ಲೋಕಸಭೆ ಚುನಾವಣೆ ಗೆಲ್ಲಲು ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕಿದ ಕಾಂಗ್ರೆಸ್‌: ಬಿಜೆಪಿ ಆರೋಪ

Date:

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಕೋಮುಗಲಭೆ, ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕುವ ಕೆಲಸಗಳಲ್ಲಿ ಭಾಗಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, “ರಾಜ್ಯದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಮುಂದಿರುವ ಕಾರ್ಯತಂತ್ರಗಳು; ಕೋಮುಗಲಭೆ ಸೃಷ್ಟಿಸುವುದು, ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕುವುದು, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು, ವಾಕ್‌ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು, ಐಟಿ ಸೆಲ್‌ಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸುವುದು, ಭಾರತೀಯ ಪರಂಪರೆಯನ್ನು ಅವಮಾನಿಸುವುದು” ಎಂದು ಟೀಕಿಸಿದೆ.

“ದೇಶದಲ್ಲಿ ಮತ್ತೊಮ್ಮೆ ಬಿಜೆಪಿಗೆ ದಾಖಲೆಯ 400 ಸ್ಥಾನಗಳು ಸಿಗಲಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ. ಆದರೂ ಕಾಂಗ್ರೆಸ್ಸಿನವರು ಅಭಿವೃದ್ಧಿ ಮಾಡುವುದು ಬಿಟ್ಟು ದಿಗಿಲು ಬಡಿದ ಮಂಗಗಳಂತೆ ಸರ್ಕಸ್‌ ಮಾಡುತ್ತಿದ್ದಾರೆ” ಎಂದು ಲೇವಡಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತಿಲಕ ಕಂಡರೆ ಭಯ, ಕೇಸರಿ ಕಂಡರೆ ಕಳವಳ, ಹನುಮ ಧ್ವಜ ಕಂಡರೆ ಭೀತಿ, ರಾಮಮಂದಿರ ಎಂದರೆ ಕಿರಿಕಿರಿ, ಹಿಂದೂಗಳು ಎಂದರೆ ದ್ವೇಷ ಸಾಧಿಸುವ ಕಲೆಯನ್ನು ಇತ್ತೀಚೆಗೆ ಭಯಾನಕವಾಗಿ ರೂಢಿಸಿಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದೆ.

“ಸಿಎಂ ಸಿದ್ದರಾಮಯ್ಯ ಸಾಹೇಬರಿಗೆ ಟೋಪಿ ಕಂಡರೆ ಇರುವ ವ್ಯಾಮೋಹ ಹಿಂದೂ ನಂಬಿಕೆಗಳ ಮೇಲೆ ಇಲ್ಲದೆ ಇರುವುದು ಹಿಂದೂಗಳಿಗೆ ಮಾಡುತ್ತಿರುವ ದ್ರೋಹ, ವಂಚನೆ!. ಚುನಾವಣೆಗೂ ಮುನ್ನ ಟೆಂಪಲ್ ರನ್ ಮಾಡಿದ ನಕಲಿ ಹಿಂದೂ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಆದ ಕೂಡಲೇ ಹಿಂದೂಗಳ ಮೇಲೇಕೆ ಇಷ್ಟೊಂದು ದ್ವೇಷ ಕಾರುತ್ತಿದಾರೆ ಎನ್ನುವ ಪ್ರಶ್ನೆ ನಾಡಿನ ಜನತೆಯನ್ನು ಕಾಡುತ್ತಿದೆ!” ಎಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ" ಎಂದು...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...