ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

Date:

  • ಸಿದ್ದರಾಮಯ್ಯ ವಿರುದ್ದ ಎರಡು ದೂರು ದಾಖಲು
  • ಚುನಾವಣಾ ಅಧಿಕಾರಿಗೆ ಪತ್ರ ಸಲ್ಲಿಸಿದ ಬಿಜೆಪಿ ನಾಯಕರು

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಜೆಪಿ, “ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರ ಬಿಳಗುಲಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡುತ್ತಿದ್ದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದೆ.

“ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ಸಂಜೆ 4.15ರ ಸುಮಾರಿಗೆ ಪ್ರಚಾರ ಸ್ಥಳದಲ್ಲಿದ್ದ ವಾಲಗ ಮತ್ತು ಡೋಲು ಬಾರಿಸುವವರಿಗೆ ಸುಮಾರು 1 ಸಾವಿರ ರೂಪಾಯಿ ನೀಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ” ಎಂದು ಬಿಜೆಪಿ ಮನವಿ ಮಾಡಿದೆ.

ಈ ಸಂಬಂಧ ಮಾರ್ಚ್ 30ನೇ ತಾರೀಖು ಬಿಜೆಪಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ. ಹಣ ಹಂಚಿರುವ ವಿಡಿಯೋದ ಲಿಂಕ್ ವಿವರವನ್ನು ಮನವಿ ಪತ್ರದಲ್ಲಿ ನೀಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ವಕ್ತಾರ ಡಾ. ರಾಘವೇಂದ್ರ ರಾವ್, ಕಾನೂನು ಪ್ರಕೋಷ್ಠದ ಸದಸ್ಯ ಶಿವಕುಮಾರ್ ಅವರ ನಿಯೋಗವು ಈ ದೂರುಗಳನ್ನು ಸಲ್ಲಿಸಿದೆ.ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಚುನಾವಣಾ ಆಯೋಗದ ವಿಶ್ವಾಸಾರ್ಹತೆಗೆ ಧಕ್ಕೆ ಬರುವಂತೆ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತೊಂದು ದೂರು ದಾಖಲಿಸಿದೆ.

“ಕಾಂಗ್ರೆಸ್ ಕಟ್ಟಿಹಾಕುವುದಕ್ಕಾಗಿಯೇ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳನ್ನು ಚುನಾವಣಾ ಆಯೋಗ ನಿಯೋಜಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದು, ಇದು ಸಂವಿಧಾನಾತ್ಮಕ ಸಂಸ್ಥೆಯ ವಿರುದ್ಧ ಆಧಾರರಹಿತ ಆರೋಪವಾಗಿದೆ. ಇದರಿಂದ ಜನರ ಮನಸ್ಸಿನಲ್ಲಿ ಸಂಸ್ಥೆಯ ವಿರುದ್ಧ ನಕಾರಾತ್ಮಕ ಅಭಿಪ್ರಾಯ ಮೂಡಿಸುವಂತಿದೆ” ಎಂದು ಬಿಜೆಪಿ ಸೂಕ್ತ ಕ್ರಮಕ್ಕೆ ಕೋರಿದೆ.

ಈ ಸುದ್ದಿ ಓದಿದ್ದೀರಾ? ‘ಸಾಮ್ರಾಟ’ನ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ಪದ್ಮನಾಭನಗರದಿಂದ ಪಿಜಿಆರ್ ಕಣಕ್ಕೆ?

ಸುರ್ಜೇವಾಲಾ ವಿರುದ್ಧ ದೂರು

“ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ. ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕರ್ನಾಟಕ ಚುನಾವಣೆ ಸಂಬಂಧ ನೀಡಿದ ಹೇಳಿಕೆಯಲ್ಲಿ “ಬಿಜೆಪಿಯ 40% ಸರ್ಕಾರ ರಾಜ್ಯವನ್ನು ನಿರ್ಲಜ್ಜವಾಗಿ ಲೂಟಿ ಮಾಡುತ್ತಿದೆ” ಎಂಬುದಾಗಿ ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿ ಮತದಾರರಲ್ಲಿ ತಪ್ಪು ಮಾಹಿತಿ ನೀಡಿ, ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಸುರ್ಜೇವಾಲಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕೋರಲಾಗಿದೆ” ಎಂದು ಬಿಜೆಪಿ ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ...

ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ ಮೊದಲನೇ ಕಂತಿನಲ್ಲಿ...