ಛತ್ತೀಸ್‌ಘಡ | ಬುಡಕಟ್ಟು ಸಮುದಾಯದ ನಾಯಕ ವಿಷ್ಣುದೇವ್ ಸಾಯಿಗೆ ಒಲಿದ ಮುಖ್ಯಮಂತ್ರಿ ಪಟ್ಟ

Date:

ಛತ್ತೀಸ್‌ಘಡದ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ಸಮುದಾಯದ ನಾಯಕ ವಿಷ್ಣುದೇವ್ ಸಾಯಿ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ.

ರಾಯ್‌ಪುರದಲ್ಲಿ ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಬಿಜೆಪಿ ನೇಮಿಸಿದ್ದ ವೀಕ್ಷಕರ ಅಭಿಪ್ರಾಯದ ಮೇರೆಗೆ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದಿಯೋ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಂತಾಗಿದೆ.

ರಾಯ್‌ಪುರದಲ್ಲಿ ಬಿಜೆಪಿಯಿಂದ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ 52 ವರ್ಷದ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಛತ್ತೀಸ್‌ಘಡ ನೂತನ ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇತ್ತೀಚೆಗಷ್ಟೇ ಮುಕ್ತಾಯಕಂಡ ಛತ್ತೀಸ್‌ಘಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸದೆಯೇ ಚುನಾವಣೆ ಎದುರಿಸಿತ್ತು. ಒಟ್ಟು 90 ಸ್ಥಾನಗಳ ಪೈಕಿ 54 ಸ್ಥಾನಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ವಿಷ್ಣುದೇವ್ ಸಾಯಿ ಅವರು ಈ ಬಾರಿಯ ಚುನಾವಣೆಯಲ್ಲಿ ಕುಂಕುರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ಒಟ್ಟು 87,604 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಕ್ಷೇತ್ರದಲ್ಲಿ ಹಾಲಿ ಶಾಸಕನಾಗಿದ್ದ ಕಾಂಗ್ರೆಸ್‌ನ ಯು ಡಿ ಮಿಂಜ್‌ ಅವರನ್ನು ಸೋಲಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು.

ಮಾಜಿ ಸಿಎಂ ಅಜಿತ್ ಜೋಗಿ ನಂತರ ಅವರು ಛತ್ತೀಸ್‌ಗಢದ ಮೊದಲ ಬುಡಕಟ್ಟು ಸಮುದಾಯದ ಮುಖ್ಯಮಂತ್ರಿಯಾಗಲಿದ್ದಾರೆ. ವಿಷ್ಣುದೇವ್ ಸಾಯಿ 2020ರಿಂದ 2022ರವರೆಗೆ ಛತ್ತೀಸ್‌ಘಡ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ನರೇಂದ್ರ ಮೋದಿಯವರ ಮೊದಲ ಅಧಿಕಾರಾವಧಿಯಲ್ಲಿ ಸಂಸದರಾಗಿದ್ದ ಇವರು, ಕೇಂದ್ರದ ಉಕ್ಕಿನ ಖಾತೆಯ ರಾಜ್ಯ ಸಚಿವರಾಗಿದ್ದರು. 16ನೇ ಲೋಕಸಭಾ ಚುನಾವಣೆಯಲ್ಲಿ ಛತ್ತೀಸ್‌ಗಢದ ರಾಯಗಢ ಕ್ಷೇತ್ರದಿಂದ ಗೆದ್ದು, ಲೋಕಸಭಾ ಸದಸ್ಯರಾಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನಾರೋಗ್ಯ ಹಿನ್ನೆಲೆ; ರಾಹುಲ್ ಗಾಂಧಿ ಕೇರಳ ಚುನಾವಣಾ ಪ್ರಚಾರ ರದ್ದು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 22...

ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

'ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ನ ಪ್ರಣಾಳಿಕೆ'...

ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು...

‘ನಾವು ಮತ ಹಾಕುತ್ತೇವೆ, ಆದರೆ ಬಿಜೆಪಿಗಲ್ಲ’; 1,200 ಕುಟುಂಬಗಳು ಹೀಗೆ ಹೇಳಿದ್ದೇಕೆ?

ನಾವು ಒಡೆದ ಮನೆಯಲ್ಲಿ ಬದುಕುತ್ತಿದ್ದೇವೆ. ಬಿಜೆಪಿ ಸರ್ಕಾರ ನಮ್ಮ ಮನೆಗಳನ್ನು ಒಡೆದುರುಳಿಸಿದೆ....