ಬಿಜೆಪಿ ಮಾಜಿ ಶಾಸಕ ಸಿ ಎಂ ನಿಂಬಣ್ಣವರ ನಿಧನ; ಸೋಮವಾರ ಅಂತ್ಯಕ್ರೀಯೆ

Date:

Advertisements

ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ ಎಂ ನಿಂಬಣ್ಣವರ ​(76) ಭಾನುವಾರ ನಿಧನರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ 1947ರಲ್ಲಿ ಜನಿಸಿದ್ದಾರೆ. ಹುಬ್ಬಳ್ಳಿಗೆ ಮೃತದೇಹ ಸಾಗಿಸಲಿದ್ದು, ಸೋಮವಾರ ಮಧ್ಯಾಹ್ನ 3 ಗಂಟಗೆ ಅಂತ್ಯಕ್ರೀಯೆ ನಡೆಯಲಿದೆ.

ಸಿ ಎಂ ನಿಂಬಣ್ಣವರ್ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ 1947ರಲ್ಲಿ ಜನಿಸಿದದ್ದು, ಧಾರವಾಡದ ಜೆಎಸ್‌ಎಸ್‌ ಬನಶಂಕರಿ ಆರ್ಟ್ಸ್ ಕಾಲೇಜ್‌ನಿಂದ ಇಂಗ್ಲಿಷ್‌ ವಿಷಯದಲ್ಲಿ ಬಿಎ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂಎ ಹಾಗೂ ಎಲ್‌ಎಲ್‌ಬಿ ಪದವಿ, ಮೈಸೂರು ವಿವಿಯಿಂದ ಬಿ.ಎಡ್‌ ಪದವಿ ಪಡೆದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧೆ, ಹಸು ಸಾವು ಪ್ರಕರಣ; ಎಇಇ ಅಮಾನತು

ನಂತರ ಕಲಘಟಗಿ ತಾಲೂಕಿನ ಮಿಶ್ರೀಕೋಟಿಯಲ್ಲಿರುವ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯಲ್ಲಿ 1970ರಲ್ಲಿ ಇಂಗ್ಲಿಷ್‌ ಶಿಕ್ಷಕರಾಗಿ, ಬಳಿಕ ಪದೋನ್ನತಿ ಹೊಂದಿ ಮುಖ್ಯ ಶಿಕ್ಷಕರಾಗಿದ್ದರು. ಬಳಿಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ನಿವೃತ್ತರಾಗಿದ್ದರು.1995 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಸಕ್ರೀಯ ರಾಜಕಾರಣದಲ್ಲಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

Download Eedina App Android / iOS

X