ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ನಾಲ್ಕು ರಾಜ್ಯಗಳಿಗೆ ಬಿಜೆಪಿಯು ಉಸ್ತುವಾರಿಗಳ ನೇಮಕ ಮಾಡಿದೆ.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ಭೂಪೇಂದ್ರ ಯಾದವ್ ಅವರನ್ನು ಕ್ರಮವಾಗಿ ರಾಜಸ್ಥಾನ ಮತ್ತು ಮಧ್ಯ ಪ್ರದೇಶದ ವಿಧಾನಸಭಾ ಚುನಾವಣೆಗಳಿಗೆ ಪಕ್ಷದ ಉಸ್ತುವಾರಿಯಾಗಿ ನೇಮಿಸಿದೆ.
ಈ ಸುದ್ದಿ ಓದಿದ್ದೀರಾ? ಎನ್‌ಎಸ್‌ಯುಐಗೆ ಎಐಸಿಸಿ ಉಸ್ತುವಾರಿಯಾಗಿ ಕನ್ನಯ್ಯ ಕುಮಾರ್ ನೇಮಕ
ತೆಲಂಗಾಣ ಮತ್ತು ಛತ್ತೀಸ್‌ಗಢಕ್ಕೆ ಕ್ರಮವಾಗಿ ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಓಂ ಪ್ರಕಾಶ್ ಮಾಥೂರ್ ಅವರನ್ನು ನೇಮಿಸಲಾಗಿದೆ.
ಗುಜರಾತಿನ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಹರಿಯಾಣ ನಾಯಕ ಕುಲದೀಪ್ ಬಿಷ್ಣೋಯ್ ಅವರು ರಾಜಸ್ಥಾನ ಚುನಾವಣೆಗೆ ಸಹ-ಉಸ್ತುವಾರಿಯಾಗಿ ನೇಮಿಸಲಾಗಿದೆ. ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಛತ್ತೀಸ್‌ಗಢದ ಸಹ ಉಸ್ತುವಾರಿ ವಹಿಸಲಾಗಿದೆ.
ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು ಮಧ್ಯಪ್ರದೇಶದ ಸಹ ಉಸ್ತುವಾರಿಯಾಗಲಿದ್ದು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರಿಗೆ ತೆಲಂಗಾಣದ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಮಿಝೋರಂ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ.