ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ ಎಂದು ಬಿಜೆಪಿಗರನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ ಎಂದು ಜರೆದಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

‘ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ’ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನು ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1.ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ” ಎಂದರು.

“ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ; ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕರೆ

“ನಿನ್ನೆ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...