ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ: ಸಿದ್ದರಾಮಯ್ಯ ಕಿಡಿ

Date:

ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌

- Advertisement -

ಹಾಸನದಲ್ಲಿ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ, ಹೊಸ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಈ ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ. ಇಡೀ ದೇಶದಲ್ಲಿ 18% GDP ಬೆಳವಣಿಗೆ ಆಗಿ ದೇಶದ ಅಭಿವೃದ್ಧಿಗೆ ಅತಿ ಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ನಮ್ಮದಾಗಿದೆ. ಈ ಬೆಳವಣಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಫಲ” ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

“ಹಾಸನ ಜಿಲ್ಲೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದಕ್ಕಾಗಿ 166 ಕೋಟಿ ಕೊಟ್ಟಿದ್ದೇವೆ. ಈ ಮಟ್ಟದ ಹಣ ಹಾಸನ ಮಹಿಳೆಯರಿಗೆ ಉಳಿತಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಾಸನ ಜಿಲ್ಲೆಯ ಮಹಿಳೆಯರಿಗೆ 477 ಕೋಟಿ ರೂಪಾಯಿ ನೀಡಿದ್ದೇವೆ. ಈ ಹಣವೂ ಮಹಿಳೆಯರ ಖಾತೆಗೆ ನೇರವಾಗಿ ಹೋಗಿದೆ. ಉಚಿತ ವಿದ್ಯುತ್ ನಿಂದಾಗಿ ಹಾಸನ ಜಿಲ್ಲೆಯೊಂದರಲ್ಲೇ 89 ಕೋಟಿ ರೂಪಾಯಿ ಹಣ ಜನರಿಗೆ ಉಳಿತಾಯವಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 135.33 ಕೋಟಿ ರೂ. ಹಣ ಹಾಸನ ಜಿಲ್ಲೆಗೆ ನೀಡಲಾಗಿದೆ. ಯುವನಿಧಿಯಲ್ಲಿ ಮಾಡಿರುವ ಹಣ ಕೂಡ ಜಿಲ್ಲೆಯ ಯುವಜನತೆಗೆ ಉಳಿತಾಯವಾಗಿದೆ. ಹೀಗೆ ಪ್ರತೀ ಒಂದೊಂದು ಗ್ಯಾರಂಟಿ ಯೋಜನೆಯಲ್ಲಿ ಜಿಲ್ಲೆಯ ಜನರಿಗೆ ನೂರಾರು ಕೋಟಿ ಹಣ ಉಳಿತಾಯವಾಗಿದೆ” ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

“ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿ ಕಂಡುಕೊಳ್ಳುತ್ತಿದ್ದಾರೆ. ಈ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ನಾನಾ ಡ್ರಾಮಗಳನ್ನು ಸೃಷ್ಟಿಸುತ್ತಿದೆ, ಭರ್ಜರಿ ನಾಟಕ ಆಡುತ್ತಿದೆ” ಎಂದು ಟೀಕಿಸಿದರು.

“ಹಾಸನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಏರ್ ಪೋರ್ಟ್ ನಿರ್ಮಾಣಕ್ಕೆ ರಾಜ್ಯದ ಪಾಲಿನ ಹಣವನ್ನು ನಿರಂತರವಾಗಿ ನೀಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶ ಕೊಡದೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು” ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಶಾಸಕರಾದ ಶಿವಲಿಂಗೇಗೌಡರು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...