ಚಿತ್ರ ಪ್ರಸಂಗ | ನಾಗ್ಪುರದಲ್ಲಿ ಬಿಜೆಪಿ ಅಭ್ಯರ್ಥಿ ಮೋದಿಯೋ? ಗಡ್ಕರಿಯೋ?

Date:

2024ರ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇನ್ನೆರಡು ದಿನಗಳಲ್ಲಿ (ಏಪ್ರಿಲ್ 19) ನಡೆಯಲಿದೆ. ಮಹಾರಾಷ್ಟ್ರದ ನಾಗ್ಪುರ ಕ್ಷೇತ್ರದಲ್ಲಿಯೂ ಅಂದು ಮತದಾನ ನಡೆಯಲಿದೆ. ಪ್ರಚಾರಕ್ಕೆ ಬುಧವಾರ (ಏ.17) ತೆರೆಬೀಳಲಿದೆ. ಹೀಗಾಗಿ, ಕ್ಷೇತ್ರದಲ್ಲಿ ಎಲ್ಲ ಪಕ್ಷಗಳ ಪ್ರಚಾರದ ಅಬ್ಬರ ತಾರಕ್ಕೇರಿದೆ.

- Advertisement -

‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಶಿವಸೇನೆಯ (ಉದ್ದವ್ ಬಣ) ವಿಕಾಶ್‌ ಠಾಕ್ರೆ ಕಣದಲ್ಲಿದ್ದಾರೆ. ಬಿಜೆಪಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪರ್ಧಿಸಿದ್ದಾರೆ. ನಾಗ್ಪುರ ಕ್ಷೇತ್ರದಲ್ಲಿ ಗಡ್ಕರಿ 3ನೇ ಬಾರಿಗೆ ಕಣಕ್ಕಿಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ನಾಗ್ಪುರದ ನಾನಾ ಪ್ರದೇಶಗಳಲ್ಲಿ ಬಿಜೆಪಿ ಪ್ರಚಾರ ಪೋಸ್ಟರ್‌ಗಳನ್ನು ರಾರಾಜಿಸುತ್ತಿವೆ. ಕುತೂಹಲಕಾರಿ ವಿಷಯವೆಂದರೆ, ಆ ಎಲ್ಲ ಪೋಸ್ಟರ್, ಫ್ಲೆಕ್ಸ್‌, ಬ್ಯಾನರ್‌ಗಳಲ್ಲಿ ಮೋದಿ ಫೋಟೋಗಳೇ ತುಂಬಿವೆ. ಇಲ್ಲಿಯೂ ಗಡ್ಕಿಯವರ ಚಿತ್ರ ಕಾಣಿಸುತ್ತಲೇ ಇಲ್ಲ.

modi nagpur2

2014 ಮತ್ತು 2019ರಲ್ಲಿ ನಗ್ಪುರದಲ್ಲಿ ಸ್ಪರ್ಧಿಸಿ ಗೆದ್ದಿದ್ದ ಗಡ್ಕರಿ, ಈಗ ಮತ್ತೆ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಆದರೂ, ಅವರ ತಮ್ಮ ಹೆಸರಿನಲ್ಲಿ ಪ್ರಚಾರ ಮಾಡುತ್ತಿಲ್ಲ ಎಂಬುದನ್ನು ಈ ಚಿತ್ರಗಳು ಹೇಳುತ್ತಿವೆ. ಇಡೀ ಕ್ಷೇತ್ರದಲ್ಲಿ ಗಡ್ಕರಿ ಅವರ ಚಿತ್ರಗಳು ಕಾಣದಾಗಿವೆ. ಎಲ್ಲೆಡೆ ಮೋದಿ ಚಿತ್ರ ಬೃಹದಾಕಾರದಲ್ಲಿ ರಾರಾಜಿಸುತ್ತಿವೆ.

modi nagpur6

ನಗ್ಪುರದಲ್ಲಿ ಹಾಕಲಾಗಿರುವ ಬಿಜೆಪಿಯ ಎಲ್ಲ ಪೋಸ್ಟರ್‌ಗಳಲ್ಲಿ’ಮೋದಿ ಗ್ಯಾರಂಟಿ’ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಉಲ್ಲೇಖಿಸಲಾಗಿದೆ. ಇಂತಹ ಪೋಸ್ಟರ್‌ಗಳು ನಗರದ ಕಟೋಲ್ ನಾಗ್‌ಪುರ ರಸ್ತೆ, ಅಗ್ರಸೇನ್ ಚೌಕ್, ವಾರ್ಧಾ ರಸ್ತೆ ಹಾಗೂ ನಗರದ ಇತರ ಜನನಿಬಿಡ ಸ್ಥಳಗಳಲ್ಲಿ ಹೇರಳವಾಗಿ ಕಾಣಿಸುತ್ತಿವೆ.

modi nagpur1

ಗಡ್ಕರಿ ಅವರು ಭಾರೀ ಜನಪ್ರಿಯ ವ್ಯಕ್ತಿಯಾಗಿದ್ದರೂ ಕೂಡ ಅವರ ಚಿತ್ರಗಳು ಎಲ್ಲಿಯೂ ಕಾಣಿಸುತ್ತಿಲ್ಲ. ಅವರ ಹೆಸರಿನಲ್ಲಿ ನಾಗ್ಪುರದಲ್ಲಿ ಪ್ರಚಾರವೂ ನಡೆಯುತ್ತಿರುವಂತೆ ಕಾಣಣುತ್ತಿಲ್ಲ. ಹೀಗಾಗಿ, ಕ್ಷೇತ್ರದ ಜನರಲ್ಲಿ ತಮ್ಮ ಕ್ಷೇತ್ರದಲ್ಲಿನ ಅಭ್ಯರ್ಥಿ ಯಾರು ಎಂಬ ಗೊಂದಲು ಸೃಷ್ಟಿಯಾಗಿದೆ.

modi nagpur3

“ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಿದ್ದಾರೆ? ನರೇಂದ್ರ ಮೋದಿಯೋ ಅಥವಾ ನಿತಿನ್ ಗಡ್ಕರಿಯೋ? ಎಂಬುದು ನಮಗೆ ಖಚಿತವಾಗಿ ತಿಳಿಯುತ್ತಿಲ್ಲ. ಗಡ್ಕರಿ ಅವರು 10 ವ‍ರ್ಷದಿಂದ ಸಂಸದರಾಗಿದ್ದರೂ, ಅವರು ಎಲ್ಲಿಯೂ ಕಾಣುತ್ತಿಲ್ಲ” ಎಂದು ಕ್ಷೇತ್ರದ ಮತದಾರರು ಹೇಳುತ್ತಿದ್ದಾರೆ.

modi nagpur5

ಚಿತ್ರ ಕೃಪೆ: ದಿ ವೈರ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...