ಬಿಜೆಪಿ ಮೊದಲ ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್ ವೈ ಗೋಪಾಲಕೃಷ್ಣ

Date:

  • ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ
  • ಮರಳಿ ಮಾತೃ ಪಕ್ಷಕ್ಕೆ ಸೇರಿದ ಹಿರಿಯ ನಾಯಕ

ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಬೆನ್ನಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪಕ್ಷಗಳಿಂದ ಪಕ್ಷಕ್ಕೆ ಜಿಗಿಯುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದೀಗ ಶಾಸಕ ಎನ್.ವೈ ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಯ ಮೊದಲ ವಿಕೆಟ್‌ ಪತನವಾಗಿದೆ.

ಇಂದು ಬೆಳಗ್ಗೆ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ನಿವಾಸಕ್ಕೆ ಭೇಟಿ ನೀಡಿದ್ದ ಬಳ್ಳಾರಿ ಜಿಲ್ಲೆಯ ಕೂಡ್ಲಿಗೆ ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಎನ್ ವೈ ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎನ್ ವೈ ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್‌ ಪಕ್ಷದವರೇ ಆಗಿದ್ದು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಸತತ 5 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 2013ರ ಚುನಾವಣೆಯಲ್ಲಿ ನೇರ್ಲಗುಂಟೆ ಎಸ್‌ ತಿಪ್ಪೇಸ್ವಾಮಿ ವಿರುದ್ಧ ಪರಾಭವಗೊಂಡಿದ್ದರು.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಶಾಸಕರಾಗಿದ್ದ ಶ್ರೀರಾಮುಲು ಸಂಸದ ಸ್ಥಾನಕ್ಕೆ ಆಯ್ಕೆಯಾದಾಗ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಿತು. ಈ ವೇಳೆ ಸ್ಪರ್ಧೆ ಮಾಡಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದರು.

ಈ ಸುದ್ದಿ ಓದಿದ್ದೀರಾ?: `ಯಾವ ಮೋದಿನೂ ಇಲ್ಲ, ಪಾದಿನೂ ಇಲ್ಲ’ ಬಿಜೆಪಿ ಶಾಸಕನ ಆಡಿಯೋ ವೈರಲ್

ಆದರೆ, ಕಳೆದ ವಿಧಾನಸಭೆ ಚುನಾವಣೆ ವೇಳೆ ಮೊಳಕಾಲ್ಮೂರು ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಸಿಗದೇ ಇರುವುದರಿಂದ ಬಂಡಾಯವೆದ್ದು, ಬಿಜೆಪಿ ಸೇರಿದ್ದ ಇವರು ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

ಮುಂಬರುವ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ ಬಯಸಿದ್ದು, ಹೈ ಕಮಾಂಡ್‌ ಇದಕ್ಕೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದ ಶ್ರೀರಾಮುಲು ಅವರ ಬದ್ಧ ವೈರಿ ನೇರ್ಲಗುಂಟೆ ಎಸ್‌ ತಿಪ್ಪೇಸ್ವಾಮಿ ಅವರು ಬಿಜೆಪಿ ಸೇರಿದ್ದರಿಂದ ಕಾಂಗ್ರೆಸ್‌ಗೆ ಈ ಭಾಗದಲ್ಲಿ ಅಲ್ಪ ಹಿನ್ನೆಡೆಯುಂಟಾಗಿತ್ತು.

ಆದರೆ, ಇದೇ ಭಾಗದ ಪ್ರಭಾವಿ ನಾಯಕರಾಗಿದ್ದ ಮಾಜಿ ಶಾಸಕರಾದ ಗೋಪಾಲಕೃಷ್ಣ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರಿಂದ, ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ. ಹಿರಿಯ ನಾಯಕರ ನಡುವೆ ತೀವ್ರ ಪೈಪೋಟಿ ನಡೆಯುವ ಸಾಧ್ಯತೆ ಇದೆ.

ಇದೇ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೀಶ್‌ ಬಾಬು ಹಾಗೂ ಹಿರಿಯ ನಾಯಕ ವಿ ಎಸ್‌ ಉಗ್ರಪ್ಪ ಟಿಕೆಟ್‌ ಬಯಸಿದ್ದರು. ಎನ್‌ ವೈ ಗೋಪಾಲಕೃಷ್ಣ ಅವರ ಆಗಮದಿಂದ ಇವರಿಬ್ಬರಿಗೂ ಟಿಕೆಟ್‌ ತಪ್ಪಿದಂತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ...

ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ ಮೊದಲನೇ ಕಂತಿನಲ್ಲಿ...