ಬಿಜೆಪಿ ಜಾತಿ ಲೆಕ್ಕಾಚಾರ: ಒಬಿಸಿ ಮುಖಂಡನಿಗೆ ವಿಪಕ್ಷ ನಾಯಕನ ಪಟ್ಟ?

Date:

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಿಸಲಾಗಿದೆ. ಆ ಮೂಲಕ ಲಿಂಗಾಯತರನ್ನು ಹಿಡಿದಿಡುವ ಪ್ರಯತ್ನವನ್ನು ಬಿಜೆಪಿ ಹೈಕಮಾಂಡ್‌ ಮಾಡಿದೆ. ಅದೇ ರೀತಿಯಲ್ಲಿ, ಹಿಂದುಳಿದ ವರ್ಗಗಳ ಮತದಾರರನ್ನು ಸೆಳೆಯಲು ಒಕ್ಕಲಿಗ ಸಮುದಾಯದ ನಾಯಕನೊಬ್ಬನನ್ನು ವಿಧಾನಸಭೆ ವಿಪಕ್ಷ ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಅದರಲ್ಲೂ ಆರ್‌ಎಸ್‌ಎಸ್‌ ಹಿನ್ನೆಲೆ ಮತ್ತು ಸೈದ್ಧಾಂತಿಕತೆ ಇರುವವರನ್ನೇ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

- Advertisement -

ಡಿಸೆಂಬರ್ 4ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ. ಅದಕ್ಕೂ ಮುನ್ನ ನವೆಂಬರ್ 17ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಕೇಂದ್ರ ವೀಕ್ಷಕರು ಭಾಗವಹಿಸಲಿದ್ದಾರೆ. ಎಲ್ಲ 66 ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಿ, ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ನಿರ್ಧಾರ ತೆಗೆದುಕೊಳ್ಳುವ ಸಂಭವವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಲ್ಲ ಶಾಸಕರಂತೆ ತಾನೂ ಕೂಡ ಪ್ರತಿಪಕ್ಷ ನಾಯಕನ ರೇಸ್‌ನಲ್ಲಿದ್ದೇನೆಂದು ಒಕ್ಕಲಿಗ ಸಮುದಾಯಕ್ಕೆ ಸೇರಿದ ಮಾಜಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿಕೊಂಡಿದ್ದಾರೆ. ಅಲ್ಲದೆ, ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿ ಬಂದಿದ್ದಾರೆ. ಮತ್ತೊಬ್ಬ ಒಕ್ಕಲಿಗ ಮುಖಂಡ ಆರ್ ಅಶೋಕ್ ಅವರ ಹೆಸರೂ ಕೂಡ ವಿಪಕ್ಷ ನಾಯಕನ ರೇಸ್‌ನಲ್ಲಿ ಕೇಳಿಬಂದಿದೆ.

ಆದರೆ, ಒಕ್ಕಲಿಗ ನಾಯಕ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದರಿಂದ ಆ ಸಮುದಾಯದವರನ್ನು ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಕಡಿಮೆ ಎನ್ನುವ ಮಾತುಗಳೂ ಕೂಡ ಬಿಜೆಪಿಯಲ್ಲಿವೆ.

ಇನ್ನು, ಹಿಂದುಳಿದ ಬಿಲ್ಲವ ಸಮುದಾಯದ ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಬಿಲ್ಲವರ ಪ್ರಾಬಲ್ಯ ಹೆಚ್ಚಾಗಿದ್ದು, ಅವರನ್ನು ಕಡೆಗಣಿಸಲಾಗದು ಎಂಬ ಮಾತುಗಳಿವೆ. ಜೊತೆಗೆ ಸುನೀಲ್‌ ಕುಮಾರ್ ಬ್ರಾಹ್ಮಣರಲ್ಲೂ ಗುರುತಿಸಿಕೊಳ್ಳುತ್ತಿದ್ದು, ಅದು ಈಗ ನೆರವಿಗೆ ಬರಬಹುದು ಎನ್ನಲಾಗುತ್ತಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಲ್ಲವ ಸಮುದಾಯವು ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. ಹೀಗಾಗಿ, ಸುನೀಲ್ ಕುಮಾರ್ ಅವರನ್ನು ಪ್ರತಿಪಕ್ಷ ನಾಯಕನಾಗಿ ನೇಮಿಸಿದರೆ, ಬಿಲ್ಲವ ಮತಗಳು ಮತ್ತೆ ಬಿಜೆಪಿಗೆ ಮರಳಬಹುದು ಎನ್ನುವುದು ಬಿಜೆಪಿ ಲೆಕ್ಕಾಚಾರ ಎನ್ನಲಾಗಿದೆ.

‘ವಿರೋಧ ಪಕ್ಷದ ನಾಯಕ ಕಾವಲು ನಾಯಿ ಇದ್ದಂತೆ, ಅರ್ಹರಿಗೆ ಆ ಹುದ್ದೆ ನೀಡಬೇಕು. ಜಾತಿಯ ಆಧಾರದ ಮೇಲೆ ವಿಪಕ್ಷ ನಾಯಕನನ್ನು ನೇಮಕ ಮಾಡುವುದನ್ನು ನಾನು ಒಪ್ಪುವುದಿಲ್ಲ. ಅಂತಹ ನೇಮಕದಿಂದ ತಾತ್ಕಾಲಿಕವಾಗಿ ಮಾತ್ರ ಪಕ್ಷಕ್ಕೆ ಪ್ರಯೋಜನವಾಗಬಹುದು’ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.

ಈ ಎಲ್ಲ ಚರ್ಚೆಗಳ ನಡುವೆ ಬಿಜೆಪಿ ಹೈಕಮಾಂಡ್ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ವಿಪಕ್ಷ ನಾಯಕನ ನೇಮಕದ ಬಗ್ಗೆ ಚರ್ಚಿಸುತ್ತಿದೆ. ಅಂತಿಮ ಆಯ್ಕೆಯು ಅವರ ತಂತ್ರಗಾರಿಕೆಯನ್ನು ಅವಲಂಬಿಸಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...