರಣದ ವಿಷಯವನ್ನು ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಬಳಸಿಕೊಂಡರು. ಆದರೆ ಇವತ್ತು ಯಾಕೆ ಆ ಪ್ರಕರಣದ ಬಗ್ಗೆ ತನಿಖೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ್ದರು.

ಬಿಟ್ ಕಾಯಿನ್ ಹಗರಣ ಹಿನ್ನೆಲೆ

ಬೆಂಗಳೂರು ಸಿಸಿಬಿ ಪೊಲೀಸರು 2020ರ ನವೆಂಬರ್ ನಲ್ಲಿ ಶ್ರೀಕೃಷ್ಣ(ಶ್ರೀಕಿ) ಮತ್ತು ಆತನ ಸಹಚರರನ್ನು ಡ್ರಗ್ ಕೇಸ್ ಒಂದರಲ್ಲಿ ಬಂಧಿಸಿದ್ದರು. ಈ ವೇಳೆ ಶ್ರೀಕಿ ಡಾರ್ಕ್‌ನೆಟ್‌ ಮೂಲಕ ಬಿಟ್‌ಕಾಯಿನ್‌ ಬಳಸಿಕೊಂಡು ಡ್ರಗ್ ಸಂಗ್ರಹಿಸಿದ್ದ. ಜೊತೆಗೆ ಇದನ್ನು ತಮ್ಮ ಹೈ-ಪ್ರೊಫೈಲ್ ಕ್ಲೈಂಟ್‌ಗಳಿಗೆ ಮಾರಾಟ ಮಾಡುತ್ತಿದ್ದ ಎನ್ನುವ ದೂರು ಈತನ ಮೇಲೆ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ?:ರಾಜ್ಯದಲ್ಲಿರುವುದು ಸಿದ್ದರಾಮಯ್ಯ ಸರ್ಕಾರವೋ ಅಥವಾ ದಿಲ್ಲಿ ಜನಪಥದ ಸರ್ಕಾರವೋ: ಎಚ್‌ಡಿಕೆ ‌

ವಿಚಾರಣೆ ವೇಳೆ ಶ್ರೀ ಕೃಷ್ಣ, ರಾನ್ಸಮ್ವೇರ್ ದಾಳಿ, ಕ್ರಿಪ್ಟೋ ಕರೆನ್ಸಿ ಲೂಟಿ, ಮನಿ ಲಾಂಡರಿಂಗ್ ಮತ್ತು ಸೈಬರ್ ವಂಚನೆಗಳಂತಹ ಸೈಬರ್ ಅಪರಾಧಗಳಲ್ಲಿ ತೊಡಗಿಸಿಕೊಂಡಿರುವುದಾಗಿ ಹೇಳಿಕೆ ನೀಡಿದ್ದ.

2019 ರಲ್ಲಿ ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್‌ನ ಹ್ಯಾಕಿಂಗ್‌ನಲ್ಲೂ ಈತ ಭಾಗಿಯಾಗಿರುವ ಸಂಶಯ ಪೊಲೀಸ್ ಇಲಾಖೆಗಿತ್ತು. ಜುಲೈ 2019 ರಲ್ಲಿ ಹಣಕಾಸು ಇಲಾಖೆ ಸಲಹೆಗಾರರಾದ ಎಸ್ ಕೆ ಶೈಲಜಾ. ಅರ್ನೆಸ್ಟ್ ಮನಿ ಡೆಪಾಸಿಟ್ಸ್ ಮರುಪಾವತಿಯನ್ನು ಪರಿಶೀಲಿಸುವಾಗ, 7.37 ಕೋಟಿ ಅನಧಿಕೃತ ನಿಧಿ ವರ್ಗಾವಣೆ ಆಗಿರೋದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿಗೆ ದೂರು ಸಲ್ಲಿಸಿ ಪ್ರಕರಣ ದಾಖಲಿಸಲಾಯ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...