ಆರ್‌ಎಸ್‌ಎಸ್ ಹೆಸರು ದುರ್ಬಳಕೆ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

Date:

ಲೋಕಸಭೆ ಚುನಾವಣೆಗೂ ಮುನ್ನ ಆಡಳಿತ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರ ಜೊತೆಗಿನ ಸಂಘಟನೆಯೊಂದು ಆರ್‌ಎಸ್‌ಎಸ್‌ ಹೆಸರನ್ನು ದುರುಪಯೋಗ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ. ಹಾಗೆಯೇ ಕಾಂಗ್ರೆಸ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

- Advertisement -

ಬಿಜೆಪಿಯ ರಾಷ್ಟ್ರೀಯ ಸಂಘಟನೆಯ ಕಾರ್ಯದರ್ಶಿ ಅರುಣ್ ಸಿಂಗ್, ಸಂಜಯ್ ಮಯೂಖ್ ಮತ್ತು ಓಂ ಪಾಠಕ್ ಸೇರಿದಂತೆ ಬಿಜೆಪಿ ನಾಯಕರ ನಿಯೋಗ ಚುನಾವಣಾ ಸಮಿತಿಯನ್ನು ಸಂಪರ್ಕಿಸಿ ಈ ಸಂಬಂಧ ದೂರು ಸಲ್ಲಿಸಿದ್ದಾರೆ. ‘ನಕಲಿ’ ಸಂಘಟನೆಯ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡುವಂತೆ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಇದನ್ನು ಓದಿದ್ದೀರಾ?   ಆರ್‌ಎಸ್‌ಎಸ್‌-ಬಿಜೆಪಿ ವಿಷದಂತೆ, ವಿಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಈ ಆರೋಪದ ಬಗ್ಗೆ ಕಾಂಗ್ರೆಸ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆರ್‌ಎಸ್‌ಎಸ್‌ನ ಹೆಸರನ್ನು ನೋಂದಾಯಿಸದೇ ಇರುವ ಅಸಿಸ್ಟೆಂಟ್ ರಿಜಿಸ್ಟ್ರಾರ್ ಆಫ್ ಸೊಸೈಟಿಗಳ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ತನ್ನ ಅರ್ಜಿಯನ್ನು ವಜಾಗೊಳಿಸಿದ್ದರೂ, ಗೊಂದಲ ಸೃಷ್ಟಿಸಲು ಸಂಘಟನೆಯು ಕಾನೂನುಬಾಹಿರವಾಗಿ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಅರುಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ 1925 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಾವಣೆಯಾಗಿದೆ ಎಂದಿದ್ದಾರೆ.

“ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಆಜ್ಞೆಯ ಮೇರೆಗೆ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಹೆಸರಿನಲ್ಲಿ ನಕಲಿ ಸಂಘಟನೆಯನ್ನು ಸೃಷ್ಟಿಸಲಾಗಿದೆ. ಗೊಂದಲವನ್ನು ಸೃಷ್ಟಿಸಲು ಮತ್ತು ದೇಶದ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಸಿಂಗ್ ಆರೋಪಿಸಿದ್ದಾರೆ.

ಕಾಂಗ್ರೆಸ್‌ನ ಸೇವಾದಳದ ಮುಖ್ಯಸ್ಥರು ಈ “ನಕಲಿ” ಸಂಘಟನೆಯ ಮುಖ್ಯಸ್ಥರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿಯನ್ನು ಸೋಲಿಸಬೇಕು ಎಂದು ಹೇಳಿಕೊಂಡು ಈ ಸಂಘಟನೆಯು ಜನರನ್ನು ತಲುಪುತ್ತಿದೆ ಎಂದು ಸಿಂಗ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...