ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳಕ್ಕೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

Date:

ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರ ಮತ್ತು ಮುಂದಿನ ವರ್ಷ ಚುನಾವಣೆ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದ ಉಸ್ತುವಾರಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ನೀಡಿರುವುದಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಿಸಿದ್ದಾರೆ.

- Advertisement -

ಬಿಹಾರದಲ್ಲಿ ಚುನಾವಣಾ ಕೆಲಸಗಳನ್ನು ಮೇಲ್ವಿಚಾರಣೆ ಮಾಡಲು ಧರ್ಮೇಂದ್ರ ಪ್ರಧಾನ್ ಅವರಿಗೆ ಕೇಂದ್ರ ಸಚಿವ ಸಿ.ಆರ್ ಪಾಟೀಲ್ ಮತ್ತು ಉತ್ತರ ಪ್ರದೇಶದ ಮಾಜಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸಹಾಯ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇನ್ನು, 2026ರಲ್ಲಿ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಉಸ್ತುವಾರಿಯಾಗಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನು ನೇಮಿಸಲಾಗಿದೆ. ಅವರಿಗೆ ಮಾಜಿ ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ದೇಬ್ ನೆರವು ನೀಡಲಿದ್ದಾರೆ. ಅಂತೆಯೇ, ತಮಿಳುನಾಡಿಗೆ ಬಿಜೆಪಿ ಶಾಸಕ ಬಿಜಯಂತ್ ಪಾಂಡಾ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಅವರಿಗೆ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಸಹಾಯ ಮಾಡಲಿದ್ದಾರೆ.

ಈ ಲೇಖನ ಓದಿದ್ದೀರಾ?: ಜಿಎಸ್‌ಟಿ 2.0 | ವಸ್ತುಗಳ ಬೆಲೆಯೇ 50% ಕಡಿತ; ತಪ್ಪು ಲೆಕ್ಕ ಹೇಳಿ ಪೇಚಿಗೆ ಸಿಲುಕಿದ ಬಿಜೆಪಿ ಸಂಸದ

ಪ್ರಧಾನ್ ಮತ್ತು ಯಾದವ್ ಅವರು ಚುನಾವಣಾ ಪ್ರಚಾರ ನಡೆಸುವಲ್ಲಿ ಮತ್ತು ತಂತ್ರಗಳನ್ನು ರೂಪಿಸುವಲ್ಲಿ ನಿಪುಣರು ಎಂದು ಹೇಳಲಾಗಿದೆ. ಭೂಪೇಂದ್ರ ಯಾದವ್ ಅವರು 2024ರಲ್ಲಿ ತಮ್ಮ ಚೊಚ್ಚಲ ಲೋಕಸಭಾ ಚುನಾವಣೆಯಲ್ಲಿ ಅಲ್ವಾರ್ ಕ್ಷೇತ್ರದಿಂದ ಗೆದ್ದಿದ್ದಾರೆ. ಅವರು ಈ ಹಿಂದೆ, ಬಿಹಾರ (2015), ಮಧ್ಯಪ್ರದೇಶ (2023) ಹಾಗೂ ಮಹಾರಾಷ್ಟ್ರ (2024), ಒಡಿಶಾ (2024) ಚುನಾವಣೆಗಳಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ಜವಾಬ್ಧಾರಿಯನ್ನು ನಿರ್ವಹಿಸಿದ್ದಾರೆ.

ಸಂಬಲ್ಪುರ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಧರ್ಮೇಂದ್ರ ಪ್ರಧಾನ್, ಉತ್ತರ ಪ್ರದೇಶ (2022) ಮತ್ತು ಕರ್ನಾಟಕ (2023), ಹರಿಯಾಣ (2024) ಚುನಾವಣೆಗಳಲ್ಲಿ ಬಿಜೆಪಿ ಉಸ್ತುವಾರಿಯಾಗಿದ್ದರು. ಉತ್ತರ ಪ್ರದೇಶ ಮತ್ತು ಹರಿಯಾಣವನ್ನು ಬಿಜೆಪಿ ಗೆದ್ದರೆ, ಕರ್ನಾಟಕವನ್ನು ಹೀನಾಯವಾಗಿ ಸೋತಿತು.

ಭೂಪೇಂದ್ರ ಯಾದವ್ ಅವರು ಕಡೆಯದಾಗಿ 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ನಿರ್ವಹಿಸಿದ್ದರು. ಧರ್ಮೇಂದ್ರ ಪ್ರಧಾನ್ ಮತ್ತು ಬಿಪ್ಲಬ್ ದೇವ್ ಅವರು ಹರಿಯಾಣ ಚುನಾವಣೆಯಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ಮತ್ತು ಸಹ-ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದಾಗ್ಯೂ, ಈ ರಾಜ್ಯಗಳಲ್ಲಿ ‘ವೋಟ್‌ ಚೋರಿ’ (ಮತಗಳವು) ನಡೆದಿದೆ ಎಂದು ಇತ್ತೀಚೆಗೆ ವಿಪಕ್ಷಗಳು ಗಂಭೀರ ಆರೋಪ ಮಾಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...