ಡಿಕೆಶಿ, ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ

Date:

  • ಬಿಜೆಪಿಯ ಎರಡು ಪ್ರತ್ಯೇಕ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ
  • ಮತದಾರರ ಮೇಲೆ ಪ್ರಭಾವ ಬೀರಿದ ಆರೋಪ ಹೊತ್ತ ಡಿಕೆಶಿ, ಜಾಕಿರ್‌ ಹುಸೇನ್

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಎಸ್‌ಡಿಪಿಐ ಮುಖಂಡನ ವಿರುದ್ದ ರಾಜ್ಯ ಬಿಜೆಪಿ ನೀಡಿದ್ದ ದೂರನ್ನು ಚುನಾವಣಾ ಆಯೋಗ ದಾಖಲಿಸಿಕೊಂಡಿದೆ.

ಮಂಗಳವಾರ ಮಂಡ್ಯ ಜಿಲ್ಲೆಯ ಬೇವಿನಹಳ್ಳಿಯಲ್ಲಿ ಕಾಂಗ್ರೆಸ್‌ನ ʼಪ್ರಜಾಧ್ವನಿʼ ಯಾತ್ರೆ ನಡೆದ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಕಲಾವಿದರತ್ತ ಹಣ ಎಸೆದಿದ್ದರು. ‌ಆ ಮೂಲಕ ಅವರು ಚುನಾವಣಾ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆಂದು ಬಿಜೆಪಿ ಆರೋಪಿಸಿದೆ.

ಡಿಕೆಶಿ ಜೊತೆಗೆ ಶ್ರೀರಂಗಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡರ ವಿರುದ್ಧವೂ ಕ್ರಮ ಕೈಗೊಳ್ಳಲು ಬಿಜೆಪಿ ರಾಜ್ಯ ಸಮಿತಿ ಆಗ್ರಹಿಸಿದೆ. ಈ ವಿಚಾರವಾಗಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಭಾರತೀಯ ಜನತಾ ಪಕ್ಷ ಮನವಿ ಸಲ್ಲಿಸಿದೆ.

ಪಕ್ಷದ ಪ್ರಚಾರ ಕಾರ್ಯದಲ್ಲಿದ್ದ ಶಿವಕುಮಾರ್, ಕಲಾವಿದರು ಹಾಗೂ ಜನರತ್ತ 500ರ ನೋಟುಗಳನ್ನು ಎಸೆದು ಮತದಾರರ ಮೇಲೆ ಪ್ರಭಾವ ಬೀರಲು ಅವರು ಮುಂದಾಗಿದ್ದಾರೆ ಎಂದು ದೂರಿನಲ್ಲಿ ಗಮನ ಸೆಳೆಯಲಾಗಿದೆ.

ಎರಡನೇ ದೂರು:
ಚಿತ್ರದುರ್ಗ ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ಜಾಕೀರ್ ಹುಸೇನ್ ವಿರುದ್ಧವೂ ಬಿಜೆಪಿ ಆಯೋಗಕ್ಕೆ ದೂರು ದಾಖಲಿಸಿದೆ.

ಶಾಂತಿ ಕದಡುವ, ದ್ವೇಷ ಹರಡುವ ಮತ್ತು ಮಾನಹಾನಿ ಮಾಡುವ ಉದ್ದೇಶದ ಹೇಳಿಕೆಯನ್ನು ಜಾಕಿರ್ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮುಸ್ಲಿಮರ ಮೀಸಲಾತಿ ರದ್ದು ಮಾಡಿದ ಸಂಬಂಧ ನಡೆದ ಪ್ರತಿಭಟನೆಯಲ್ಲಿ ಜಾಕೀರ್ ಹುಸೇನ್,“ನಮ್ಮ ಹಕ್ಕನ್ನು ಹೀನಾಯವಾಗಿ ಕಸಿದುಕೊಳ್ಳಲಾಗಿದೆ. ನಮ್ಮ ಹಕ್ಕನ್ನು ವಾಪಸ್ ಕೊಡದಿದ್ದರೆ ಸಿಎಂ ಬೊಮ್ಮಾಯಿಯವರ ಬಟ್ಟೆ ಬಿಚ್ಚಿಸುತ್ತೇವೆ” ಎಂದು ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ʼಹಿಜಾಬ್, ಆಜಾನ್‌ಗೆ ತಲೆ ಕೊಟ್ಟೆವು. ಮೀಸಲಾತಿ ವಿಚಾರದಲ್ಲಿ ತಲೆ ಹೋದರೂ ಚಿಂತೆಯಿಲ್ಲ. ಜೈಲಿಗೆ ಹೋದರೂ ಚಿಂತೆಯಿಲ್ಲ. ನಾವೆಲ್ಲ ಉಗ್ರವಾಗಿ ಹೋರಾಡುತ್ತೇವೆʼಎಂದು ಎಸ್‌ಡಿಪಿಐ ನಾಯಕ ಹೇಳಿದ್ದಾರೆ ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಶಾಂತಿಗೆ ಹಾನಿ ಉಂಟು ಮಾಡುವ ಮತ್ತು ದ್ವೇಷ ಹರಡುವ ಉದ್ದೇಶದ ಈ ಮಾತುಗಳನ್ನು ಗಮನಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಕೋರಲಾಗಿದೆ.

ಈ ಸುದ್ದಿ ಓದಿದೀರಾ? :ಗೊಂದಲ ಗಲಭೆ ಇಲ್ಲದ ಚುನಾವಣೆ ನಡೆಯಲಿ: ಶೋಭಾ ಕರಂದ್ಲಾಜೆ

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಈ ದೂರು ದಾಖಲಾಗಿದೆ. ಅಂತಿಮವಾಗಿ ಈ ಇಬ್ಬರೂ ನಾಯಕರ ವಿರುದ್ದ ಕ್ರಮಕ್ಕೆ ಬಿಜೆಪಿ ಆಯೋಗವನ್ನು ಒತ್ತಾಯಿಸಿದೆ.

ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಲು ತೆರಳಿದ್ದ ಬಿಜೆಪಿ ನಿಯೋಗದಲ್ಲಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ, ಜಿಲ್ಲಾ ವಕ್ತಾರ ರಾಘವೇಂದ್ರ ರಾವ್ ಅವರಿದ್ದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್ಐ ನೇಮಕಾತಿ ಅಕ್ರಮ: ತನಿಖೆಗೆ ಸಜ್ಜಾದ ಸರ್ಕಾರ

ಬಿಜೆಪಿ ಅಕ್ರಮದ ಬೇಟೆ ಆರಂಭಿಸಿದ ಕಾಂಗ್ರೆಸ್ ಪಿಎಸ್ಐ ನೇಮಕ ಅಕ್ರಮ ತನಿಖೆಗೆ ಸಿದ್ಧತೆ ಪೊಲೀಸ್...

ಗ್ಯಾರಂಟಿ ಜಾರಿಗೆ ಅಭಿವೃದ್ಧಿ ಅನುದಾನಗಳಿಗೆ ಕತ್ತರಿ ಹಾಕಬೇಡಿ : ಮಾಜಿ ಸಿಎಂ ಬೊಮ್ಮಾಯಿ

ಹಿಂದಿನ ಸರ್ಕಾರದ ಜನಪರ ಯೋಜನೆ ಮುಂದುವರೆಸಲು ಸಿಎಂಗೆ ಮನವಿ ಸಿದ್ದರಾಮಯ್ಯಗೆ ಪತ್ರ ಮೂಲಕ...

ಮಳೆಹಾನಿ | ಪರಿಹಾರ ಕ್ರಮ ತ್ವರಿತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ

67 ಮಂದಿ ಪ್ರಾಣಹಾನಿ ಆಗಿದ್ದು, 60 ಮಂದಿಯ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ 487...

ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ನಾವೇ ಖರೀದಿಸುತ್ತೇವೆ: ಸಚಿವ ಮುನಿಯಪ್ಪ

ಘೋಷಿತ ಐದೂ ಗ್ಯಾರಂಟಿಗಳನ್ನು ಹಂತಹಂತವಾಗಿ ನೀಡುತ್ತೇವೆ ನಮ್ಮ ಮಾತಿಗೆ ನಾವು ಎಂದಿಗೂ ಬದ್ಧರಾಗಿರುತ್ತೇವೆ...