ಹಣದ ಕೊರತೆಯಿಂದ ಕಾಂಗ್ರೆಸ್‌ ಗೋಳಾಡಲಿ ಎನ್ನುವುದೇ ಮೋದಿ ಸರ್ಕಾರದ ದುರುದ್ದೇಶ: ಸಿದ್ದರಾಮಯ್ಯ

Date:

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ.

- Advertisement -

ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಕಾಂಗ್ರೆಸ್‌ನ ಖಾತೆಗಳನ್ನು ಸ್ಥಗಿತಗೊಳಿಸಿ, ₹210 ಕೋಟಿ ದಂಡ ವಿಧಿಸಿರುವುದನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನರೇಂದ್ರ ಮೋದಿ ಅವರ ಹಿಂದಿರುವ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

“ಚುನಾವಣಾ ಬಾಂಡ್‌ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಸಿಎಂ ಕೋರಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

“ಪ್ರಧಾನಿ ನರೇಂದ್ರಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...