ಮೋದಿ ಗೆಲುವಿಗಾಗಿ ರಾಮಮಂದಿರಕ್ಕೆ ಬಿಜೆಪಿಯೇ ಬಾಂಬ್ ಹಾಕಬಹುದು: ಬಿ.ಆರ್‌ ಪಾಟೀಲ್

Date:

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಗೆಲ್ಲಿಸಲು ಬಿಜೆಪಿಗರೇ ರಾಮಮಂದಿರದ ಮೇಲೆ ಬಾಂಬ್‌ ಹಾಕಬಹುದು ಎಂದು ಕಾಂಗ್ರೆಸ್ ಶಾಸಕ ಬಿ.ಆರ್‌ ಪಾಟೀಲ್‌ ಹೇಳಿದ್ದಾರೆ.

ಬಿ.ಆರ್‌ ಪಾಟೀಲ್‌ ಅವರ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, “ಮೋದಿ ಮುಂದಿನ ಲೋಕಸಭಾ ಚುನಾವಣೆ ಗೆಲ್ಲೋದಕ್ಕೆ ರಾಮಮಂದಿರದ ಮೇಲೆ ತಾವೇ ಬಾಂಬ್‌ ಹಾಕಿ, ಮುಸಲ್ಮಾನರ ಮೇಲೆ ಆರೋಪ ಹೊರಿಸಿ ಹಿಂದುಗಳನ್ನು ಒಂದುಗೋಡಿಸಿ ಚುನಾವಣೆ ಗೆಲ್ಲುವ ಸಾಧ್ಯತೆಗಳಿವೆ. ಇದಕ್ಕೂ ಅವರ ಹೇಸುವುದಿಲ್ಲ” ಎಂದು ಬಿ.ಆರ್‌ ಪಾಟೀಲ್ ಹೇಳಿದ್ದಾರೆ.

ಆ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ ಕರ್ನಾಟಕ, “ಹಿಂದು ಧರ್ಮದ ಬುನಾದಿಯನ್ನೇ ಪ್ರಶ್ನಿಸಲು ಹೊರಟ ಕಾಂಗ್ರೆಸ್ಸಿಗರು ಈಗಲೇ ರಾಮಮಂದಿರದ ಮೇಲೆ ಕಾಕದೃಷ್ಟಿ ಬೀರಿದ್ದಾರೆ. ರಾಮಮಂದಿರವನ್ನೇ ಅಲುಗಾಡಿಸಿ ಹಿಂದೂ-ಮುಸ್ಲಿಂ ದಂಗೆಯೆಬ್ಬಿಸಿ ಅದನ್ನು ಸರ್ಕಾರದ ತಲೆಗೆ ಕಟ್ಟಲು ಕಾಂಗ್ರೆಸ್ ಈಗಾಗಲೇ ಸಜ್ಜಾಗಿರುವ ವಿಚಾರವನ್ನು ಬಿ.ಆರ್ ಪಾಟೀಲರು ಬಾಯಿ ತಪ್ಪಿ ಹೇಳಿದ್ದಾರೆ” ಎಂದು ಪ್ರತ್ಯಾರೋಪ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2024ರ ಮೊಲದ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಅದೇ ವರ್ಷದ ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸುವುದಾಗಿ ಬಿಜೆಪಿ ಹೇಳಿದೆ. “ತನ್ನ ಸರ್ಕಾರದ ವೈಫಲ್ಯಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುವ ತಂತ್ರವಾಗಿ ಬಿಜೆಪಿ ರಾಮಮಂದಿರವನ್ನು ಬಳಸುತ್ತಿದೆ” ಎಂದು ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಆರೋಪಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...