ಇಂದು, ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

Date:

  • ಏಪ್ರಿಲ್ 6 ಅಥವಾ 7ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ
  • ಮಾಲಕರೆಡ್ಡಿ ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿದೆ. ಇದರ ಭಾಗವಾಗಿಯೇ ಪಕ್ಷ ಏಪ್ರಿಲ್‌ 1 ಮತ್ತು 2ರಂದು ರಾಜ್ಯ ಕೋರ್‌ ಕಮಿಟಿ ಸಭೆ ನಡೆಸುತ್ತಿದೆ.

ದೇಶದ ರಾಜಕೀಯ ಇತಿಹಾಸದಲ್ಲೇ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ವೋಟಿಂಗ್‌ ವಿಧಾನ ಅನುಸರಿಸಿದೆ. ಬೆಂಗಳೂರಿನ ಪ್ಯಾಲೇಸ್ ಮೈದಾನದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ವೋಟಿಂಗ್ ನಡೆದಿದೆ.

ಪಕ್ಷದ ಪದಾಧಿಕಾರಿಗಳ ಮತ ಮತ್ತು ಗೆಲ್ಲುವ ಸಾಮರ್ಥ್ಯ ಎರಡರ ಕುರಿತು ಬಿಜೆಪಿ ನಾಯಕರು ಚರ್ಚೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬಿಜೆಪಿ ಪದಾಧಿಕಾರಿಗಳ ಬ್ಯಾಲೆಟ್‌ ಪೇಪರ್‌ ವೋಟಿಂಗ್‌ ಎಣಿಕೆ ಬಳಿಕ ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯ ನಾಯಕರು ಜಿಲ್ಲಾ ಕೋರ್‌ ಕಮಿಟಿ ಸದಸ್ಯರ ಜೊತೆಗೆ ಸಭೆ ನಡೆಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಕೋರ್ ಕಮಿಟಿ ನಾಯಕರು ಸಭೆಯಲ್ಲಿ ಭಾಗಿಯಾಲಿದ್ದಾರೆ. ಅಥಣಿ ಟಿಕೆಟ್‌ ವಿಚಾರವಾಗಿ ಮಹೇಶ್ ಕುಮಟಳ್ಳಿ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷದ ಹಿರಿಯ ನಾಯಕರು ಎಚ್ಚರಿಕೆ ನೀಡಲಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 6 ಅಥವಾ 7ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಈ ಸುದ್ದಿ ಓದಿದ್ದೀರಾ? ಶಿಕಾರಿಪುರದಿಂದಲೇ ವಿಜಯೇಂದ್ರ ಕಣಕ್ಕೆ : ಮಗನ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದ ಬಿಎಸ್‌ವೈ

ಬಿಜೆಪಿಗೆ ಮತ್ತೊಂದು ಶಾಕ್

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ದಿನದಿಂದ ದಿನಕ್ಕೆ ಹಿನ್ನಡೆ ಅನುಭವಿಸುತ್ತಿದೆ. ಕೆಲ ದಿನಗಳ ಹಿಂದೆ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಮತ್ತೋರ್ವ ಮಾಜಿ ಸಚಿವ, ಯಾದಗಿರಿಯ ಪ್ರಭಾವಿ ನಾಯಕ ಎ ಬಿ ಮಾಲಕರೆಡ್ಡಿ ಬಿಜೆಪಿ ತೊರೆಯಲು ಸಿದ್ಧರಾಗಿದ್ದಾರೆ.

ಮಾಲಕರೆಡ್ಡಿ ಅವರು ಇಂದು ಮಧ್ಯಾಹ್ನದ ನಂತರ ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ತಮ್ಮ ಪುತ್ರಿಯನ್ನು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿಸಲು ಮುಂದಾಗಿದ್ದಾರೆ. ಮಾರ್ಚ್‌ 31ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಲಕರೆಡ್ಡಿ ಭೇಟಿಯಾಗಿದ್ದಾರೆ. ಶೀಘ್ರದಲ್ಲಿಯೇ ಮರಳಿ ಕಾಂಗ್ರೆಸ್ ಸೇರಲಿದ್ದಾರೆ.

ಗೋಪಾಲಕೃಷ್ಣ ಇಂದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಗೋಪಾಲಕೃಷ್ಣ ಇಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಎನ್ ವೈ ಗೋಪಾಲಕೃಷ್ಣ ಅವರು ಶುಕ್ರವಾರ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸದಲ್ಲಿ ಭೇಟಿಯಾಗಿ ರಾಜೀನಾಮೆ ನೀಡಿದ್ದರು. ಇಂದು ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗುವ ಸಾಧ್ಯತೆ ಇದೆ. ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು ಚುನಾವಣಾ...

ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು...