ತಾಲಿಬಾನಿ ಮನಸ್ಥಿತಿಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ರೀತಿಯ ಹತ್ಯೆಗಳು ಹೆಚ್ಚಾಗಿವೆ: ಸಿ ಟಿ ರವಿ

Date:

“ಯುವ ಬ್ರಿಗೇಡ್‌ ತಾಲೂಕು ಸಂಚಾಲಕ ವೇಣುಗೋಪಾಲ್‌ ಕೊಲೆ ಆರೋಪಿಗಳಿಗೆ ಕಾಂಗ್ರೆಸ್ ನಾಯಕರ ನಂಟು ಇದೆ. ಹೀಗಾಗಿ ನ್ಯಾಯಸಮ್ಮತ ತನಿಖೆ ನಡೆಸಬೇಕು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಗ್ರಹಿಸಿದರು.

ಮೈಸೂರು ಜಿಲ್ಲೆ ತಿ. ನರಸೀಪುರದಲ್ಲಿ ಕಳೆದ ಭಾನುವಾರ ಕೊಲೆಯಾಗಿದ್ದ ಯುವ ಬ್ರಿಗೇಡ್ ಸಂಘಟನೆಯ ತಾಲೂಕು ಸಂಚಾಲಕ ವೇಣುಗೋಪಾಲ್‌ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಸದಸ್ಯರ ತಂಡವು ಮಂಗಳವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಅವರು ಮಾತನಾಡಿದರು.

“ತಾಲಿಬಾನಿ ಮನಸ್ಥಿತಿಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಈ ರೀತಿಯ ಹತ್ಯೆಗಳು ಹೆಚ್ಚಾಗಿವೆ. ಹಿಂದುತ್ವದ ಪರವಾಗಿ ಮಾತನಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜೈನಮುನಿ ಕಾಮಕುಮಾರ ನಂದಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರವು ವ್ಯವಸ್ಥಿತವಾಗಿ ದಿಕ್ಕು ತಪ್ಪಿಸುತ್ತಿದೆ. ಜೈನ ಮುನಿ ಸಾಲ ನೀಡಿದ ವಿಚಾರಕ್ಕೆ ಹತ್ಯೆ ನಡೆದಿದೆ ಎಂದು ಬಿಂಬಿಸಲಾಗುತ್ತಿದೆ. ದಿನಕ್ಕೆ ಒಂದು ಹೊತ್ತು ತಿನ್ನುವ, ಅನ್ಯರಿಗೆ ದಾನ ಮಾಡುವ ಮನಸ್ಥಿತಿಯ ಮುನಿಗಳು ಬಡ್ಡಿ ವ್ಯವಹಾರ ಮಾಡಲು ಸಾಧ್ಯವೇ” ಎಂದು ಪ್ರಶ್ನಿಸಿದರು.

ಹತ್ಯೆ ಆರೋಪಿಗಳಲ್ಲಿ ಒಬ್ಬರು ಮೈಸೂರು ಮಹಾನಗರ ಪಾಲಿಕೆಯ ಸದಸ್ಯರ ಸಹೋದರ ಎಂಬ ಮಾಹಿತಿ ಕುರಿತು ಪ್ರತಿಕ್ರಿಯೆ ನೀಡಿ, “ಆರೋಪಿಗಳು ಯಾರೇ ಆಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಆ ಆರೋಪಿ ತಂದೆ ಕೂಡ ಕಾಂಗ್ರೆಸ್‌ ಮುಖಂಡರು” ಎಂದು ಸಿ ಟಿ ರವಿ ಹೇಳಿದರು.

ನಿಯೋಗದಲ್ಲಿ ಶಾಸಕ ಡಾ. ಸಿ ಎನ್ ಅಶ್ವತ್ಥನಾರಾಯಣ, ಶ್ರೀವತ್ಸ ಹಾಗೂ ಬಿಜೆಪಿ ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇವರು ಭಯಂಕರ ರಾಷ್ಟ್ರವಾದಿಗಳು,,ಇವರ ಆಸಕ್ತಿ ವಿಷಯಗಳು ಎಂಥವು ನೋಡಿ,,, ಹತ್ಯೆ ಆದವನು ಒಬ್ಬ ವ್ಯಕ್ತಿ ಸಂಘಟನೆಯ ಕಾರ್ಯಕರ್ತ,,ಹತ್ಯೆಯ ಆರೋಪ ಹೊತ್ತಿರುವವನು ತಮ್ಮ ಪಕ್ಷದ ಕಾರ್ಯಕರ್ತ,,ಈ ಘಟನೆಯನ್ನು ರಾಜಕೀಕರಣಗೊಳಿಸಿ ಬೇಳೆ ಬೇಯಿಸಿಕೊಳ್ಳಲು ಹವಣಿಸುವ ನಕಲಿ ದೇಶಭಕ್ತರಿಂದ ಸಾಮಾಜಿಕ ಸೌಹಾರ್ದ ಉಳಿಯಲು ಸಾಧ್ಯವೇ,, ಡಿಜಲ್ ಪೆಟ್ರೋಲ್ ಬೆಲೆ ಏರಿಕೆ ದಿನಸಿ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿದೆ, ಗ್ಯಾಸ್ ಸಿಲಿಂಡರ್ ದರ ಏರಿಕೆ, ದಾಖಲೆ ನಿರ್ಮಿಸಿದ ತರಕಾರಿ ಬೆಲೆ, ದಾಖಲೆ ಸೃಷ್ಠಿಸಿದ ನಿರುದ್ಯೋಗ, ಜನರನ್ನು ಮೂರ್ಖರನ್ನಾಗಿ ಮಾಡುವ ಫೇಕ್ ನ್ಯೂಸ್ ಫ್ಯಾಕ್ಟರಿಗಳು,,, ಇಂಥಾ ಗಂಭೀರ ಸಮಸ್ಯೆಗಳ ಸತ್ಯ ಶೋಧನೆ ಮಾಡಿ 122, ಕೋಟಿ ಹಿಂದುಗಳಿಗೆ ನ್ಯಾಯ ಒದಗಿಸುವ ಕೆಲಸ ಬಿಟ್ಟು ಇಂಥಾ ಕೆಲಸ ಮಾಡುವ ಕಾರಣಕ್ಕಾಗಿ ಜನರು ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ,,ಈ ಸುಮಾರು ಚಟ ಹೀಗೆ ಮುಂದುವರೆದರೆ ಮುಂದೆ ಬರುವ ಲೋಕಸಭಾ ಚುನಾವಣೆಯಲ್ಲಿ ಸಹ ಮತದಾರರು ಚೊಂಬೆ ಕೊಡುವರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...